Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:3 - ಕನ್ನಡ ಸಮಕಾಲಿಕ ಅನುವಾದ

3 ಇಸ್ರಾಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು ಅಂದರೆ, ಇಪ್ಪತ್ತು ವರ್ಷಕ್ಕಿಂತಲೂ ಹೆಚ್ಚಾದ ವಯಸ್ಸುಳ್ಳ ಎಲ್ಲರನ್ನು ಸೈನ್ಯಸೈನ್ಯವಾಗಿ ನೀನು ಮತ್ತು ಆರೋನನು ಪಟ್ಟಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಇಸ್ರಯೇಲರಲ್ಲಿ ಸೈನಿಕ ಸೇವೆ ಸಲ್ಲಿಸತಕ್ಕವರನ್ನು, ಅಂದರೆ ಇಪ್ಪತ್ತು ವರ್ಷ ಮೇಲ್ಪಟ್ಟ ವಯಸ್ಸುಳ್ಳ ಎಲ್ಲರನ್ನು ಸೈನ್ಯ ಸೈನ್ಯವಾಗಿ ಪಟ್ಟಿಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರಲ್ಲಿ ಸೈನಿಕರಾಗಿ ಹೊರಡತಕ್ಕವರನ್ನು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರನ್ನು ಸೈನ್ಯಸೈನ್ಯವಾಗಿ ನೀನೂ ಆರೋನನೂ ಲೆಕ್ಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನೂ ಆರೋನನೂ ಇಸ್ರೇಲರಲ್ಲಿ ಎಲ್ಲಾ ಪುರುಷರನ್ನು ಲೆಕ್ಕಿಸಬೇಕು. ಇಸ್ರೇಲ್ ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸುಳ್ಳ ಪುರುಷರನ್ನು ಲೆಕ್ಕಿಸು. ಅವರನ್ನು ಅವರವರ ವಿಭಾಗಗಳಿಗೆ ಅನುಸಾರವಾಗಿ ಪಟ್ಟಿಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:3
16 ತಿಳಿವುಗಳ ಹೋಲಿಕೆ  

ಲೆಕ್ಕಿತರಾದವರಲ್ಲಿ ಇಪ್ಪತ್ತು ವರ್ಷದವರೂ ಅದಕ್ಕೂ ಹೆಚ್ಚು ಪ್ರಾಯವುಳ್ಳವರೂ ಯೆಹೋವ ದೇವರಿಗೆ ಕಾಣಿಕೆಯನ್ನು ಕೊಡಬೇಕು.


ಈ ಮರುಭೂಮಿಯಲ್ಲಿ ನನಗೆ ವಿರೋಧವಾಗಿ ಗೊಣಗುಟ್ಟಿದವರೆಲ್ಲರೂ ನಿಮ್ಮ ಪೂರ್ಣ ಸಂಖ್ಯೆಯ ಪ್ರಕಾರ ಎಣಿಸಿದ ಇಪ್ಪತ್ತು ವರುಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ಸತ್ತು ಹೋಗುವಿರಿ.


ಯೋವಾಬನು ಅರಸನಿಗೆ ಕೊಟ್ಟ ಜನರ ಒಟ್ಟು ಲೆಕ್ಕವೇನೆಂದರೆ: ಇಸ್ರಾಯೇಲರಲ್ಲಿ ಖಡ್ಗ ಹಿಡಿಯತಕ್ಕ ಪರಾಕ್ರಮವುಳ್ಳ ಎಂಟು ಲಕ್ಷಮಂದಿ ಇದ್ದರು. ಯೆಹೂದದ ಜನರು ಐದು ಲಕ್ಷಮಂದಿ ಇದ್ದರು.


ಒಬ್ಬನು ಹೊಸದಾಗಿ ಮದುವೆಯಾಗಿದ್ದರೆ, ಅವನನ್ನು ಯುದ್ಧಕ್ಕೆ ಕಳುಹಿಸಬಾರದು ಅಥವಾ ಜವಾಬ್ದಾರಿಯ ಯಾವುದೊಂದೂ ಕೆಲಸವನ್ನು ಅವನಿಂದ ಮಾಡಿಸಬಾರದು. ಅವನು ಒಂದು ವರ್ಷ ಸ್ವತಂತ್ರನಾಗಿ ತನ್ನ ಮನೆಯಲ್ಲಿದ್ದು, ತಾನು ಮದುವೆಯಾದ ಹೆಂಡತಿಯೊಡನೆ ಸುಖವಾಗಿರಲಿ.


ಆ ಕಾಲದಲ್ಲಿ ನಾನು ರೂಬೇನ್ಯರಿಗೂ ಗಾದ್ಯರಿಗೂ ಮತ್ತು ಮನಸ್ಸೆಯ ಅರ್ಧ ಗೋತ್ರಕ್ಕೂ ಆಜ್ಞಾಪಿಸಿದ್ದೇನೆಂದರೆ, “ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಈ ದೇಶವನ್ನು ಸೊತ್ತಾಗಿ ಕೊಟ್ಟಿದ್ದಾರೆ. ನಿಪುಣರಾಗಿರುವ ನೀವೆಲ್ಲರು ನಿಮ್ಮ ಸಹೋದರರಾದ ಇಸ್ರಾಯೇಲರ ಮುಂದೆ ಆಯುಧ ಧರಿಸಿಕೊಂಡು ನದಿದಾಟಿ ಹೋಗಬೇಕು.


ಮೋಶೆ ಆರೋನರ ನಾಯಕತ್ವದಲ್ಲಿ ಈಜಿಪ್ಟ್ ದೇಶದೊಳಗಿಂದ ತಮ್ಮ ಸೈನ್ಯಗಳ ಪ್ರಕಾರ ಹೊರಟ ಇಸ್ರಾಯೇಲರ ಪ್ರಯಾಣದ ಹಂತಗಳ ವಿವರ ಇಲ್ಲಿವೆ.


ಅವರು ನನ್ನನ್ನು ಪೂರ್ಣಮನಸ್ಸಿನಿಂದ ಹಿಂಬಾಲಿಸದೆ ಇರುವುದರಿಂದ, ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಮಾಡಿದ ದೇಶವನ್ನು ಈಜಿಪ್ಟಿನೊಳಗಿಂದ ಹೊರಬಂದ ಇಪ್ಪತ್ತು ವರ್ಷವೂ ಅದಕ್ಕಿಂತ ಅಧಿಕವಾದ ಪ್ರಾಯವುಳ್ಳ ಜನರಲ್ಲಿ


“ಇಸ್ರಾಯೇಲರ ಸಮಸ್ತ ಸಮೂಹದವರಲ್ಲಿ ಇಪ್ಪತ್ತು ವರ್ಷವೂ ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರನ್ನು ಯುದ್ಧಕ್ಕೆ ಹೋಗುವುದಕ್ಕೆ ಶಕ್ತರಾದವರೆಲ್ಲರನ್ನು ಜನಗಣತಿ ಮಾಡಿ ಅವರ ಗೋತ್ರಗಳ ಪ್ರಕಾರ ತೆಗೆದುಕೊಳ್ಳಿರಿ,” ಎಂದರು.


“ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿದ್ದೇನೆ. ಆದಕಾರಣ ನಿಮ್ಮ ಸಂತತಿಗಳಲ್ಲಿ ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


ಪರಿಶುದ್ಧಾಲಯದ ನಿಯಮದ ಮೇರೆಗೆ ಪ್ರತಿಯೊಬ್ಬ ಮನುಷ್ಯನಿಂದ ಒಂದೊಂದು “ಬೆಕಾ” ಅಂದರೆ ಅರ್ಧ ಶೆಕೆಲ್ ಆಗಿತ್ತು. ಕೊಟ್ಟವರ ಲೆಕ್ಕವನ್ನು ಇಪ್ಪತ್ತು ವರ್ಷದವರು ಮತ್ತು ಅದಕ್ಕೆ ಮೇಲಿನ ಪ್ರಾಯದವರನ್ನು ಲೆಕ್ಕ ಮಾಡಲಾಗಿ ಅದು 6,03,550 ಗಂಡಸರ ಸಂಖ್ಯೆ ಇತ್ತು.


ರೂಬೇನ್ಯರಲ್ಲಿಯೂ, ಗಾದ್ಯರಲ್ಲಿಯೂ, ಮನಸ್ಸೆಯ ಅರ್ಧ ಗೋತ್ರದಲ್ಲಿಯೂ, ಗುರಾಣಿಯನ್ನೂ, ಖಡ್ಗವನ್ನೂ ಹಿಡಿಯುವುದಕ್ಕೆ ಬಿಲ್ಲೆಸೆಯುವುದಕ್ಕೆ ಯುದ್ಧದಲ್ಲಿ ಪ್ರವೀಣರಾದ ಪರಾಕ್ರಮಶಾಲಿಗಳಾದ ಯುದ್ಧಕ್ಕೆ ಹೊರಡುವವರು 44,760 ಮಂದಿಯಾಗಿದ್ದರು.


ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.


“ಲೇವಿಯರನ್ನು ಕುಟುಂಬಗಳಾಗಿಯೂ, ಗೋತ್ರಗಳಾಗಿಯೂ ಎಣಿಕೆ ಮಾಡು. ಒಂದು ತಿಂಗಳು ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಗಂಡಸರೆಲ್ಲರನ್ನೂ ನೀನು ಎಣಿಸು,” ಎಂದರು.


ಮೂವತ್ತು ವರ್ಷವಾದವರನ್ನೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳ ಪುರುಷರನ್ನೂ ಅಂದರೆ ಐವತ್ತು ವರ್ಷದವರವರೆಗೆ ದೇವದರ್ಶನ ಗುಡಾರದಲ್ಲಿ ಕೆಲಸ ಮಾಡುವುದಕ್ಕೆ ಬರುವವರನ್ನು ಲೆಕ್ಕಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು