Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:13 - ಕನ್ನಡ ಸಮಕಾಲಿಕ ಅನುವಾದ

13 ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅನನೀಯ ಪ್ರತ್ಯುತ್ತರವಾಗಿ, “ಪ್ರಭೂ, ಈ ಮನುಷ್ಯ ಜೆರುಸಲೇಮಿನಲ್ಲಿ ತಮ್ಮ ಭಕ್ತರಿಗೆ ಎಷ್ಟು ಕೇಡುಮಾಡಿದ್ದಾನೆಂಬುದನ್ನು ಅನೇಕರ ಬಾಯಿಂದ ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಕ್ಕೆ ಅನನೀಯನು - ಕರ್ತನೇ, ಆ ಮನುಷ್ಯನು ಯೆರೂಸಲೇವಿುನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಅನನೀಯನು, “ಪ್ರಭುವೇ, ಜೆರುಸಲೇಮಿನಲ್ಲಿರುವ ನಿನ್ನ ಪವಿತ್ರ ಜನರಿಗೆ ಈ ಮನುಷ್ಯನು ಮಾಡಿದ ಅನೇಕ ಕೆಟ್ಟಕೃತ್ಯಗಳ ಬಗ್ಗೆ ಜನರು ನನಗೆ ಹೇಳಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ ಅನನಿಯಾನ್, “ಧನಿಯಾ, ಜೆರುಜಲೆಮಾತ್ ಹೊತ್ತ್ಯಾ ತುಜ್ಯಾ ಲೊಕಾಕ್ನಿ ಹ್ಯಾ ಮಾನ್ಸಾನ್ ಕರಲ್ಯಾ ಬುರ್ಶ್ಯಾ ಕಾಮಾಂಚ್ಯಾ ವಿಶಯಾತ್ ಲೊಕಾನಿ ಸಾಂಗ್ತಲೆ ಮಿಯಾ ಆಯಿಕ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:13
31 ತಿಳಿವುಗಳ ಹೋಲಿಕೆ  

ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ಹೀಗೆ ದೇವರಾತ್ಮರು ನನ್ನನ್ನು ಎತ್ತಿಕೊಂಡು ಹೋದರು. ನಾನು ಕಹಿತನ ಮತ್ತು ಕೋಪದ ಆತ್ಮದಿಂದ ಮುನ್ನಡೆದೆನು. ಆದರೆ ಯೆಹೋವ ದೇವರ ಕೈ ನನ್ನ ಮೇಲೆ ಬಲವಾಗಿತ್ತು.


ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,


ಫಿಲೊಲೊಗ, ಯೂಲ್ಯಳು, ನೇರ್ಯ ಮತ್ತು ಅವನ ಸಹೋದರಿ, ಒಲುಂಪ ಮತ್ತು ಅವರೊಂದಿಗಿರುವ ಎಲ್ಲಾ ಭಕ್ತರಿಗೂ ವಂದನೆಗಳು.


ಕರ್ತನಲ್ಲಿ ದೇವಜನರಿಗೆ ಯೋಗ್ಯವಾಗಿರುವ ರೀತಿಯಲ್ಲಿ ಆಕೆಯನ್ನು ಸ್ವೀಕರಿಸಿ, ಆಕೆಯು ಅನೇಕರಿಗೂ ನನಗೂ ವಿಶೇಷವಾದ ರೀತಿಯಲ್ಲಿ ಸಹಾಯ ಮಾಡಿದವಳಾಗಿರುವುದರಿಂದ ನಿಮಗೆ ಯಾವ ಕೊರತೆಗಳಿದ್ದರೂ ಆಕೆಗೆ ಬೇಕಾದದ್ದನ್ನು ಒದಗಿಸಿರಿ.


ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ.


ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ಈ ಮಾರ್ಗದವರನ್ನು ಸಾಯುವಷ್ಟು ಹಿಂಸಿಸಿದೆನು. ಸ್ತ್ರೀಪುರುಷರೆನ್ನದೆ ಅವರನ್ನು ಬಂಧಿಸಿ ಅವರನ್ನು ಸೆರೆಮನೆಗೆ ಹಾಕಿಸುತ್ತಿದ್ದೆನು,


ಪೇತ್ರನು ಬೇರೆ ಬೇರೆ ಕಡೆಗಳಲ್ಲಿ ಪ್ರಯಾಣಮಾಡಿದ ತರುವಾಯ ಲುದ್ದದಲ್ಲಿಯ ದೇವಭಕ್ತರನ್ನು ಸಂದರ್ಶಿಸಲು ಹೋದನು.


“ತೋಳಗಳ ಮಧ್ಯದಲ್ಲಿ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸುತ್ತೇನೆ. ಆದ್ದರಿಂದ ನೀವು ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಆಗ ಸಮುಯೇಲನು, “ನಾನು ಹೋಗುವುದು ಹೇಗೆ? ಸೌಲನು ಅದನ್ನು ಕೇಳಿದರೆ, ನನ್ನನ್ನು ಕೊಂದುಹಾಕುವನು,” ಎಂದನು. ಅದಕ್ಕೆ ಯೆಹೋವ ದೇವರು, “ನೀನು ಒಂದು ಕಡಸನ್ನು ನಿನ್ನ ಸಂಗಡ ತೆಗೆದುಕೊಂಡುಹೋಗಿ, ‘ನಾನು ಯೆಹೋವ ದೇವರಿಗಾಗಿ ಯಜ್ಞಮಾಡುವುದಕ್ಕೆ ಬಂದೆನು,’ ಎಂದು ಹೇಳಿ,


ಅವನ ಮಾತುಗಳನ್ನು ಕೇಳಿದವರಿಗೆ ಅತ್ಯಾಶ್ಚರ್ಯವಾಯಿತು. ಅವರು, “ಈ ಹೆಸರನ್ನು ಹೇಳುವವರೆಲ್ಲರಿಗೆ ಯೆರೂಸಲೇಮಿನಲ್ಲಿ ತೊಂದರೆಕೊಟ್ಟು ಗೊಂದಲವೆಬ್ಬಿಸಿದವನು ಇವನೇ ಅಲ್ಲವೇ? ಅಂಥವರನ್ನು ಸೆರೆಹಿಡಿದು ಮುಖ್ಯಯಾಜಕರ ಬಳಿಗೆ ಎಳೆದೊಯ್ಯಲು ಇಲ್ಲಿಗೆ ಬಂದವನಲ್ಲವೇ?” ಎಂದು ಪ್ರಶ್ನಿಸಿಕೊಂಡರು.


ಪೇತ್ರನು ಆಕೆಯ ಕೈಯನ್ನು ಹಿಡಿದು ಆಕೆ ಎದ್ದು ನಿಂತುಕೊಳ್ಳುವಂತೆ ಮಾಡಿದನು. ಅನಂತರ ದೇವಭಕ್ತರನ್ನೂ ವಿಧವೆಯರನ್ನೂ ಕರೆದು ಜೀವಂತಳಾದ ಆಕೆಯನ್ನು ಅವರಿಗೆ ಒಪ್ಪಿಸಿಕೊಟ್ಟನು.


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ನಿಮ್ಮಲ್ಲಿ ನಾಚಿಕೆ ಹುಟ್ಟಿಸುವುದಕ್ಕೆ ಇದನ್ನು ಹೇಳುತ್ತೇನೆ. ತನ್ನ ಸಹೋದರನ ನ್ಯಾಯವನ್ನು ವಿವೇಚಿಸಿ ತೀರ್ಮಾನ ಕೊಡುವ ಜ್ಞಾನಿಯು ನಿಮ್ಮಲ್ಲಿ ಒಬ್ಬನಾದರೂ ಇಲ್ಲವೋ?


ದೇವಜನರ ಎಲ್ಲಾ ಸಭೆಗಳಲ್ಲಿರುವಂತೆ, ದೇವರು ಗಲಿಬಿಲಿಯ ದೇವರಲ್ಲ, ಸಮಾಧಾನದ ದೇವರಾಗಿದ್ದಾರೆ.


ಈಗ ದೇವಜನರಿಗೋಸ್ಕರ ಹಣ ಕೂಡಿಸಿಡುವುದನ್ನು ಕುರಿತು: ನಾನು ಗಲಾತ್ಯದ ಸಭೆಗಳಿಗೆ ಹೇಳಿದ್ದನ್ನೇ ನೀವೂ ಮಾಡಿರಿ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು, ಎಫೆಸದಲ್ಲಿರುವ ಭಕ್ತರಿಗೂ ಕ್ರಿಸ್ತ ಯೇಸುವಿನಲ್ಲಿ ನಂಬಿಗಸ್ತರಿಗೂ ಬರೆಯುತ್ತಿರುವುದು:


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ಎಲ್ಲಾ ದೇವಜನರೂ ವಿಶೇಷವಾಗಿ ಕೈಸರನ ಮನೆತನಕ್ಕೆ ಸೇರಿದವರೂ ನಿಮಗೆ ವಂದನೆಗಳನ್ನು ತಿಳಿಸುತ್ತಾರೆ.


ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಿಮ್ಮ ಎಲ್ಲಾ ನಾಯಕರಿಗೆ, ದೇವಜನರಿಗೆ ವಂದನೆಗಳು. ಇಟಲಿಯವರು ನಿಮ್ಮನ್ನು ವಂದಿಸುತ್ತಾರೆ.


ಪ್ರಿಯ ಸ್ನೇಹಿತರೇ, ನಾವು ಹಂಚಿಕೊಳ್ಳುವ ರಕ್ಷಣೆಯ ವಿಷಯದಲ್ಲಿ ನಿಮಗೆ ಬರೆಯುವುದಕ್ಕೆ ಪೂರ್ಣಜಾಗ್ರತೆಯಿಂದ ಪ್ರಯತ್ನ ಮಾಡುತ್ತಿದ್ದಾಗ, ಪರಿಶುದ್ಧರಿಗೆ ಒಂದೇ ಸಾರಿ ಒಪ್ಪಿಸಲಾದ ನಂಬಿಕೆಯನ್ನು ಕಾಪಾಡಿಕೊಳ್ಳುವುದಕ್ಕೆ ನೀವು ಹೋರಾಡಬೇಕೆಂದು ಎಚ್ಚರಿಸಿ ಬರೆಯುವುದು ನನಗೆ ಅವಶ್ಯವೆಂದು ತೋರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು