Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:19 - ಕನ್ನಡ ಸಮಕಾಲಿಕ ಅನುವಾದ

19 ತರುವಾಯ ಊಟಮಾಡಿ ಚೇತರಿಸಿಕೊಂಡನು. ಆಗ ಅವನು ಎದ್ದು ನಿಲ್ಲಲು ಶಕ್ತನಾದನು. ದಮಸ್ಕದಲ್ಲಿ ಶಿಷ್ಯರೊಂದಿಗೆ ಸೌಲನು ಹಲವಾರು ದಿನಗಳನ್ನು ಕಳೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ತರುವಾಯ ಊಟಮಾಡಿ ಬಲಹೊಂದಿದನು. ಅವನು ದಮಸ್ಕದಲ್ಲಿದ್ದ ಶಿಷ್ಯರ ಸಂಗಡ ಕೆಲವು ದಿನಗಳು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ತರುವಾಯ ಊಟಮಾಡಿ ಬಲ ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಬಳಿಕ ಅವನು ಊಟಮಾಡಿ ಚೇತರಿಸಿಕೊಂಡನು. ಸೌಲನು ದಮಸ್ಕದಲ್ಲಿ ಯೇಸುವಿನ ಶಿಷ್ಯರೊಂದಿಗೆ ಕೆಲವು ದಿನಗಳವರೆಗೆ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನಾ ತೆನಿ ಜೆವಾನ್ ಕರ್‍ಲ್ಯಾನ್, ತೆಚ್ಯಾ ಮಾನಾ ತೆಕಾ ಬಳ್ ಯೆಲಿ, ಅನಿ ತೊ ಜೆಜುಚ್ಯಾ ಶಿಸಾಂಚ್ಯಾ ವಾಂಗ್ಡಾ ಥೊಡ್ಯಾ ದಿಸಾಂಚ್ಯಾ ಪತರ್ ಧರ್ಮಸ್ಕಾತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:19
11 ತಿಳಿವುಗಳ ಹೋಲಿಕೆ  

ಆದರೆ ಮೊದಲು ದಮಸ್ಕದಲ್ಲಿದ್ದವರಿಗೂ ಆಮೇಲೆ ಯೆರೂಸಲೇಮಿನಲ್ಲಿಯೂ ಯೂದಾಯದ ಎಲ್ಲಾ ಕಡೆಗಳಲ್ಲಿ ಇದ್ದವರಿಗೂ ಯೆಹೂದ್ಯರಲ್ಲದವರಿಗೂ ನಾನು ಬೋಧಿಸಿದೆನು. ಅವರು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು, ಪಶ್ಚಾತ್ತಾಪಕ್ಕೆ ಯೋಗ್ಯ ಕೃತ್ಯಗಳನ್ನು ನಡೆಸಬೇಕೆಂದು ನಾನು ಘೋಷಿಸಿದೆನು.


ಅವನಿಗೆ ನೀರನ್ನು ಕುಡಿಸಿ, ಅಂಜೂರ ಹಣ್ಣಿನ ಉಂಡೆಯನ್ನೂ, ಒಣಗಿದ ಎರಡು ದ್ರಾಕ್ಷಿ ಗೊಂಚಲುಗಳನ್ನೂ ಅವನಿಗೆ ಕೊಟ್ಟರು. ಅವನು ಅವುಗಳನ್ನು ತಿಂದಾಗ ಚೇತರಿಸಿಕೊಂಡನು. ಅವನು ರಾತ್ರಿ ಹಗಲು ಮೂರು ದಿವಸದಿಂದ ರೊಟ್ಟಿ ತಿಂದಿರಲಿಲ್ಲ, ನೀರನ್ನೂ ಕುಡಿದಿರಲಿಲ್ಲ.


ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಅಪೊಸ್ತಲರಾಗಿದ್ದವರ ಬಳಿಗೂ ಹೋಗದೆ, ನಾನು ಅರೇಬಿಯಾಕ್ಕೆ ಹೋದೆನು. ಅನಂತರ ಪುನಃ ದಮಸ್ಕಕ್ಕೆ ಹಿಂದಿರುಗಿದೆನು.


ಅಲ್ಲಿ ಸೌಲನನ್ನು ಭೇಟಿಯಾಗಿ, ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅನಂತರ ಇಡೀ ಒಂದು ವರ್ಷಕಾಲ ಬಾರ್ನಬನು, ಸೌಲನು ಅಲ್ಲಿ ಸಭೆಯವರೊಂದಿಗೆ ಇದ್ದುಕೊಂಡು ಬಹಳ ಜನರಿಗೆ ಬೋಧನೆ ಮಾಡಿದರು. ಶಿಷ್ಯರಿಗೆ ಪ್ರಥಮ ಬಾರಿ “ಕ್ರೈಸ್ತರು” ಎಂಬ ಹೆಸರು ಬಂದದ್ದು ಅಂತಿಯೋಕ್ಯದಲ್ಲಿಯೇ.


ನೀನು ಹೋಗಿ ನಿನ್ನ ಆಹಾರವನ್ನು ಸಂತೋಷದಿಂದ ತಿಂದು ಹರ್ಷ ಹೃದಯದಿಂದ ನಿನ್ನ ದ್ರಾಕ್ಷಾರಸವನ್ನು ಕುಡಿ. ಏಕೆಂದರೆ ನಿನ್ನ ಕೆಲಸಗಳನ್ನು ದೇವರು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ತಕ್ಷಣವೇ, ಸೌಲನ ಕಣ್ಣುಗಳಿಂದ ಪರೆ ಕಳಚಿದಂತಾಗಿ ಅವನಿಗೆ ಪುನಃ ದೃಷ್ಟಿ ಬಂದಿತು. ಅವನು ಎದ್ದು ದೀಕ್ಷಾಸ್ನಾನವನ್ನು ಪಡೆದುಕೊಂಡನು.


ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.


ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು.


ಯೂದಾಯದಲ್ಲಿ ವಾಸಿಸುತ್ತಿದ್ದ ಸಹೋದರರಿಗೆ ಸಹಾಯ ಒದಗಿಸಲು ಅನುಕೂಲಸ್ಥರಾದ ಶಿಷ್ಯರು ತಮ್ಮ ಶಕ್ತ್ಯಾನುಸಾರ ಕೊಡಲು ನಿರ್ಧರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು