ಅರಣ್ಯಕಾಂಡ 1:53 - ಕನ್ನಡ ಸಮಕಾಲಿಕ ಅನುವಾದ53 ಆದರೆ ಲೇವಿಯರು ಸಾಕ್ಷಿಯ ಗುಡಾರದ ಸುತ್ತಲೂ ಇಳಿದುಕೊಳ್ಳಬೇಕು. ಹೀಗೆ ಇಸ್ರಾಯೇಲರ ಸಭೆಯ ಮೇಲೆ ನನ್ನ ಕೋಪಕ್ಕೆ ಆಸ್ಪದವಿರದು. ಲೇವಿಯರು ಸಭೆಯ ಗುಡಾರ ಕಾಯುವ ಜವಾಬ್ದಾರಿಕೆಯುಳ್ಳವರಾಗಿರಬೇಕು.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201953 ಆದರೆ ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ ಯೆಹೋವನ ಕೋಪವು ಇಸ್ರಾಯೇಲರ ಮೇಲೆ ಬರುವುದಕ್ಕೆ ಆಸ್ಪದವಿರುವುದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗೆ ಮಾಡಿದರೆ ನನ್ನ ಕೋಪ ಇಸ್ರಯೇಲರ ಮೇಲೆ ಎರಗಲು ಆಸ್ಪದವಿರದು. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)53 ಲೇವಿಯರು ಮಾತ್ರ ತಮ್ಮ ಡೇರೆಗಳನ್ನು ದೇವದರ್ಶನದ ಗುಡಾರದ ಸುತ್ತಲೂ ಹಾಕಿಕೊಳ್ಳಬೇಕು. ಹೀಗಾದರೆ [ಯೆಹೋವನ] ಕೋಪವು ಇಸ್ರಾಯೇಲ್ಯರ ಮೇಲೆ ಉಂಟಾಗುವದಕ್ಕೆ ಆಸ್ಪದವಿರುವದಿಲ್ಲ. ಲೇವಿಯರು ದೇವದರ್ಶನದ ಗುಡಾರವನ್ನು ಕಾಯುವವರಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್53 ಆದರೆ ಲೇವಿಯರು ಮಾತ್ರ ಪವಿತ್ರ ಗುಡಾರದ ಸುತ್ತಲೂ ತಮ್ಮ ಪಾಳೆಯ ಮಾಡಿಕೊಳ್ಳಬೇಕು. ಹೀಗೆ ಲೇವಿಯರು ಒಡಂಬಡಿಕೆಯ ಪವಿತ್ರ ಗುಡಾರವನ್ನು ಕಾಯುವರು; ಇಸ್ರೇಲರಿಗೆ ಯಾವ ಕೇಡೂ ಸಂಭವಿಸದಂತೆ ಅವರು ಪವಿತ್ರ ಗುಡಾರವನ್ನು ಸಂರಕ್ಷಿಸುವರು.” ಅಧ್ಯಾಯವನ್ನು ನೋಡಿ |
ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.