Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:27 - ಕನ್ನಡ ಸಮಕಾಲಿಕ ಅನುವಾದ

27 ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದರೆ ಬಾರ್ನಬನು ಅವನನ್ನು ಕೈಹಿಡಿದು, ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ, ಅವನು ದಮಸ್ಕದ ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ, ಕರ್ತನು ಅವನ ಸಂಗಡ ಮಾತನಾಡಿದ್ದನ್ನೂ, ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಪ್ರಚಾರ ಮಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆಗ ಬಾರ್ನಬನು ಅವನನ್ನು ಪ್ರೇಷಿತರ ಬಳಿಗೆ ಕರೆದುಕೊಂಡು ಹೋದನು. ಸೌಲನು ಪ್ರಭುವನ್ನು ಮಾರ್ಗದಲ್ಲಿ ದರ್ಶಿಸಿದ್ದನ್ನೂ ಅವರು ಅವನೊಂದಿಗೆ ಮಾತನಾಡಿದ್ದನ್ನೂ ತಿಳಿಸಿದನು. ಅಲ್ಲದೆ ದಮಸ್ಕಸಿನಲ್ಲಿ ಧೈರ್ಯದಿಂದ ಯೇಸುವಿನ ಹೆಸರಿನಲ್ಲಿ ಬೋಧಿಸಿದ್ದನ್ನೂ ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದರೆ ಬಾರ್ನಬನು ಅವನನ್ನು ಕೈಹಿಡಿದು ಅಪೊಸ್ತಲರ ಬಳಿಗೆ ಕರೆದುಕೊಂಡುಹೋಗಿ ಅವನು ದಾರಿಯಲ್ಲಿ ಕರ್ತನನ್ನು ಕಂಡದ್ದನ್ನೂ ಕರ್ತನು ಅವನ ಸಂಗಡ ಮಾತಾಡಿದ್ದನ್ನೂ ದಮಸ್ಕದೊಳಗೆ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತಾಡಿದ್ದನ್ನೂ ಅವರಿಗೆ ವಿವರವಾಗಿ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆದರೆ ಬಾರ್ನಬನು ಸೌಲನನ್ನು ಸ್ವೀಕರಿಸಿಕೊಂಡು ಅಪೊಸ್ತಲರ ಬಳಿಗೆ ಕರೆದುಕೊಂಡು ಬಂದನು. ಸೌಲನು ದಮಸ್ಕದ ದಾರಿಯಲ್ಲಿ ಪ್ರಭುವನ್ನು ನೋಡಿರುವುದನ್ನೂ ಪ್ರಭುವು ಸೌಲನೊಂದಿಗೆ ಮಾತಾಡಿದ್ದನ್ನೂ ಬಾರ್ನಬನು ಅವರಿಗೆ ವಿವರಿಸಿದನು. ಅಲ್ಲದೆ ಸೌಲನು ದಮಸ್ಕದಲ್ಲಿ ಜನರಿಗೆ ಪ್ರಭುವಿನ ವಿಷಯದಲ್ಲಿ ನಿರ್ಭಯವಾಗಿ ಬೋಧಿಸಿದ್ದನ್ನೂ ಅವರಿಗೆ ತಿಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖರೆ ಬಾರ್ನಾಬಾಸ್ ತೆಕಾ ಮಜತ್ ಕರುಕ್ ಯೆಲೊ ಅನಿ ಅಪೊಸ್ತಲಾಂಚ್ಯಾ ಜಗ್ಗೊಳ್ ಬುಲ್ವುನ್ ಹಾನ್ಲ್ಯಾನ್, ಸಾವ್ಲಾನ್ ದಮಸ್ಕಾಚ್ಯಾ ವಾಟೆರ್ ಧನಿಯಾಕ್ ಬಗಲ್ಲೆ, ಅನಿ ಧನಿಯಾನ್ ತೆಚ್ಯಾ ವಾಂಗ್ಡಾ ಬೊಲಲ್ಲೆ ಬರ್ನಾಬಾಸಾನ್ ತೆಂಕಾ ಸಾಂಗ್ಲ್ಯಾನ್, ತವ್ಡೆಚ್ ನ್ಹಯ್ ಸಾವ್ಲಾನ್ ಧಮಾಸ್ಕಾತ್ ಲೊಕಾಕ್ನಿ ಧನಿಯಾಚ್ಯಾ ವಿಶಯಾತ್ ಧೈರ್‍ಯಾನಿ ಪರ್ಗಟ್ ಕರ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:27
20 ತಿಳಿವುಗಳ ಹೋಲಿಕೆ  

ಸೈಪ್ರಸ್ ಎಂಬಲ್ಲಿ ಹುಟ್ಟಿದ ಒಬ್ಬ ಲೇವಿಯನು ಇದ್ದನು, ಅವನ ಹೆಸರು ಯೋಸೇಫ, ಅಪೊಸ್ತಲರು ಅವನನ್ನು “ಬಾರ್ನಬ” ಎಂದು ಕರೆದರು. ಬಾರ್ನಬ ಅಂದರೆ “ಆದರಣೆಯ ಪುತ್ರನು” ಎಂದು ಅರ್ಥ.


ಕರ್ತದೇವರೇ, ಈಗ ಅವರ ಬೆದರಿಕೆಯನ್ನು ನೋಡಿರಿ; ಬಹುಧೈರ್ಯದಿಂದ ನಿಮ್ಮ ವಾಕ್ಯವನ್ನು ಹೇಳಲು ನಿಮ್ಮ ಸೇವಕರನ್ನು ಬಲಪಡಿಸಿರಿ.


ಪೇತ್ರ, ಯೋಹಾನರ ಧೈರ್ಯವನ್ನು ಅವರು ಕಂಡಾಗ, ಇವರು ವಿದ್ಯೆ ಕಲಿಯದ ಸಾಮಾನ್ಯ ಜನರೆಂದು ತಿಳಿದು ಬಹು ಆಶ್ಚರ್ಯಚಕಿತರಾಗಿ, ಇವರು ಯೇಸುವಿನೊಂದಿಗೆ ಇದ್ದವರು ಎಂಬುದನ್ನು ಗುರುತಿಸಿಕೊಂಡರು.


ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಕಪಟಮಾಡಿದರು. ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಒಳಗಾದನು.


ಸಭೆಯ ಸ್ತಂಭಗಳಂತಿರುವ ನಾಯಕರಾದ ಯಾಕೋಬ, ಪೇತ್ರ ಹಾಗೂ ಯೋಹಾನರು ನನಗೆ ಕೊಡಲಾದ ಕೃಪೆಯನ್ನು ಗ್ರಹಿಸಿಕೊಂಡರು. ಆಗ ಅವರು, ನನಗೂ ಬಾರ್ನಬನಿಗೂ ಅನ್ಯೋನ್ಯತೆಯ ಬಲಗೈಯನ್ನು ಕೊಟ್ಟರು. ಹೀಗೆ ನಾವು ಯೆಹೂದ್ಯರಲ್ಲದವರ ಬಳಿಗೂ ಅವರು ಯೆಹೂದ್ಯರ ಬಳಿಗೂ ಹೋಗುವಂತೆ ತೀರ್ಮಾನವಾಯಿತು.


ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


ಇಲ್ಲವೆ ಉಪಜೀವನಕ್ಕಾಗಿ ನಾನೂ ಮತ್ತು ಬಾರ್ನಬನೂ ಮಾತ್ರವೇ ಕೆಲಸಮಾಡಬೇಕೋ?


ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು.


ಅನಂತರ ಬಾರ್ನಬನು ಸೌಲನನ್ನು ಹುಡುಕುವುದಕ್ಕಾಗಿ ತಾರ್ಸಕ್ಕೆ ಹೋದನು.


ಈ ಸಮಾಚಾರ ಯೆರೂಸಲೇಮಿನ ಸಭೆಯವರಿಗೆ ತಿಳಿಯಿತು. ಅವರು ಬಾರ್ನಬನನ್ನು ಅಂತಿಯೋಕ್ಯಕ್ಕೆ ಕಳುಹಿಸಿಕೊಟ್ಟರು.


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ಗ್ರೀಕ್ ಮಾತನಾಡುವ ಯೆಹೂದ್ಯರೊಂದಿಗೆ ಅವನು ಮಾತನಾಡಿ ಚರ್ಚೆಮಾಡಿದಾಗ, ಅವರು ಅವನನ್ನು ಕೊಲ್ಲಲು ಪ್ರಯತ್ನಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು