Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:15 - ಕನ್ನಡ ಸಮಕಾಲಿಕ ಅನುವಾದ

15 ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕರ್ತನು ಅವನಿಗೆ, “ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ, ಅರಸುಗಳಿಗೂ, ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವುದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಪ್ರಭು ಅವನಿಗೆ, “ನೀನು ಹೋಗು, ನನ್ನ ನಾಮವನ್ನು ಅನ್ಯಧರ್ಮದವರಿಗೂ ಅರಸರಿಗೂ ಇಸ್ರಯೇಲಿನ ಜನರಿಗೂ ಪ್ರಕಟಿಸಲು ನಾನು ಆರಿಸಿಕೊಂಡಿರುವ ಸಾಧನ ಅವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ಪ್ರಭುವು ಅನನೀಯನಿಗೆ, “ಹೋಗು! ಮುಖ್ಯವಾದ ಕೆಲಸಕ್ಕಾಗಿ ನಾನು ಸೌಲನನ್ನು ಆರಿಸಿಕೊಂಡಿದ್ದೇನೆ. ಅವನು ನನ್ನ ಬಗ್ಗೆ ರಾಜರುಗಳಿಗೂ ಯೆಹೂದ್ಯರಿಗೂ ಮತ್ತು ಇತರ ಜನಾಂಗಗಳಿಗೂ ತಿಳಿಸಬೇಕಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಖರೆ ಧನಿಯಾನ್ ಅನನಿಯಾಕ್, ಜಾ! ತೆಕಾ ಮಿಯಾ ಮಾಜ್ಯಾ ವಿಶಯಾತ್ ರಾಜಾಕ್ನಿ, ಜುದೆವಾಕ್ನಿ, ಅನಿ ಹುರಲ್ಯಾ ಇಸ್ರಾಯೆಲ್ ಲೊಕಾಕ್ನಿ ಕಳ್ವುತಲ್ಯಾ ಮುಖ್ಯ್ ಕಾಮಾಚೊ ಹತಿಯಾರ್ ಕರುನ್ ಎಚುನ್ ಘೆಟಲ್ಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:15
38 ತಿಳಿವುಗಳ ಹೋಲಿಕೆ  

ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


“ನಾನು ನಿನ್ನನ್ನು ತಾಯಿಯ ಗರ್ಭದಲ್ಲಿ ನಿರ್ಮಿಸುವುದಕ್ಕಿಂತ ಮುಂಚೆಯೇ ನಿನ್ನನ್ನು ತಿಳಿದಿದ್ದೆನು. ನೀನು ಹುಟ್ಟುವುದಕ್ಕಿಂತ ಮುಂಚೆ ನಿನ್ನನ್ನು ಪ್ರತಿಷ್ಠಿಸಿದ್ದೆನು; ನಿನ್ನನ್ನು ಜನಾಂಗಗಳಿಗೆ ಪ್ರವಾದಿಯಾಗಿ ನೇಮಿಸಿದ್ದೇನೆ.”


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


“ಆಗ ಕರ್ತ ಯೇಸುವು, ‘ಹೋಗು, ನಾನು ಯೆಹೂದ್ಯರಲ್ಲದವರ ಬಳಿಗೆ ನಿನ್ನನ್ನು ದೂರಪ್ರದೇಶಗಳಿಗೆ ಕಳುಹಿಸುವೆನು,’ ಎಂದು ನನಗೆ ಹೇಳಿದರು.”


ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನೇ ನಿಮ್ಮನ್ನು ಆರಿಸಿಕೊಂಡಿದ್ದೇನೆ. ನೀವು ಹೋಗಿ ಫಲಕೊಡುವಂತೆಯೂ ನಿಮ್ಮ ಫಲವು ಸ್ಥಿರವಾಗಿರುವಂತೆಯೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗೆ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನು ಕೇಳಿಕೊಂಡರೂ ಅವರು ನಿಮಗೆ ಕೊಡುವರು.


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸರ ಮುಂದೆ ಒಯ್ಯುವರು. ಹೀಗೆ ಅವರಿಗೂ ಯೆಹೂದ್ಯರಲ್ಲದವರಿಗೂ ನೀವು ಸಾಕ್ಷಿಗಳಾಗುವಿರಿ.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ಆಗ ಅಗ್ರಿಪ್ಪನು ಫೆಸ್ತನಿಗೆ, “ಪೌಲನು ನೇರವಾಗಿ ಕೈಸರನಿಗೆ ಬೇಡಿಕೆ ಸಲ್ಲಿಸದಿದ್ದರೆ ಇವನನ್ನು ಬಿಡುಗಡೆ ಮಾಡಬಹುದಾಗಿತ್ತು,” ಎಂದನು.


ಆಗ ಅಗ್ರಿಪ್ಪ ರಾಜನು, “ಈ ಮನುಷ್ಯನು ಹೇಳುವುದನ್ನು ನಾನೂ ಕೇಳಬೇಕೆಂದಿದ್ದೇನೆ,” ಎಂದು ಫೆಸ್ತನಿಗೆ ಹೇಳಿದನು. “ನಾಳೆಯೇ ಪೌಲನ ಬೇಡಿಕೆಯನ್ನು ಕೇಳುವಿರಿ,” ಎಂದು ಫೆಸ್ತನು ಉತ್ತರಕೊಟ್ಟನು.


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ಆಗ ಯೆಹೋವ ದೇವರು ನನಗೆ, “ ‘ನಾನು ಚಿಕ್ಕವನೆಂದು ಹೇಳಬೇಡ.’ ಏಕೆಂದರೆ ನಾನು ನಿನ್ನನ್ನು ಕಳುಹಿಸುವವರೆಲ್ಲರ ಬಳಿಗೆ ನೀನು ಹೋಗಬೇಕು. ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಮಾತನಾಡಬೇಕು.


ಮೂರು ದಿನಗಳಾದ ಮೇಲೆ ಪೌಲನು ಯೆಹೂದ್ಯರ ನಾಯಕರನ್ನು ಕರೆಯಿಸಿದನು. ಅವರೆಲ್ಲರೂ ಬಂದಾಗ ಅವರಿಗೆ, “ನನ್ನ ಸಹೋದರರೇ, ನಮ್ಮ ಜನರಿಗೂ ನಮ್ಮ ಪೂರ್ವಜರಿಗೂ ವಿರೋಧವಾಗಿ ನಾನು ಏನನ್ನೂ ಮಾಡಲಿಲ್ಲ. ಆದರೂ ನನ್ನನ್ನು ಯೆರೂಸಲೇಮಿನಲ್ಲಿ ಬಂಧಿಸಿ ರೋಮನ್ನರ ವಶಕ್ಕೆ ಒಪ್ಪಿಸಲಾಯಿತು.


“ಆಗ ಅವನು, ‘ನಮ್ಮ ಪಿತೃಗಳ ದೇವರು ತಮ್ಮ ಚಿತ್ತವನ್ನು ನೀನು ತಿಳಿದುಕೊಳ್ಳುವುದಕ್ಕಾಗಿಯೂ ನೀತಿವಂತ ಆಗಿರುವ ಒಬ್ಬರನ್ನು ಕಾಣುವುದಕ್ಕಾಗಿಯೂ ಅವರ ಬಾಯಿಂದ ಒಂದು ಮಾತನ್ನು ಕೇಳುವುದಕ್ಕಾಗಿಯೂ ನಿನ್ನನ್ನು ಮುಂದಾಗಿಯೇ ನೇಮಿಸಿದ್ದಾರೆ.


ಆಗ ಅಗ್ರಿಪ್ಪನು, “ನಿನ್ನ ಪರವಾಗಿ ಮಾತನಾಡಲು ನಿನಗೆ ಅಪ್ಪಣೆಯಿದೆ,” ಎಂದು ಪೌಲನಿಗೆ ಹೇಳಿದನು. ಆಗ ಪೌಲನು ಕೈಯೆತ್ತಿ ಹೀಗೆ ಪ್ರತಿವಾದಿಸತೊಡಗಿದನು:


“ಆದ್ದರಿಂದ ದೇವರ ರಕ್ಷಣೆಯು ಯೆಹೂದ್ಯರಲ್ಲದವರಿಗೆ ಒದಗಿ ಬಂದಿದೆ ಎಂಬುದು ನಿಮಗೆ ತಿಳಿದಿರಲಿ. ಅವರು ಅದಕ್ಕೆ ಕಿವಿಗೊಡುವರು,” ಎಂದನು.


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!


ಈ ಕಾರಣದಿಂದ ಯೆಹೂದ್ಯರಲ್ಲದವರಾಗಿರುವ ನಿಮ್ಮ ನಿಮಿತ್ತ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೆಂಬ ನಾನು ಹೇಳುವುದೇನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು