Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:2 - ಕನ್ನಡ ಸಮಕಾಲಿಕ ಅನುವಾದ

2 “ಇಸ್ರಾಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ಇಸ್ರಾಯೇಲರ ಸರ್ವಸಮೂಹದ ಗಂಡಸರನ್ನು ಗೋತ್ರದ ಕುಟುಂಬಗಳ ಪ್ರಕಾರ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನೀನು ಮತ್ತು ಆರೋನ ಇಸ್ರಯೇಲ್ ಜನಸಮೂಹದ ಗಂಡಸರನ್ನು ಗೋತ್ರ ಹಾಗೂ ಕುಟುಂಬಗಳಿಗೆ ಅನುಗುಣವಾಗಿ ಹೆಸರು ಹಿಡಿದು ಒಬ್ಬೊಬ್ಬರನ್ನಾಗಿ ಎಣಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಇಸ್ರಾಯೇಲ್ಯರ ಸರ್ವಸಮೂಹದ ಗಂಡಸರನ್ನು ಗೋತ್ರ ಕುಟುಂಬಗಳ ಪ್ರಕಾರ ಹೆಸರುಹಿಡಿದು ಒಬ್ಬೊಬ್ಬರನ್ನಾಗಿ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲ್ ಜನರೆಲ್ಲರನ್ನು ಅವರವರ ಗೋತ್ರ ಕುಟುಂಬಗಳ ಪ್ರಕಾರ ಲೆಕ್ಕಿಸಿ ಪ್ರತಿಯೊಬ್ಬನ ಹೆಸರನ್ನೂ ಪಟ್ಟಿಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:2
16 ತಿಳಿವುಗಳ ಹೋಲಿಕೆ  

ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.


“ನೀನು ಇಸ್ರಾಯೇಲರನ್ನು ಎಣಿಸಲು ಜನಗಣತಿಯನ್ನು ತೆಗೆದುಕೊಂಡಾಗ ಪ್ರತಿಯೊಬ್ಬನು ತನ್ನ ಜೀವನದ ವಿಮೋಚನೆಯ ಕ್ರಯವನ್ನು ಯೆಹೋವ ದೇವರಿಗೆ ಕೊಡಬೇಕು. ಈ ರೀತಿ ಮಾಡಿದಲ್ಲಿ ಅವರನ್ನು ಎಣಿಸುವಾಗ ಅವರಲ್ಲಿ ವ್ಯಾಧಿ ಉಂಟಾಗುವುದಿಲ್ಲ.


ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಸಮಸ್ತ ಪುರುಷರನ್ನೂ ಸಮೂಹದವರೆಲ್ಲರನ್ನೂ ಕೂಡಿಸಿದರು. ಜನರು ತಮ್ಮ ಗೋತ್ರ ಮತ್ತು ಕುಟುಂಬಗಳ ಅನುಸಾರವಾಗಿ ತಮ್ಮ ವಂಶಾವಳಿಯನ್ನು ನೊಂದಾಯಿಸಿದರು. ಹಾಗೂ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಹೆಚ್ಚಾದ ವಯಸ್ಸಿನವರ ಹೆಸರುಗಳನ್ನು ಒಬ್ಬೊಬ್ಬರಾಗಿ ಪಟ್ಟಿಮಾಡಲಾಯಿತು.


ಸಿಮೆಯೋನನ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.


ಆಗ ಇಸ್ರಾಯೇಲರಲ್ಲಿ ಮಕ್ಕಳಲ್ಲದೆ ಗಂಡಸರು ಮಾತ್ರ ಆರು ಲಕ್ಷ ಜನರು ಕಾಲುನಡಿಗೆಯಾಗಿ ರಮ್ಸೇಸನ್ನು ಬಿಟ್ಟು ಸುಕ್ಕೋತಿಗೆ ಪ್ರಯಾಣಮಾಡಿದರು.


ಪರಿಶುದ್ಧಾಲಯದ ನಿಯಮದ ಮೇರೆಗೆ ಸಮೂಹದ ಜನಗಣತಿಯಲ್ಲಿ ದಾಖಲಿಸಿದ ಜನರಿಂದ ಸಂಗ್ರಹಿದ ಬೆಳ್ಳಿಯ ತೂಕವು ಸುಮಾರು 3,400 ಕಿಲೋಗ್ರಾಂ ಇತ್ತು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು