Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:21 - ಕನ್ನಡ ಸಮಕಾಲಿಕ ಅನುವಾದ

21 ಅವರ ಹಿಂದೆ ಪರಿಶುದ್ಧ ವಸ್ತುಗಳನ್ನು ಹೊರುವ ಕೊಹಾತ್ಯರು ಹೊರಟರು. ಇವರು ಬರುವಷ್ಟರೊಳಗೆ ಉಳಿದ ಲೇವಿಯರು ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವರ ಹಿಂದೆ ಕೆಹಾತ್ಯರು ದೇವಾಲಯದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಉಳಿದ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾಗ್ರಿಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ಮಿಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವರ ಹಿಂದೆ ಕೆಹಾತ್ಯರು ದೇವಸ್ಥಾನದ ಸಾಮಾನುಗಳನ್ನು ಹೊತ್ತುಕೊಂಡು ಹೊರಟರು. ಅವರು ಬರುವಷ್ಟರೊಳಗೆ ವಿುಕ್ಕ ಲೇವಿಯರು ದೇವದರ್ಶನದ ಗುಡಾರವನ್ನು ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬಳಿಕ ಕೆಹಾತನ ಕುಲದವರು ಹೊರಟರು. ಅವರು ದೇವಸ್ಥಾನದ ಪವಿತ್ರವಸ್ತುಗಳನ್ನು ಹೊತ್ತುಕೊಂಡಿದ್ದರು. ಕೆಹಾತ್ಯರು ಪವಿತ್ರವಸ್ತುಗಳೊಡನೆ ಬರುವಷ್ಟರೊಳಗೆ ಇತರ ಲೇವಿಯರು ದೇವದರ್ಶನಗುಡಾರವನ್ನು ಎತ್ತಿ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:21
11 ತಿಳಿವುಗಳ ಹೋಲಿಕೆ  

ಆಗ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನನ ಮಕ್ಕಳೂ, ಮೆರಾರೀಯರೂ ಗುಡಾರವನ್ನು ಹೊತ್ತುಕೊಂಡು ಮುಂದೆ ಹೊರಟರು.


ಆದರೆ ಕೊಹಾತ್ಯರಿಗೆ ಯಾವುದನ್ನೂ ಕೊಡಲಿಲ್ಲ. ಏಕೆಂದರೆ ಅವರು ತಮ್ಮ ಹೆಗಲುಗಳ ಮೇಲೆ ಪರಿಶುದ್ಧಸ್ಥಳದ ವಸ್ತುಗಳನ್ನು ಹೊತ್ತುಕೊಂಡು ಹೋಗುವುದೇ ಅವರಿಗೆ ಸೇವೆಯಾಗಿತ್ತು.


ಆಗ ದಾವೀದನು, “ಲೇವಿಯರ ಹೊರತಾಗಿ ಮತ್ತ್ಯಾರೂ ದೇವರ ಮಂಜೂಷವನ್ನು ಹೊರಬಾರದು. ಯೆಹೋವ ದೇವರು ದೇವರ ಮಂಜೂಷವನ್ನು ಹೊರಲೂ, ಯುಗಯುಗಕ್ಕೆ ಅವರಿಗೆ ಸೇವೆಮಾಡಲೂ ಅವರನ್ನು ಆಯ್ದುಕೊಂಡಿದ್ದಾರೆ,” ಎಂದನು.


ಆದರೆ ಕೊಹಾತ್ಯರು ದೇವದರ್ಶನದ ಗುಡಾರದ ಒಳಗೆ ಬಂದು, ಒಂದು ಕ್ಷಣವೂ ಆ ಪವಿತ್ರ ವಸ್ತುಗಳನ್ನು ನೋಡಬಾರದು, ನೋಡಿ ಸಾವನ್ನಪ್ಪದಿರಲಿ.”


ತರುವಾಯ ದೇವದರ್ಶನ ಗುಡಾರವೂ ಲೇವಿಯರ ಪಾಳೆಯವೂ ಪಾಳೆಯಗಳ ಮಧ್ಯದಲ್ಲಿ ಹೊರಡಬೇಕು. ಅವರು ಇಳಿದುಕೊಳ್ಳುವ ಪ್ರಕಾರವೇ, ತಮ್ಮ ತಮ್ಮ ಕಡೆಯಲ್ಲಿಯೂ ತಮ್ಮ ತಮ್ಮ ಧ್ವಜಗಳ ಪ್ರಕಾರವಾಗಿಯೂ ಹೊರಡಬೇಕು.


ದೇವದರ್ಶನ ಗುಡಾರವು ಹೊರಡುವಾಗ ಲೇವಿಯರು ಅದನ್ನು ತೆಗೆಯಲಿ. ಗುಡಾರವು ಇಳಿಯುವಾಗ ಲೇವಿಯರು ಅದನ್ನು ನಿಲ್ಲಿಸಲಿ. ಬೇರೆ ಯಾವನಾದರೂ ಸಮೀಪಿಸಿದರೆ ಅವನು ಸಾಯಬೇಕು.


ಗಾದನ ಗೋತ್ರದ ಸೈನ್ಯದ ಮೇಲೆ ದೆವುಯೇಲನ ಮಗ ಎಲ್ಯಾಸಾಫನು ಇದ್ದನು.


ಇವರು ತಮ್ಮ ಪಿತೃಗಳ ವಂಶದ ಪ್ರಕಾರವಾಗಿ ಲೇವಿಯ ಪುತ್ರರಾಗಿದ್ದರು. ತಮ್ಮ ಹೆಸರುಗಳಿಂದ, ಎಣಿಕೆಯಾಗಿದ್ದ ಇವರು ತಮ್ಮ ಕುಟುಂಬಗಳಲ್ಲಿ ಮುಖ್ಯಸ್ಥರಾಗಿದ್ದರು. ಇವರು ಇಪ್ಪತ್ತು ವರ್ಷ ಪ್ರಾಯದವರು ಮೊದಲುಗೊಂಡು, ಯೆಹೋವ ದೇವರ ಮನೆಯ ಸೇವೆಗೋಸ್ಕರ ಕೆಲಸಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು