Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:3 - ಕನ್ನಡ ಸಮಕಾಲಿಕ ಅನುವಾದ

3 ಸೌಲನು ಪ್ರಯಾಣ ಮಾಡುತ್ತಾ ದಮಸ್ಕಕ್ಕೆ ಸಮೀಪ ಬಂದಾಗ, ಫಕ್ಕನೆ ಪರಲೋಕದಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು, ಫಕ್ಕನೆ ಆಕಾಶದಿಂದ ಒಂದು ಬೆಳಕು ಅವನ ಸುತ್ತಲು ಮಿಂಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವನು ಅಲ್ಲಿಂದ ಪ್ರಯಾಣಮಾಡುತ್ತಾ ದಮಸ್ಕಸ್ ಪಟ್ಟಣವನ್ನು ಸಮೀಪಿಸಿದನು. ಇದ್ದಕ್ಕಿದ್ದಂತೆ ಆಕಾಶದಿಂದ ಬೆಳಕೊಂದು ಮಿಂಚಿ ಅವನ ಸುತ್ತಲೂ ಆವರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಆಕಾಶದೊಳಗಿಂದ ಒಂದು ಬೆಳಕು ಅವನ ಸುತ್ತಲು ವಿುಂಚಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅಂತೆಯೇ ಸೌಲನು ದಮಸ್ಕಕ್ಕೆ ಹೊರಟನು. ಅವನು ಪಟ್ಟಣದ ಸಮೀಪಕ್ಕೆ ಬಂದಾಗ, ಬಹು ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಇದ್ದಕ್ಕಿದ್ದಂತೆ ಅವನ ಸುತ್ತಲೂ ಹೊಳೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತಸೊಚ್ ಸಾವ್ಲು ಧಮಸ್ಕಾಕ್ ಜಾವ್‍ಲಾಲೊ, ತೊ ಶಾರಾಚ್ಯಾ ಜಗ್ಗೊಳ್ ಯೆಲ್ಲ್ಯಾ ತನ್ನಾ,ಎಗ್ದಮ್, ಲೈ ಹೊಳಾವ್ತಲೊ ಎಕ್ ಉಜ್ವೊಡ್ ಮಳ್ಬಾಕ್ನಾ ತೆಚ್ಯಾ ಅಜುಭಾಜುನ್ ಹೊಳಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:3
10 ತಿಳಿವುಗಳ ಹೋಲಿಕೆ  

ಕಟ್ಟಕಡೆಗೆ, ದಿನತುಂಬುವ ಮೊದಲೇ ಹುಟ್ಟಿದವನಂತಿರುವ ನನಗೂ ಕಾಣಿಸಿಕೊಂಡರು.


“ಸುಮಾರು ಮಧ್ಯಾಹ್ನದ ಸಮಯಕ್ಕೆ ನಾನು ದಮಸ್ಕದ ಹತ್ತಿರದಲ್ಲಿದ್ದೆನು. ಇದ್ದಕ್ಕಿದ್ದಂತೆ ಆಕಾಶದಿಂದ ಮಹಾ ಬೆಳಕು ನನ್ನ ಸುತ್ತಲೂ ಹೊಳೆಯಿತು.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ದೇವರು ವಸ್ತ್ರದ ಹಾಗೆ ಬೆಳಕನ್ನು ಧರಿಸಿಕೊಳ್ಳುತ್ತಾರೆ, ಆಕಾಶವನ್ನು ಗುಡಾರದ ಹಾಗೆ ಹರಡಿಸಿದ್ದಾರೆ.


ಬಾರ್ನಬನು ಅವನನ್ನು ಕರೆದುಕೊಂಡು ಅಪೊಸ್ತಲರ ಬಳಿಗೆ ಬಂದನು. ಸೌಲನು ಪ್ರಯಾಣ ಮಾಡುತ್ತಿದ್ದಾಗ ಅವನಿಗೆ ಕರ್ತ ಯೇಸು ದರ್ಶನವಾದದ್ದನ್ನೂ ಕರ್ತ ಯೇಸು ಅವನೊಂದಿಗೆ ಮಾತನಾಡಿದ್ದನ್ನೂ ಯಾವ ಭಯವಿಲ್ಲದೆ ದಮಸ್ಕದಲ್ಲಿ ಯೇಸುವಿನ ಹೆಸರಿನಲ್ಲಿ ಅವನು ಬೋಧಿಸಿದ್ದನ್ನೂ ಬಾರ್ನಬನು ತಿಳಿಸಿದನು.


ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು