Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:51 - ಕನ್ನಡ ಸಮಕಾಲಿಕ ಅನುವಾದ

51 ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಗುಡಾರವು ಹೊರಡುವಾಗ ಲೇವಿಯರೇ ಅದನ್ನು ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿದುಕೊಳ್ಳುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

51 ಹೊರಡುವಾಗ ಆ ಗುಡಾರವನ್ನು ಲೇವಿಯರೇ ಬಿಚ್ಚಬೇಕು; ಇಳಿಯುವಾಗ ಲೇವಿಯರೇ ಅದನ್ನು ಹಾಕಬೇಕು. ಇತರರು ಹತ್ತಿರಕ್ಕೆ ಬಂದರೆ ಅವರಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಪವಿತ್ರ ಗುಡಾರವನ್ನು ತೆಗೆದುಕೊಂಡು ಹೋಗುವಾಗಲೆಲ್ಲಾ ಲೇವಿಯರೇ ಅದನ್ನು ಬಿಚ್ಚಬೇಕು, ಇಳಿಸುವಾಗಲೆಲ್ಲಾ ಲೇವಿಯರೇ ಅದನ್ನು ಹಾಕಬೇಕು. ಪವಿತ್ರ ಗುಡಾರವನ್ನು ನೋಡಿಕೊಳ್ಳುವವರು ಅವರೇ. ಲೇವಿ ಕುಲಕ್ಕೆ ಸೇರದ ಯಾವನಾದರೂ ಅದರ ಸಮೀಪಕ್ಕೆ ಬಂದರೆ, ಅವನಿಗೆ ಮರಣಶಿಕ್ಷೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:51
15 ತಿಳಿವುಗಳ ಹೋಲಿಕೆ  

ದೇವದರ್ಶನ ಗುಡಾರದ ಎದುರಿನಲ್ಲಿ ಪೂರ್ವದಿಕ್ಕಿಗೆ ಅಂದರೆ ದೇವದರ್ಶನದ ಗುಡಾರದ ಮುಂದೆ ಪೂರ್ವದಿಕ್ಕಿಗೆ ಇಳಿದುಕೊಳ್ಳುವವರು ಮೋಶೆ, ಆರೋನ್ ಮತ್ತು ಅವನ ಪುತ್ರರು. ಇವರು ಇಸ್ರಾಯೇಲರಿಗಾಗಿ ಪರಿಶುದ್ಧಸ್ಥಳದ ಮೇಲ್ವಿಚಾರಣೆ ಮಾಡುವವರು. ಬೇರೆ ಯಾರಾದರೂ ಸಮೀಪಿಸಿದರೆ, ಅವರಿಗೆ ಮರಣಶಿಕ್ಷೆ ಆಗಬೇಕು.


ಇದಲ್ಲದೆ ಯಾಜಕ ಉದ್ಯೋಗವನ್ನು ನಡೆಸುವುದಕ್ಕಾಗಿ ಆರೋನನನ್ನೂ ಅವನ ಪುತ್ರರನ್ನೂ ನೇಮಿಸಬೇಕು. ಪರಕೀಯನು ಸಮೀಪಿಸಿದರೆ ಸಾಯಬೇಕು.”


ಆಗ ಯೆಹೋವ ದೇವರು ಉಜ್ಜನ ಮೇಲೆ ಕೋಪಗೊಂಡು, ಅಂಥ ಅಗೌರವಕ್ಕಾಗಿ ದೇವರು ಅವನನ್ನು ಶಿಕ್ಷಿಸಿದರು; ಅವನು ಅಲ್ಲಿಯೇ ದೇವರ ಮಂಜೂಷದ ಬಳಿಯಲ್ಲಿ ಸತ್ತನು.


ಬೇತ್ ಷೆಮೆಷ್ ಊರಿನ ಜನರು ಯೆಹೋವ ದೇವರ ಮಂಜೂಷದೊಳಗೆ ಇಣಿಕಿ ನೋಡಿದ್ದರಿಂದ, ಯೆಹೋವ ದೇವರು ಅವರೊಳಗೆ ಎಪ್ಪತ್ತು ಮಂದಿಯನ್ನು ಕಠಿಣವಾಗಿ ದಂಡಿಸಿದರು.


ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಎರಡನೆಯ ವರ್ಷದ ಎರಡನೆಯ ತಿಂಗಳಿನ ಇಪ್ಪತ್ತನೆಯ ದಿವಸದಲ್ಲಿ ಮೇಘವು ಸಾಕ್ಷಿ ಗುಡಾರದ ಮೇಲಿನಿಂದ ಎದ್ದಿತು.


ಯೆಹೋವ ದೇವರ ಗುಡಾರದ ಸಮೀಪಕ್ಕೆ ಬರುವವರೆಲ್ಲರೂ ಸಾಯುವರು. ಹಾಗೆಯೇ ನಾವೆಲ್ಲರೂ ಸಾಯಬೇಕೋ?” ಎಂದರು.


ಅವರು ನಿನಗೂ ದೇವದರ್ಶನದ ಗುಡಾರದ ಕಾರ್ಯಗಳಿಗೂ ಜವಾಬ್ದಾರರಾಗಿರುವರು. ಆದರೆ ಪರಿಶುದ್ಧಸ್ಥಳದ ಸಲಕರಣೆಗಳ ಹತ್ತಿರವಾಗಲಿ, ಬಲಿಪೀಠದ ಹತ್ತಿರವಾಗಲಿ ಅವರು ಬರಬಾರದು, ಬಂದರೆ ಅವರು ಮಾತ್ರವಲ್ಲ ನೀವೂ ಸಹ ಸಾಯುವಿರಿ.


ಆದ್ದರಿಂದ ನೀನು ನಿನ್ನ ಪುತ್ರರ ಸಹಿತವಾಗಿ ನಿಮ್ಮ ಯಾಜಕತ್ವವನ್ನು ಕಾಪಾಡಬೇಕು. ಬಲಿಪೀಠದ ಸಮಸ್ತ ಕಾರ್ಯಗಳಿಗೋಸ್ಕರ ತೆರೆಯ ಒಳಗೆ ನೀವು ಸೇವೆಮಾಡಬೇಕು. ನಿಮ್ಮ ಯಾಜಕತ್ವ ಸೇವೆಯನ್ನು ನಿಮಗೆ ದಾನವಾಗಿ ಕೊಟ್ಟಿದ್ದೇನೆ. ಪರಕೀಯನು ಸಮೀಪಕ್ಕೆ ಬಂದರೆ ಮರಣಶಿಕ್ಷೆಯಾಗಬೇಕು,” ಎಂದರು.


ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.


ಆದರೆ ಅವರು ನಿನ್ನ ಸಹಾಯಕರಾಗಿದ್ದು, ದೇವದರ್ಶನದ ಗುಡಾರದ ಎಲ್ಲಾ ಕಾರ್ಯಗಳಿಗೂ ಅದನ್ನು ಕಾಪಾಡುವುದಕ್ಕೂ ಜವಾಬ್ದಾರರಾಗಿರುವರು. ಬೇರೆ ಕುಲದವರು ನಿಮ್ಮ ಸಮೀಪಕ್ಕೆ ಬರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು