Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:12 - ಕನ್ನಡ ಸಮಕಾಲಿಕ ಅನುವಾದ

12 ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆದುದರಿಂದ ಇಸ್ರಾಯೇಲರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಇಸ್ರಾಯೇಲ್ಯರು ಸೀನಾಯಿ ಅರಣ್ಯವನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣಮಾಡಿದರು. ತರುವಾಯ ಆ ಮೇಘವು ಪಾರಾನ್ ಅರಣ್ಯದಲ್ಲಿ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆದ್ದರಿಂದ, ಇಸ್ರೇಲರು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದರು. ಅವರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮೇಘವು ಪಾರಾನ್ ಮರುಭೂಮಿಯಲ್ಲಿ ನಿಲ್ಲುವವರೆಗೆ ಪ್ರಯಾಣ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:12
22 ತಿಳಿವುಗಳ ಹೋಲಿಕೆ  

ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.


ಇಷ್ಮಾಯೇಲನು ಪಾರಾನಿನ ಮರುಭೂಮಿಯಲ್ಲಿ ವಾಸಮಾಡುತ್ತಿದ್ದಾಗ, ಅವನ ತಾಯಿಯು ಅವನಿಗೋಸ್ಕರ ಈಜಿಪ್ಟ್ ದೇಶದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.


ಯೊರ್ದನ್ ನದಿಯ ಆಚೆ ಪಾರಾನ್, ತೋಫೆಲ್, ಲಾಬಾನ್, ಹಚೇರೋತ್, ದೀಜಾಹಾಬ್ ಎಂಬ ಊರುಗಳ ನಡುವೆ, ಮರುಭೂಮಿಯಲ್ಲಿ ಅರಾಬಾ ಎಂಬ ತಗ್ಗಾದ ಪ್ರದೇಶದಲ್ಲಿ ಸೂಫಿಗೆ ಎದುರಾಗಿ, ಮೋಶೆ ಇಸ್ರಾಯೇಲರಿಗೆ ಹೇಳಿದ ಮಾತುಗಳು ಇವು.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.


ಅವರು ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿವಸದ ಸಂಜೆ ಸೀನಾಯಿ ಮರುಭೂಮಿಯಲ್ಲಿ ಪಸ್ಕವನ್ನು ಆಚರಿಸಿದರು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ, ಇಸ್ರಾಯೇಲರು ಮಾಡಿದರು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ನಂತರದ ಎರಡನೆಯ ವರ್ಷದ ಎರಡನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದೊಳಗೆ ಮೋಶೆಯ ಸಂಗಡ ಹೀಗೆ ಮಾತನಾಡಿದರು:


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಇಸ್ರಾಯೇಲರು ಈಜಿಪ್ಟ್ ದೇಶದಿಂದ ಹೊರಟ ಎರಡನೆಯ ವರ್ಷದ ಮೊದಲನೆಯ ತಿಂಗಳಿನಲ್ಲಿ ಯೆಹೋವ ದೇವರು ಸೀನಾಯಿ ಮರುಭೂಮಿಯಲ್ಲಿ ಮೋಶೆಯ ಸಂಗಡ ಮಾತನಾಡಿ ಹೀಗೆ ಹೇಳಿದರು:


ಹೀಗೆ ಅವರು ಸುಕ್ಕೋತಿನಿಂದ ಪ್ರಯಾಣಮಾಡಿ, ಏತಾಮಿನ ಮರುಭೂಮಿಯ ಅಂಚಿನಲ್ಲಿ ಇಳಿದುಕೊಂಡರು.


ಅವರ ಬೆಟ್ಟವಾದ ಸೇಯೀರನಲ್ಲಿ ಹೋರಿಯರನ್ನೂ ಅರಣ್ಯಕ್ಕೆ ಸಮೀಪವಾದ ಏಲ್ಪಾರಾನಿನವರೆಗೂ ಅವರನ್ನು ಸೋಲಿಸಿದರು.


ಆ ಮೇಘವು ಗುಡಾರದ ಮೇಲಿನಿಂದ ಹೋದಾಗ, ಇಸ್ರಾಯೇಲರು ಪ್ರಯಾಣ ಮಾಡುತ್ತಿದ್ದರು, ಮೇಘವು ನೆಲಸಿದ ಸ್ಥಳದಲ್ಲಿ ಇಸ್ರಾಯೇಲರು ತಮ್ಮ ಗುಡಾರಗಳನ್ನು ಹಾಕಿಕೊಳ್ಳುತ್ತಿದ್ದರು.


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಮಿದ್ಯಾನನ್ನು ಬಿಟ್ಟು ಪಾರಾನಿಗೆ ಬಂದು ಅಲ್ಲಿಂದ ಮನುಷ್ಯರನ್ನು ತೆಗೆದುಕೊಂಡು ಈಜಿಪ್ಟಿನಲ್ಲಿ ಪ್ರವೇಶಿಸಿ ಈಜಿಪ್ಟಿನ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಮನೆಯನ್ನು, ಆಹಾರವನ್ನು ಮತ್ತು ಭೂಮಿಯನ್ನು ಕೊಟ್ಟನು.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಎಲ್ಲವನ್ನೂ ಮಾಡಿದರು. ಹಾಗೆಯೇ ತಮ್ಮ ಧ್ವಜಗಳ ಪ್ರಕಾರವೂ ತಮ್ಮ ತಮ್ಮ ವಂಶಗಳ ಪ್ರಕಾರವೂ ತಮ್ಮ ಕುಟುಂಬಗಳ ಪ್ರಕಾರವೂ ಪಾಳೆಯವನ್ನು ಹಾಕಿಕೊಳ್ಳುತ್ತಾ ಮುಂದುವರಿಯುತ್ತಿದ್ದರು.


ತಿರುಗಿಕೊಂಡು ಹೊರಟು ಅಮೋರಿಯರ ಬೆಟ್ಟಕ್ಕೂ, ಅದರ ಅರಾಬಾ ಸಮೀಪದ ಎಲ್ಲಾ ಪ್ರದೇಶದ ಗುಡ್ಡದಲ್ಲಿಯೂ ತಗ್ಗಿನಲ್ಲಿಯೂ ನೆಗೆವನಲ್ಲಿಯೂ ಸಮುದ್ರ ತೀರದಲ್ಲಿಯೂ ಇರುವ ಎಲ್ಲಾ ಸ್ಥಳಗಳಿಗೂ ಕಾನಾನ್ಯರ ದೇಶಕ್ಕೂ, ಲೆಬನೋನಿಗೂ ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಗೂ ಹೋಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು