Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:9 - ಕನ್ನಡ ಸಮಕಾಲಿಕ ಅನುವಾದ

9 ನಿಮ್ಮ ದೇಶದಲ್ಲಿ ನಿಮ್ಮನ್ನು ಉಪದ್ರವಪಡಿಸುವ ವೈರಿಗೆ ವಿರೋಧವಾಗಿ ಯುದ್ಧಕ್ಕೆ ಹೊರಡುವಾಗ ಜನರನ್ನು ಎಚ್ಚರಿಸುವಂತೆ ತುತೂರಿಗಳನ್ನು ಆರ್ಭಟವಾಗಿ ಊದಬೇಕು. ಆಗ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ನೆನಪು ಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತ್ತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಪೀಡಿಸುವ ಶತ್ರುಗಳ ಮೇಲೆ ಯುದ್ಧಕ್ಕೆ ಹೊರಡುವಾಗ ಆ ಕಹಳೆಗಳನ್ನು ಆರ್ಭಟವಾಗಿ ಮೊಳಗಿಸಬೇಕು. ಆಗ ನಿಮ್ಮ ದೇವರಾದ ಸರ್ವೇಶ್ವರ ನಿಮ್ಮನ್ನು ನೆನಪಿಗೆ ತಂದುಕೊಂಡು ಶತ್ರುಗಳ ಕೈಯಿಂದ ನಿಮ್ಮನ್ನು ಬಿಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮನ್ನು ಉಪದ್ರವಪಡಿಸುವ ಶತ್ರುಗಳನ್ನು ಎದುರಿಸುವದಕ್ಕಾಗಿ ಯುದ್ಧಕ್ಕೆ ಹೊರಡುವಾಗ ಆ ತುತೂರಿಗಳನ್ನು ಆರ್ಭಟವಾಗಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಕ್ಕೆ ತಂದುಕೊಂಡು ಶತ್ರುಗಳ ಕೈಯಿಂದ ಬಿಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ನೀವು ಸ್ವದೇಶವನ್ನು ಸೇರಿದ ಮೇಲೆ ನಿಮ್ಮ ಶತ್ರುಗಳನ್ನು ಎದುರಿಸುವುದಕ್ಕಾಗಿ ಯುದ್ಧಕ್ಕೆ ಹೊರಡುವಾಗ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸಬೇಕು. ಆಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಜ್ಞಾಪಕಮಾಡಿಕೊಂಡು ಶತ್ರುಗಳಿಂದ ನಿಮ್ಮನ್ನು ರಕ್ಷಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:9
34 ತಿಳಿವುಗಳ ಹೋಲಿಕೆ  

“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿಮ್ಮನ್ನು ಈಜಿಪ್ಟಿನಿಂದ ಬರಮಾಡಿ, ನಿಮ್ಮನ್ನು ಈಜಿಪ್ಟಿನವರ ಕೈಯಿಂದಲೂ, ನಿಮ್ಮನ್ನು ಬಾಧೆಪಡಿಸಿದ ಸಮಸ್ತ ರಾಜ್ಯಗಳ ಕೈಯಿಂದಲೂ ಬಿಡಿಸಿದೆನು.’


ಯೆಹೋವ ದೇವರು ಅವರಿಗೆ ನ್ಯಾಯಾಧಿಪತಿಗಳನ್ನು ಎಬ್ಬಿಸಿದಾಗ, ಯೆಹೋವ ದೇವರು ನ್ಯಾಯಾಧಿಪತಿಯ ಸಂಗಡ ಇದ್ದು, ಆ ನ್ಯಾಯಾಧಿಪತಿಯ ದಿವಸಗಳಲ್ಲೆಲ್ಲಾ ಅವರನ್ನು ಅವರ ಶತ್ರುಗಳ ಕೈಯಿಂದ ತಪ್ಪಿಸಿ ರಕ್ಷಿಸುತ್ತಿದ್ದರು. ಏಕೆಂದರೆ ಅವರು ತಮ್ಮನ್ನು ಬಾಧಿಸಿ, ಶ್ರಮೆಪಡಿಸುವವರ ನಿಮಿತ್ತ ಗೋಳಾಡಿದ್ದರಿಂದ ಯೆಹೋವ ದೇವರು ಕನಿಕರಪಟ್ಟರು.


ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಕಾಡುಮೃಗಗಳನ್ನೂ ಪಶುಗಳನ್ನೂ ನೆನಪಿಗೆ ತಂದುಕೊಂಡು, ಭೂಲೋಕದ ಮೇಲೆ ಗಾಳಿಬೀಸುವಂತೆ ಮಾಡಲಾಗಿ, ನೀರು ತಗ್ಗಿತು.


ಅವರ ಶತ್ರುಗಳು ಅವರನ್ನು ಬಾಧೆಪಡಿಸಿದರು; ಅವರ ಕೈಕೆಳಗೆ ಅವರು ಅಧೀನರಾದರು.


ದೇವರೇ, ನಿಮ್ಮ ಜನರ ಮೇಲಿರುವ ಮೆಚ್ಚುಗೆಯಿಂದ ನನ್ನನ್ನು ಜ್ಞಾಪಕಮಾಡಿಕೊಳ್ಳಿರಿ, ನಿಮ್ಮ ರಕ್ಷಣೆಯಿಂದ ನನ್ನನ್ನು ದರ್ಶಿಸಿರಿ.


ಯೆಹೂದದವರು ಹಿಂದಕ್ಕೆ ನೋಡಿದಾಗ, ಯುದ್ಧವು ಅವರ ಮುಂದೆಯೂ ಹಿಂದೆಯೂ ಇತ್ತು. ಆಗ ಯೆಹೋವ ದೇವರಿಗೆ ಅವರು ಮೊರೆಯಿಟ್ಟರು. ಯಾಜಕರು ತುತೂರಿಗಳನ್ನು ಊದಿದರು.


ಸೀದೋನ್ಯ, ಅಮಾಲೇಕ್ಯ, ಮಾವೋನ್ಯ ಈ ಜನಾಂಗಗಳು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ; ನಾನು ಅವುಗಳಿಂದ ನಿಮ್ಮನ್ನು ತಪ್ಪಿಸಿಬಿಡಲಿಲ್ಲವೋ?


ಇವರು ಆ ವರ್ಷ ಮೊದಲುಗೊಂಡು ಹದಿನೆಂಟು ವರ್ಷ ಯೊರ್ದನಿಗೆ ಆಚೆ ಗಿಲ್ಯಾದಿನಲ್ಲಿ ಅಮೋರಿಯರ ದೇಶದಲ್ಲಿರುವ ಇಸ್ರಾಯೇಲರನ್ನೆಲ್ಲಾ ಬಾಧಿಸಿ ಕುಂದಿಸಿದರು.


ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.


ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.


ತುತೂರಿಯನ್ನು ಸ್ಪಷ್ಟವಾಗಿ ಊದದಿದ್ದರೆ, ಯಾರು ತಾನೇ ಯುದ್ಧಕ್ಕೆ ಸನ್ನದ್ಧರಾಗುವರು?


ಪಟ್ಟಣದಲ್ಲಿ ಕಹಳೆಯನ್ನು ಊದಿದರೆ, ಜನರು ಹೆದರುವುದಿಲ್ಲವೇ? ಯೆಹೋವ ದೇವರಿಂದಲ್ಲದೆ ಪಟ್ಟಣಕ್ಕೆ ಕೇಡು ತಟ್ಟುವುದುಂಟೇ?


ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ, ತುತೂರಿಯ ಶಬ್ದವನ್ನು ಆಲೈಸಿರಿ, ಎಂದೆನು. ಆದರೆ ಅವರು, ‘ನಾವು ಆಲೈಸುವುದಿಲ್ಲ,’ ಎಂದರು.


ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ? ತುತೂರಿಯ ಶಬ್ದವನ್ನು ಎಷ್ಟರವರೆಗೆ ನಾನು ಕೇಳಲಿ?


ಓ, ನನ್ನ ಕರುಳು, ನನ್ನ ಕರುಳು! ನಾನು ನೋವಿನಿಂದ ನರಳುತ್ತೇನೆ. ನನ್ನ ಹೃದಯವು ನನ್ನಲ್ಲಿ ತಳಮಳಗೊಂಡಿದೆ. ನಾನು ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿ ಶಬ್ದವನ್ನೂ, ಯುದ್ಧದ ಆರ್ಭಟವನ್ನೂ ಕೇಳುತ್ತಿರುವೆ.


“ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ, ‘ಇಡೀ ದೇಶದಲ್ಲಿ ತುತೂರಿ ಊದಿರಿ!’ ಎಂದು ಹೇಳಿರಿ. ಗಟ್ಟಿಯಾಗಿ ಹೀಗೆ ಕೂಗಿರಿ, ‘ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ!’ ಎಂದು ಹೇಳಿರಿ.


“ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು. ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನು ಘೋಷಿಸು.


ಜಗದ ಸಕಲ ನಿವಾಸಿಗಳೇ! ಭೂಮಿಯಲ್ಲಿ ವಾಸಿಸುವವರೇ! ಬೆಟ್ಟಗಳ ಮೇಲೆ ಧ್ವಜವನ್ನು ಎತ್ತುವಾಗ ಅದನ್ನು ನೀವು ನೋಡುವಿರಿ, ತುತೂರಿಯನ್ನು ಊದುವಾಗ ಕೇಳಿಸಿಕೊಳ್ಳುವಿರಿ.


ನಾವು ಹೀನ ಸ್ಥಿತಿಯಲ್ಲಿದ್ದಾಗ ನಮ್ಮನ್ನು ನೆನಪಿಸಿಕೊಂಡರು; ದೇವರ ಪ್ರೀತಿಯು ಎಂದೆಂದಿಗೂ ಇರುವುದು.


ಆದರೆ ಯೆಹೋವ ದೇವರ ಆತ್ಮರು ಗಿದ್ಯೋನನ ಮೇಲೆ ಬಂದರು. ಅವನು ತುತೂರಿಯನ್ನು ಊದಿದಾಗ, ಅಬೀಯೆಜೆರಿನವರು ಅವನ ಹಿಂದೆ ಕೂಡಿಬಂದರು.


ನಿಮ್ಮನ್ನು ಈಜಿಪ್ಟಿನವರ ಕೈಯಿಂದ ತಪ್ಪಿಸಿ, ಅವರನ್ನು ನಿಮ್ಮ ಮುಂದೆ ಹೊರಗೆ ಹಾಕಿ, ಅವರ ದೇಶವನ್ನು ನಿಮಗೆ ಕೊಟ್ಟೆನು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಕೋಟೆಯುಳ್ಳ ಪಟ್ಟಣಗಳಿಗೆ ವಿರೋಧವಾಗಿಯೂ ಉನ್ನತವಾದ ಗೋಪುರಗಳಿಗೆ ವಿರೋಧವಾಗಿಯೂ ತುತೂರಿ ಆರ್ಭಟಗಳ ದಿವಸವು.


“ಗಿಬೆಯದಲ್ಲಿ ತುತೂರಿಯನ್ನೂ ರಾಮದಲ್ಲಿ ಕೊಂಬನ್ನೂ ಊದಿರಿ. ಬೆನ್ಯಾಮೀನೇ, ನಿನ್ನ ಹಿಂದೆ ನೋಡು! ಬೇತಾವೆನಿನಲ್ಲಿ ಗಟ್ಟಿಯಾಗಿ ಕೂಗು.


“ ‘ಅವರು ಕಹಳೆಯನ್ನೂದಿ ಎಲ್ಲವನ್ನೂ ಸಿದ್ಧ ಮಾಡಿಕೊಂಡಿದ್ದಾರೆ. ಆದರೆ ಯಾರೂ ಯುದ್ಧಕ್ಕೆ ಹೋಗುವುದಿಲ್ಲ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ಕೋಪವಿದೆ.


“ಓ ಬೆನ್ಯಾಮೀನನ ಮಕ್ಕಳೇ! ನಿಮ್ಮ ಸುರಕ್ಷತೆಗಾಗಿ ಯೆರೂಸಲೇಮಿನಿಂದ ಓಡಿಹೋಗಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ ಹಕ್ಕೆರೆಮಿನಲ್ಲಿ ಧ್ವಜವನ್ನೆತ್ತಿರಿ. ಏಕೆಂದರೆ ಕೇಡೂ ದೊಡ್ಡ ನಾಶವೂ ಉತ್ತರದ ಕಡೆಯಿಂದ ತೋರುತ್ತವೆ.


“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಆದ್ದರಿಂದ ಇಗೋ, ದಿನಗಳು ಬರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ. “ಆಗ ನಾನು ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ಮಾಡುವೆನು; ಅದು ಹಾಳು ದಿಬ್ಬವಾಗುವುದು; ಅದಕ್ಕೆ ಸೇರಿದ ಗ್ರಾಮಗಳು ಬೆಂಕಿಯಿಂದ ಸುಟ್ಟುಹೋಗುವುವು. ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯವನ್ನು ಹೊಂದುವುದು,” ಎಂದು ಯೆಹೋವ ದೇವರು ಹೇಳುತ್ತಾರೆ.


ನೀವು ನಿಮ್ಮ ಶತ್ರುಗಳಿಗೆ ವಿರೋಧವಾಗಿ ಯುದ್ಧಕ್ಕೆ ಹೊರಟಾಗ ಅವರ ಕುದುರೆಗಳನ್ನೂ ರಥಗಳನ್ನೂ ನಿಮಗಿಂತ ಹೆಚ್ಚಾಗಿರುವ ಜನರನ್ನೂ ನೋಡಿದರೆ ಭಯಪಡಬೇಡಿರಿ. ಏಕೆಂದರೆ ಈಜಿಪ್ಟ್ ದೇಶದೊಳಗಿಂದ ನಿಮ್ಮನ್ನು ಹೊರಗೆ ಬರಮಾಡಿದ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು