Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:5 - ಕನ್ನಡ ಸಮಕಾಲಿಕ ಅನುವಾದ

5 “ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಸಾವ್ಲುನ್ “ಧನಿಯಾ ತಿಯಾ ಕೊನ್‍?” ಮಟ್ಲ್ಯಾನ್, ತ್ಯಾ ಧನಾನ್ ತನ್ನಾ, “ತಿಯಾ ತರಾಸ್ ದಿವ್‍ಲಾಗಲೊ ಜೆಜು ಮಿಯಾಚ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:5
15 ತಿಳಿವುಗಳ ಹೋಲಿಕೆ  

ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ; ದೇವರ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?


“ನಜರೇತಿನ ಯೇಸುವಿನ ಹೆಸರನ್ನು ವಿರೋಧಿಸಲು ಅನೇಕ ಸಂಗತಿಗಳನ್ನು ಮಾಡಬೇಕೆಂದು ನಾನು ಸಹ ಒಮ್ಮೆ ಯೋಚಿಸಿಕೊಂಡಿದ್ದೆನು.


“ತನ್ನನ್ನು ರೂಪಿಸಿದವನ ಸಂಗಡ ವಾದಮಾಡುವವನಿಗೆ ಕಷ್ಟ! ಅವನು ಸಹ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? ಮಣ್ಣು ಕುಂಬಾರನಿಗೆ, ‘ನೀನು ಏನು ಮಾಡುತ್ತೀ?’ ಎಂದೂ, ‘ನಾನು ನಿನ್ನ ಕೈ ಕೆಲಸವು ಅಲ್ಲ,’ ಎಂದೂ ಆ ಮಡಕೆ ಹೇಳುವುದುಂಟೇ?


ನಾವು ಹೀಗೆ ದೇವರನ್ನು ಅಸೂಯೆಗೆಬ್ಬಿಸಬಹುದೇ? ನಾವು ದೇವರಿಗಿಂತಲೂ ಬಲಿಷ್ಠರಾಗಿದ್ದೇವೆಯೋ?


ಒಂದು ವೇಳೆ ಇದು ದೇವರಿಂದ ಬಂದದ್ದಾಗಿದ್ದರೆ, ಅವರನ್ನು ನಿಲ್ಲಿಸಲು ನಿಮ್ಮಿಂದಾಗದು. ಹಾಗೆ ಮಾಡಲು ಪ್ರಯತ್ನಿಸಿದರೆ ನೀವು ದೇವರಿಗೆ ವಿರೋಧವಾಗಿ ಹೋರಾಡುವವರಾಗಿ ಕಂಡು ಬರುವಿರಿ,” ಎಂದು ಹೇಳಿದನು.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ಅವನು ನೆಲದ ಮೇಲೆ ಬೀಳಲು, “ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ?” ಎಂದು ಹೇಳುವ ವಾಣಿಯನ್ನು ಕೇಳಿಸಿಕೊಂಡನು.


ಎದ್ದೇಳು ಪಟ್ಟಣದೊಳಗೆ ಹೋಗು, ನೀನು ಏನು ಮಾಡಬೇಕು ಎಂಬುದನ್ನು ಅಲ್ಲಿ ನಿನಗೆ ತಿಳಿಸಲಾಗುವುದು,” ಎಂದು ಕರ್ತ ಯೇಸು ಹೇಳಿದರು.


ಆದರೆ ಪೇತ್ರನು, “ಸ್ವಾಮಿ, ನನ್ನಿಂದಾಗದು! ಅಶುದ್ಧವಾದದ್ದನ್ನೂ ನಿಷಿದ್ಧವಾದದ್ದನ್ನೂ ನಾನೆಂದೂ ತಿಂದವನಲ್ಲ,” ಎಂದನು.


ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.


ಇದನ್ನೆಲ್ಲಾ ನಾನು ಸಾಧಿಸಿದ್ದೇನೆಂದಲ್ಲ ಅಥವಾ ಈಗಲೇ ನಾನು ಪರಿಪೂರ್ಣನಾಗಿದ್ದೇನೆಂದೂ ನಾನು ಹೇಳುತ್ತಾ ಇಲ್ಲ. ಆದರೆ ಕ್ರಿಸ್ತ ಯೇಸು ನನ್ನನ್ನು ಅನುಸರಿಸಬೇಕೆಂದು ಯಾವುದಕ್ಕಾಗಿ ಆರಿಸಿಕೊಂಡರೋ, ಆ ಪೂರ್ಣತೆಯೆಡೆಗೆ ತಲುಪುವಂತೆ ನಾನು ಪರಿಶ್ರಮಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು