ಅರಣ್ಯಕಾಂಡ 11:12 - ಕನ್ನಡ ಸಮಕಾಲಿಕ ಅನುವಾದ12 ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಾನು ಇವರಿಗೆ ಹೆತ್ತ ತಾಯಿಯೇ? ಇವರನ್ನು ಮಗುವನ್ನು ಎತ್ತಿಕೊಂಡು ಹೋಗುವಂತೆ, ಮಡಿಲಲ್ಲಿ ಇಟ್ಟುಕೊಂಡು ಅವರ ಪೂರ್ವಿಕರಿಗೆ ಪ್ರಮಾಣಮಾಡಿದ ದೇಶಕ್ಕೆ ನಡೆಸಬೇಕು ಎಂದು ಹೇಳುತ್ತೀಯಲ್ಲಾ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಿಮ್ಮ ದಯೆಗೆ ನಾನು ಅಯೋಗ್ಯನಾದೆನೇ? ‘ಮೊಲೆ ಕೂಸನ್ನು ಎತ್ತಿಕೊಂಡು ಹೋಗುವವಳಂತೆ ಈ ಜನರನ್ನು ತೋಳತೆಕ್ಕೆಯಲ್ಲಿರಿಸಿ, ಅವರ ಪೂರ್ವಜರಿಗೆ ನಾನು ಪ್ರಮಾಣಮಾಡಿದ ನಾಡಿಗೆ ಒಯ್ಯಿ’ ಎಂದು ಹೇಳುತ್ತೀರಲ್ಲವೆ? ನಾನು ಇವರಿಗೆ ಹೆತ್ತ ತಾಯಿಯೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಿನ್ನ ದಯೆಗೆ ನಾನು ಯಾಕೆ ಅಪಾತ್ರನಾದೆ? ನೀನು ನನಗೆ - ಕೂಸನ್ನು ಎತ್ತಿಕೊಂಡು ಹೋಗುವವನಂತೆ ಈ ಜನವನ್ನು ಉಡಿಲಲ್ಲಿಟ್ಟುಕೊಂಡು ನಾನು ಅವರ ಪಿತೃಗಳಿಗೆ ಪ್ರಮಾಣಮಾಡಿ ಕೊಟ್ಟ ದೇಶಕ್ಕೆ ಒಯ್ಯಿ ಎಂದು ಹೇಳುತ್ತೀಯಲ್ಲಾ. ನಾನು ಇವರಿಗೆ ಹೆತ್ತ ತಾಯಿಯೋ? ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಾನು ಇವರಿಗೆ ಹೆತ್ತ ತಾಯಿಯೋ? ನಾನು ಅವರಿಗೆ ಜನ್ಮ ಕೊಡಲಿಲ್ಲವೆಂದು ನಿನಗೆ ಗೊತ್ತಿದೆ. ದಾದಿಯು ಮಗುವನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ನಾನು ನನ್ನ ಮಡಿಲಲ್ಲಿ ಇಟ್ಟು, ನೀನು ಅವರ ಪೂರ್ವಿಕರಿಗೆ ವಾಗ್ದಾನಮಾಡಿರುವ ದೇಶಕ್ಕೆ ಎತ್ತಿಕೊಂಡು ಹೋಗುವಂತೆ ನೀನು ನನಗೇಕೆ ಹೇಳುವೆ? ಅಧ್ಯಾಯವನ್ನು ನೋಡಿ |