Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:26 - ಕನ್ನಡ ಸಮಕಾಲಿಕ ಅನುವಾದ

26 ಯೆಹೂದ ಸಂತತಿಯವರಲ್ಲಿ: ಯುದ್ಧಕ್ಕೆ ಶಕ್ತರಾದ ಪುರುಷರೆಲ್ಲರೂ ಅಂದರೆ ಇಪ್ಪತ್ತು ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರು ಗೋತ್ರ ಹಾಗೂ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರೆಸರಾಗಿ ಪಟ್ಟಿಮಾಡಲಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26-27 ಯೆಹೂದ ವಂಶದವರಲ್ಲಿ ಸೈನಿಕ ಸೇವೆ ಸಲ್ಲಿಸಲು ಶಕ್ತರಾದವರ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರಿಸಿ ಎಣಿಕೆಯಾದ ಗಂಡಸರ ಸಂಖ್ಯೆ 74,600:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26-27 ಯೆಹೂದ ವಂಶದವರಲ್ಲಿ ಸೈನಿಕರಾಗಿ ಹೊರಡತಕ್ಕವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರು ಗೋತ್ರ ಕುಟುಂಬಗಳ ಪ್ರಕಾರ ಒಬ್ಬೊಬ್ಬರಾಗಿ ಹೆಸರು ಹಿಡಿದು ಲೆಕ್ಕಿಸಲ್ಪಟ್ಟ ಗಂಡಸರು … 74,600 ಮಂದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಯೆಹೂದನ ಕುಲದವರನ್ನು ಲೆಕ್ಕಿಸಿದರು. ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಎಲ್ಲಾ ಪುರುಷರ ಹೆಸರುಗಳನ್ನು ಪಟ್ಟಿಮಾಡಲಾಯಿತು. ಅವರವರ ಕುಲಗಳಿಗನುಸಾರವಾಗಿಯೂ ಕುಟುಂಬಗಳಿಗನುಸಾರವಾಗಿಯೂ ಅವರ ಹೆಸರುಗಳನ್ನು ಪಟ್ಟಿಮಾಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:26
12 ತಿಳಿವುಗಳ ಹೋಲಿಕೆ  

ಆಕೆಯು ಮತ್ತೆ ಗರ್ಭಿಣಿಯಾಗಿ ಮಗನನ್ನು ಹೆತ್ತು, “ಈಗ ನಾನು ಯೆಹೋವ ದೇವರನ್ನು ಸ್ತುತಿಸುವೆನು,” ಎಂದು ಹೇಳಿ, ಅವನಿಗೆ ಯೆಹೂದ ಎಂದು ಹೆಸರಿಟ್ಟಳು. ಆಮೇಲೆ ಆಕೆಗೆ ಮಕ್ಕಳಾಗಲಿಲ್ಲ.


ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.


ಅಬ್ರಹಾಮನು ಇಸಾಕನ ತಂದೆ, ಇಸಾಕನು ಯಾಕೋಬನ ತಂದೆ, ಯಾಕೋಬನು ಯೂದ ಮತ್ತು ಅವನ ಅಣ್ಣ ತಮ್ಮಂದಿರ ತಂದೆ,


ಯೆಹೂದನು ತನ್ನ ಸಹೋದರರಿಗಿಂತ ಪ್ರಬಲವುಳ್ಳವನಾದನು. ಅವನಿಂದ ಮುಖ್ಯ ಅಧಿಕಾರಿಯು ಹುಟ್ಟಿದನು. ಆದರೆ ಚೊಚ್ಚಲುತನವು ಯೋಸೇಫನದಾಗಿತ್ತು.


ಯೆಹೂದನ ಮಕ್ಕಳು: ಏರ್, ಓನಾನ್, ಶೇಲಹ, ಪೆರೆಚ್ ಮತ್ತು ಜೆರಹ. ಆದರೆ ಏರನೂ, ಓನಾನನೂ ಕಾನಾನ್ ದೇಶದಲ್ಲಿ ಸತ್ತರು. ಪೆರೆಚನ ಮಕ್ಕಳು: ಹೆಚ್ರೋನ್ ಮತ್ತು ಹಾಮೂಲ್ ಎಂಬುವರು.


ಗಾದನ ಗೋತ್ರದಲ್ಲಿ ಎಣಿಕೆಯಾದವರು 45,650 ಜನರು.


ಯೆಹೂದ ಗೋತ್ರದಲ್ಲಿ ಎಣಿಕೆಯಾದವರು 74,600 ಜನರು.


ಯೆಹೂದನ ಕುಲವನ್ನೂ, ತಾನು ಪ್ರೀತಿಮಾಡಿದ ಚೀಯೋನ್ ಪರ್ವತವನ್ನೂ ಆಯ್ದುಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು