Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:1 - ಕನ್ನಡ ಸಮಕಾಲಿಕ ಅನುವಾದ

1 ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇಸ್ರಾಯೇಲ ಜನರು ತಮಗೆ ದುರಾವಸ್ಥೆ ಉಂಟಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನು ಉಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇಸ್ರಾಯೇಲ್ಯರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಯೆಹೋವನಿಗೆ ಕೇಳಿಸುವಂತೆ ಗುಣುಗುಟ್ಟುವವರಾದರು. ಅದಕ್ಕೆ ಆತನು ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿಯನ್ನುಂಟುಮಾಡಿದ್ದರಿಂದ ಪಾಳೆಯದ ಕಡೇ ಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಜನರು ತಮಗೆ ತೊಂದರೆ ಉಂಟಾಯಿತೆಂದು ಗಟ್ಟಿಯಾಗಿ ಗುಣುಗುಟ್ಟಿದರು. ಅದನ್ನು ಯೆಹೋವನು ಕೇಳಿ ಕೋಪಗೊಂಡನು. ಯೆಹೋವನಿಂದ ಬಂದ ಬೆಂಕಿ ಅವರ ವಿರುದ್ಧವಾಗಿ ಹೊತ್ತಿಕೊಂಡದ್ದರಿಂದ ಪಾಳೆಯದ ಹೊರಭಾಗದಲ್ಲಿದ್ದವರು ಸುಟ್ಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:1
40 ತಿಳಿವುಗಳ ಹೋಲಿಕೆ  

ಆದಕಾರಣ ಜನರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತನಾಡಿ, “ನಾವು ಮರುಭೂಮಿಯಲ್ಲಿ ಸಾಯುವ ಹಾಗೆ ನಮ್ಮನ್ನು ಈಜಿಪ್ಟ್ ದೇಶದಿಂದ ಏಕೆ ಬರಮಾಡಿದ್ದೀರಿ? ಇಲ್ಲಿ ರೊಟ್ಟಿ ಇಲ್ಲ, ನೀರೂ ಇಲ್ಲ. ನಾವು ಈ ನಿಸ್ಸಾರವಾದ ರೊಟ್ಟಿಯನ್ನು ತಿಂದು ನಮಗೆ ಬೇಸರವಾಗಿದೆ,” ಎಂದರು.


ಎಲೀಯನು ಅವರಿಗೆ ಉತ್ತರವಾಗಿ, “ನಾನು ದೇವರ ಮನುಷ್ಯನಾಗಿದ್ದರೆ, ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ,” ಎಂದನು. ಆಗ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.


ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟು, ಧೂಪವನ್ನು ಅರ್ಪಿಸಿದ ಇನ್ನೂರ ಐವತ್ತು ಮಂದಿಯನ್ನು ದಹಿಸಿಬಿಟ್ಟಿತು.


ನೀವು ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಲ್ಲಿಯೂ ಯೆಹೋವ ದೇವರಿಗೆ ಕೋಪವನ್ನು ಎಬ್ಬಿಸಿದಿರಿ.


ಆಗ ಯೆಹೋವ ದೇವರ ಬಳಿಯಿಂದ ಬೆಂಕಿಯು ಹೊರಟುಬಂದು ಅವರನ್ನು ದಹಿಸಿಬಿಟ್ಟಿತು. ಅವರು ಯೆಹೋವ ದೇವರ ಮುಂದೆ ಮರಣಹೊಂದಿದರು.


ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಪೂರ್ವದಿಂದ ತೋಫೆತ್ ಸಿದ್ಧವಾಗಿದೆ. ಹೌದು, ಅದು ಆಳವಾಗಿಯೂ, ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಚಿತೆಯೊಳಗೆ ಬೆಂಕಿಯೂ, ಬಹಳ ಕಟ್ಟಿಗೆಯೂ ತುಂಬಿರುವುದು. ಯೆಹೋವ ದೇವರ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು.


ಬೆಂಕಿಯು ಅವರ ಗುಂಪಿನಲ್ಲಿ ಉರಿದು, ಜ್ವಾಲೆಯು ದುಷ್ಟರನ್ನು ಸುಟ್ಟಿತು.


ಯೆಹೋವ ದೇವರು ಇದನ್ನು ಕೇಳಿ ಬೇಸರಗೊಂಡರು. ಯಾಕೋಬ್ಯರಲ್ಲಿ ಬೆಂಕಿ ಹೊತ್ತಿತು. ಇಸ್ರಾಯೇಲರು ದಂಡನೆಗೆ ಒಳಗಾದರು.


ಅವನು ಇನ್ನೂ ಮಾತನಾಡುತ್ತಿರಲು ಮತ್ತೊಬ್ಬ ದೂತನು ಬಂದು, “ದೇವರ ಬೆಂಕಿ ಆಕಾಶದಿಂದ ಬಿದ್ದು ಕುರಿಗಳನ್ನೂ ಸೇವಕರನ್ನೂ ಸುಟ್ಟುಹಾಕಿತು. ನಾನೊಬ್ಬನು ಮಾತ್ರ ನಿನಗೆ ತಿಳಿಸಲು ತಪ್ಪಿಸಿಕೊಂಡು ಬಂದಿದ್ದೇನೆ,” ಎಂದನು.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ಏಕೆಂದರೆ ನನ್ನ ರೋಷ ಬೆಂಕಿಯಂತಿದೆ, ಅದು ಕೆಳಗಿನ ಪಾತಾಳದ ಮಟ್ಟಿಗೂ ಉರಿದು ಭೂಮಿಯನ್ನೂ, ಅದರ ಫಲವನ್ನೂ ತಿಂದು ಬಿಟ್ಟು, ಬೆಟ್ಟಗಳ ಅಸ್ತಿವಾರವನ್ನು ದಹಿಸುವುದು.


ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.


ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಭಯದಿಂದ ಕಪಟಿಗಳು ಆಶ್ಚರ್ಯಕ್ಕೊಳಗಾಗಿ ಹೀಗೆ ಎಂದುಕೊಳ್ಳುವರು, “ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ವಾಸಿಸಬಲ್ಲರು?”


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಅವನು ಮಾಡಿದ್ದು ಯೆಹೋವ ದೇವರ ದೃಷ್ಟಿಯಲ್ಲಿ ಮೆಚ್ಚಿಗೆಯಾಗಿರಲಿಲ್ಲ. ಆದ್ದರಿಂದ ಅವರು ಇವನನ್ನೂ ಸಾವಿಗೀಡುಮಾಡಿದರು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಏಕೆಂದರೆ ನಮ್ಮ, “ದೇವರು ದಹಿಸುವ ಅಗ್ನಿಯಾಗಿದ್ದಾರೆ.”


ಬೆಟ್ಟಗಳು ಅವರ ಮುಂದೆ ಕಂಪಿಸುತ್ತವೆ; ಗುಡ್ಡಗಳು ಕರಗುತ್ತವೆ; ಭೂಮಿಯೂ, ಲೋಕವೂ, ಅದರ ನಿವಾಸಿಗಳೆಲ್ಲವೂ ಅವರ ಮುಂದೆ ನಡುಗುತ್ತವೆ.


ಬದುಕುವ ಮನುಷ್ಯನು ತನ್ನ ಪಾಪಗಳ ಶಿಕ್ಷೆಗಾಗಿ ಗೊಣಗುಟ್ಟುವುದೇಕೆ?


ಅವರು ಮಾರ್ಗದಲ್ಲಿ ನಿಮಗೆ ಎದುರುಗೊಂಡು, ನೀವು ಆಯಾಸವುಳ್ಳವರಾಗಿಯೂ, ದಣಿದವರಾಗಿಯೂ ಇದ್ದ ಸಮಯದಲ್ಲಿ ನಿಮ್ಮ ಹಿಂದೆ ಇದ್ದ ಬಲಹೀನರೆಲ್ಲರನ್ನು ಹಿಂಭಾಗದಲ್ಲಿ ಸಂಹಾರ ಮಾಡಿದರು. ಅವರಿಗೆ ದೇವರ ಬಗ್ಗೆ ಯಾವ ಭಯವೂ ಇರಲಿಲ್ಲ.


ಜನರಿಗೆ ನೀನು, “ ‘ನಾಳೆಗಾಗಿ ನಿಮ್ಮನ್ನು ಪರಿಶುದ್ಧ ಮಾಡಿಕೊಳ್ಳಿರಿ. ಆಗ ಮಾಂಸವನ್ನು ತಿನ್ನುವಿರಿ. ನಮಗೆ ಯಾವನು ಮಾಂಸವನ್ನು ತಿನ್ನುವುದಕ್ಕೆ ಕೊಡುವನು? ಈಜಿಪ್ಟ್ ದೇಶದಲ್ಲಿ ನಮಗೆ ಒಳ್ಳೆಯದು ಇತ್ತು,’ ಎಂದು ಹೇಳಿ, ಯೆಹೋವ ದೇವರು ಕೇಳುವಂತೆ ಅತ್ತಿರಿ. ಆದಕಾರಣ ಯೆಹೋವ ದೇವರು ನಿಮಗೆ ತಿನ್ನುವುದಕ್ಕೆ ಮಾಂಸವನ್ನು ಕೊಡುವನು ಮತ್ತು ನೀವು ಅದನ್ನು ತಿನ್ನುವಿರಿ.


ಇಸ್ರಾಯೇಲರೆಲ್ಲರು ಮೋಶೆಗೂ ಆರೋನನಿಗೂ ವಿರೋಧವಾಗಿ ಗೊಣಗುಟ್ಟಿದರು. ಅವರು, “ನಾವು ಈಜಿಪ್ಟ್ ದೇಶದಲ್ಲಿ ಸತ್ತಿದ್ದರೆ ಇಲ್ಲವೆ ಈ ಮರುಭೂಮಿಯಲ್ಲಾದರೂ ಸತ್ತಿದ್ದರೆ ಚೆನ್ನಾಗಿತ್ತು.


ಏಕೆಂದರೆ ನನ್ನ ಮಹಿಮೆಯನ್ನೂ, ಈಜಿಪ್ಟ್ ದೇಶದಲ್ಲಿಯೂ, ಮರುಭೂಮಿಯಲ್ಲಿಯೂ ನಾನು ಮಾಡಿದ ಸೂಚಕಕಾರ್ಯಗಳನ್ನೂ ನೋಡಿದ ಈ ಸಕಲ ಜನರು, ನನ್ನನ್ನು ಈಗ ಹತ್ತು ಸಾರಿ ಪರೀಕ್ಷಿಸಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


“ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.


ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಈ ಕಾರಣದಿಂದ ನೀನೂ, ನಿನ್ನ ಸಮಸ್ತ ಗುಂಪು ಯೆಹೋವ ದೇವರಿಗೆ ವಿರೋಧವಾಗಿ ಒಟ್ಟಾಗಿ ಕೂಡಿಕೊಂಡಿರಿ. ನೀವು ಆರೋನನಿಗೆ ವಿರೋಧವಾಗಿ ಗೊಣಗುಟ್ಟುವುದು ಯಾಕೆ?” ಎಂದು ಹೇಳಿದನು.


ನಾನು ಯಾವನನ್ನು ಆಯ್ದುಕೊಳ್ಳುತ್ತೇನೋ, ಆ ಮನುಷ್ಯನ ಕೋಲು ಚಿಗುರುವುದು. ಹೀಗೆ ಇಸ್ರಾಯೇಲರು ನಿಮಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ನಿಲ್ಲಿಸಿಬಿಡುವೆನು,” ಎಂದರು.


ಅವರ ಯುವಕರನ್ನು ಬೆಂಕಿಯು ದಹಿಸಿಬಿಟ್ಟಿತು. ಅವರ ಕನ್ಯೆಯರು ವಿವಾಹ ಗೀತೆಗಳನ್ನು ಹಾಡಲಿಲ್ಲ.


ಇಸ್ರಾಯೇಲಿನ ಬೆಳಕು ಬೆಂಕಿಯಾಗುವುದು, ಅದರ ಪರಿಶುದ್ಧರು ಜ್ವಾಲೆಯಂತಿರುವರು, ಅದು ಒಂದೇ ದಿನದಲ್ಲಿ ಅವನ ಮುಳ್ಳು, ದತ್ತೂರಿಗಳನ್ನು ದಹಿಸಿ ನುಂಗಿಬಿಡುವುದು.


ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ಅವರು, “ಯೆಹೋವ ದೇವರು ಮೋಶೆಯ ಮುಖಾಂತರ ಮಾತ್ರವೇ ಮಾತನಾಡಿದ್ದಾರೋ? ನಮ್ಮ ಮುಖಾಂತರ ಮಾತಾಡಲಿಲ್ಲವೋ?” ಎಂದರು. ಅವರು ಆಡಿದ ಮಾತು ಯೆಹೋವ ದೇವರಿಗೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು