Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:11 - ಕನ್ನಡ ಸಮಕಾಲಿಕ ಅನುವಾದ

11 ಮೋಶೆಯು ಯೆಹೋವ ದೇವರಿಗೆ, “ಈ ಎಲ್ಲಾ ಜನರ ಭಾರವನ್ನು ನನ್ನ ಮೇಲೆ ಹೊರಿಸಿ ನೀವು ಏಕೆ ತೊಂದರೆಯನ್ನು ನಿಮ್ಮ ಸೇವಕನ ಮೇಲೆ ತಂದಿದ್ದೀರಿ? ನಿಮ್ಮನ್ನು ಅತೃಪ್ತಿಗೊಳಿಸಲು ನಾನೇನು ಮಾಡಿದ್ದೇನೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಮೋಶೆ ಯೆಹೋವನಿಗೆ, “ಈ ಜನರನ್ನು ನಡೆಸಿಕೊಂಡು ಹೋಗುವ ಹೊಣೆಯನ್ನು ನನ್ನ ಮೇಲೆ ಹೊರಿಸಿ ನೀನು ಏಕೆ ನಿನ್ನ ದಾಸನಿಗೆ ತೊಂದರೆಯನ್ನು ತಂದಿದ್ದೀ? ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆತ ಸರ್ವೇಶ್ವರನಿಗೆ, “ನಿಮ್ಮ ದಾಸನಾದ ನನಗೇಕೆ ಈ ಜನರನ್ನು ಕರೆದೊಯ್ಯುವ ಭಾರವನ್ನು ಹಾಕಿದಿರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಮೋಶೆ ಯೆಹೋವನಿಗೆ - ಈ ಜನರನ್ನು ನಡಿಸಿಕೊಂಡು ಹೋಗುವ ಭಾರವನ್ನು ನನ್ನ ಮೇಲೆ ಹೊರಿಸಿ ನೀನು ಯಾಕೆ ನಿನ್ನ ದಾಸನಿಗೆ ಅಪಕಾರ ಮಾಡುತ್ತೀಯೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಮೋಶೆ ಯೆಹೋವನಿಗೆ, “ನಿನ್ನ ಸೇವಕನಾದ ನನಗೆ ಯಾಕೆ ತೊಂದರೆಯನ್ನು ಉಂಟುಮಾಡಿದೆ? ನಾನು ನಿನಗೆ ಬೇಸರವನ್ನು ಉಂಟುಮಾಡಿದೆನೇ? ಈ ಜನರೆಲ್ಲರನ್ನು ಮುನ್ನಡೆಸಿಕೊಂಡು ಹೋಗುವ ಭಾರವನ್ನು ನೀನು ನನ್ನ ಮೇಲೆ ಯಾಕೆ ಹಾಕಿದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:11
16 ತಿಳಿವುಗಳ ಹೋಲಿಕೆ  

ಆದರೆ ನಿಮ್ಮ ಸಮಸ್ಯೆಗಳನ್ನೂ ಹೊಣೆಯನ್ನೂ ವ್ಯಾಜ್ಯಗಳನ್ನೂ ನಾನೊಬ್ಬನೇ ಸಹಿಸುವುದು ಹೇಗೆ?


ಆಗ ಮೋಶೆಯು ಯೆಹೋವ ದೇವರ ಬಳಿಗೆ ಬಂದು, “ಸ್ವಾಮಿ, ಈ ಜನರಿಗೆ ಏಕೆ ಕಷ್ಟವನ್ನು ಕೊಟ್ಟಿದ್ದೀರಿ? ಏಕೆ ನನ್ನನ್ನು ಕಳುಹಿಸಿದಿರಿ?


ಇಷ್ಟೇ ಅಲ್ಲ, ಎಲ್ಲಾ ಸಭೆಗಳ ಮೇಲಿರುವ ಚಿಂತೆಯು ನನ್ನನ್ನು ದಿನನಿತ್ಯವೂ ಬಾಧಿಸುತ್ತಿದೆ.


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


ಏಕೆ ನನ್ನ ವ್ಯಥೆಯು ನಿರಂತರವಾಗಿದೆ? ನನ್ನ ಗಾಯವು ಗಡುಸಾಗಿ ಗುಣ ಹೋಗಲೊಲ್ಲದೇಕೆ? ನೀನು ನನಗೆ ನೀರು ಬತ್ತುವ ಕಳ್ಳತೊರೆಯಂತಿರಬೇಕೋ? ಎಂದು ಅರಿಕೆಮಾಡಿಕೊಂಡೆನು.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?


ನಾನು ದೇವರಿಗೆ ಹೀಗೆ ಹೇಳುತ್ತೇನೆ: ನನ್ನನ್ನು ಅಪರಾಧಿ ಎಂದು ನಿರ್ಣಯಿಸಬೇಡಿರಿ. ನನ್ನ ಮೇಲೆ ನಿಮಗಿರುವ ಆಪಾದನೆಗಳನ್ನು ನನಗೆ ತಿಳಿಸಿರಿ.


ಈ ರೀತಿಯಲ್ಲಿ ನೀವು ನನ್ನನ್ನು ನಡೆಸುವುದಾದರೆ, ಈಗಲೇ ನನ್ನನ್ನು ಕೊಂದುಬಿಡಿ. ನಿಮ್ಮ ದೃಷ್ಟಿಯಲ್ಲಿ ನನಗೆ ದಯೆ ದೊರೆತರೆ, ನಾನು ನನ್ನ ಸ್ವಂತ ನಾಶವನ್ನು ಎದುರಿಸದಂತೆ ಕಾಪಾಡಿ,” ಎಂದನು.


ಆಗ ಮೋಶೆಯು ಯೆಹೋವ ದೇವರಿಗೆ ಮೊರೆಯಿಟ್ಟು, “ಈ ಜನರಿಗೆ ನಾನೇನು ಮಾಡಲಿ? ಅವರು ಬಹಳಮಟ್ಟಿಗೆ ನನಗೆ ಕಲ್ಲೆಸೆಯುವುದಕ್ಕಿದ್ದಾರೆ,” ಎಂದನು.


ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು