ಅಪೊಸ್ತಲರ ಕೃತ್ಯಗಳು 9:38 - ಕನ್ನಡ ಸಮಕಾಲಿಕ ಅನುವಾದ38 ಲುದ್ದ ಊರು ಯೊಪ್ಪ ಊರಿಗೆ ಸಮೀಪದಲ್ಲಿತ್ತು. ಪೇತ್ರನು ಲುದ್ದದಲ್ಲಿರುವುದು ದೇವ ಭಕ್ತರಿಗೆ ತಿಳಿಯಲು ಅವರು, “ಕೂಡಲೇ ಬರಬೇಕು,” ಎಂದು ಹೇಳಿ ಅವನನ್ನು ಕರೆದುಕೊಂಡು ಬರಲು ಇಬ್ಬರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ, “ತಡಮಾಡದೆ ನಮ್ಮ ಹತ್ತಿರಕ್ಕೆ ಬರಬೇಕೆಂದು” ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಲುದ್ದವು ಜೊಪ್ಪಕ್ಕೆ ಸಮೀಪದಲ್ಲೇ ಇತ್ತು. ಪೇತ್ರನು ಲುದ್ದದಲ್ಲಿರುವುದನ್ನು ಕೇಳಿದ ಭಕ್ತಾದಿಗಳು, “ದಯವಿಟ್ಟು ಬೇಗನೆ ನಮ್ಮೂರಿಗೆ ಬನ್ನಿ,” ಎಂದು ಇಬ್ಬರ ಮುಖಾಂತರ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 ಪೇತ್ರನು ಲುದ್ದದಲ್ಲಿದ್ದಾನೆಂಬ ಸುದ್ದಿಯು ಜೊಪ್ಪದಲ್ಲಿದ್ದ ವಿಶ್ವಾಸಿಗಳಿಗೆ ತಿಳಿಯಿತು. (ಲುದ್ದವು ಜೊಪ್ಪದ ಸಮೀಪದಲ್ಲಿದೆ.) ಆದ್ದರಿಂದ ಅವರು ಇಬ್ಬರನ್ನು ಪೇತ್ರನ ಬಳಿಗೆ ಕಳುಹಿಸಿದರು. ಅವರು, “ತ್ವರೆ ಮಾಡು, ದಯವಿಟ್ಟು ಬೇಗನೆ ಬಾ!” ಎಂದು ಅವನನ್ನು ಬೇಡಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್38 ಪೆದ್ರು ಜೊಪ್ಪಾತ್ ಹಾಯ್ ಮನ್ತಲಿ ಖಬರ್ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಕಳಲ್ಲಿ, ಜೊಪ್ಪ್ ಮನ್ತಲೆ ಗಾಂವ್ ಲಿಡ್ಡಾ ಮನ್ತಲ್ಯಾ ಗಾಂವಾಚ್ಯಾ ಜಗೊಳುಚ್ ಹೊತ್ತೆ , ತಸೆ ಹೊವ್ನ್ ತೆನಿ ದೊನ್ ಮಾನ್ಸಾಕ್ನಿ ಪೆದ್ರುಕ್ಡೆ ಧಾಡ್ಲ್ಯಾನಿ, ತ್ಯಾ ದೊಗಾನಿ ಪೆದ್ರುಕ್, “ದಯಾ ಕರುನ್ ತಾಬ್ಡೊಡ್ತೊಬ್ ಯೆ!” ಮನುನ್ ಬಲ್ವುಲ್ಯಾನಿ. ಅಧ್ಯಾಯವನ್ನು ನೋಡಿ |