Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:25 - ಕನ್ನಡ ಸಮಕಾಲಿಕ ಅನುವಾದ

25 ಯೆಹೋವ ದೇವರು ಮೇಘದೊಳಗಿಂದ ಇಳಿದು, ಅವನ ಸಂಗಡ ಮಾತನಾಡಿ, ಅವನ ಮೇಲಿರುವ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ತೆಗೆದು, ಹಿರಿಯರಾದ ಎಪ್ಪತ್ತು ಮಂದಿಯ ಮೇಲೆ ಇಟ್ಟರು. ಆದ್ದರಿಂದ ಆತ್ಮವು ಅವರ ಮೇಲೆ ನೆಲೆಯಾಗಿದ್ದಾಗ ಅವರು ಪ್ರವಾದಿಸಿದರು. ಆಮೇಲೆ ಅವರು ಪ್ರವಾದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತನಾಡಿದನು. ಮೋಶೆಯ ಮೇಲಿರುವ ಆತ್ಮದಲ್ಲಿ ಸ್ವಲ್ಪವನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು. ಆ ಆತ್ಮವು ಅವರಿಗೆ ದೊರಕಿದಾಗ ಅವರು ಪರವಶರಾಗಿ ಆ ಸಂದರ್ಭದಲ್ಲಿ ಮಾತ್ರ ಪ್ರವಾದಿಸಿದರು. ಆ ಮೇಲೆ ಅವರು ಎಂದಿಗೂ ಪ್ರವಾದಿಸಲೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಸರ್ವೇಶ್ವರ ಮೇಘದಲ್ಲಿ ಇಳಿದುಬಂದು ಅವನೊಡನೆ ಮಾತಾಡಿ ಅವನಿಗೆ ಅನುಗ್ರಹಿಸಲಾಗಿದ್ದ ಆತ್ಮಶಕ್ತಿಯಲ್ಲಿ ಕಿಂಚಿತ್ತನ್ನು ಆ ಎಪ್ಪತ್ತು ಮಂದಿ ಹಿರಿಯರಿಗೂ ಹಂಚಿದರು. ಆ ಶಕ್ತಿ ಅವರ ಮೇಲೆ ಇಳಿದುಬಂದಾಗ ಅವರು ಪರವಶರಾಗಿ ಪ್ರವಾದಿಸಿದರು. ಅಂಥ ಅನುಭವ ಅವರಿಗೆ ಮತ್ತೆ ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆಗ ಯೆಹೋವನು ಮೇಘದಲ್ಲಿ ಇಳಿದುಬಂದು ಮೋಶೆಯೊಡನೆ ಮಾತಾಡಿ ಅವನಲ್ಲಿದ್ದ ಆತ್ಮವನ್ನೇ ಆ ಎಪ್ಪತ್ತು ಮಂದಿ ಹಿರಿಯರಿಗೆ ಕೊಟ್ಟನು. ಆತ್ಮಿಕ ವರಗಳು ಅವರಿಗೆ ಕೊಡಲ್ಪಟ್ಟಾಗ ಅವರು ಪ್ರವಾದಿಗಳಂತೆ ಪ್ರವಾದಿಸಿದರು. ಆದರೆ ಮತ್ತೆ ಅವರು ಹಾಗೆ ಪ್ರವಾದಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:25
28 ತಿಳಿವುಗಳ ಹೋಲಿಕೆ  

ಆಗ ನಾನು ಇಳಿದುಬಂದು, ಅಲ್ಲಿ ನಿನ್ನ ಸಂಗಡ ಮಾತನಾಡುವೆನು. ನಿನಗೆ ನಾನು ಅನುಗ್ರಹಿಸಿರುವ ಆತ್ಮಶಕ್ತಿಯಲ್ಲಿ ಸ್ವಲ್ಪವನ್ನು ಅವರಿಗೂ ಕೊಡುವೆನು. ಆಗ ನೀನು ಅದನ್ನು ಒಬ್ಬನೇ ಹೊತ್ತುಕೊಳ್ಳದ ಹಾಗೆ ಅವರು ನಿನ್ನ ಸಂಗಡ ಜನರ ಭಾರವನ್ನು ಹೊರುವರು,” ಎಂದು ಹೇಳಿದರು.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ಯೆಹೋವ ದೇವರು ಮೇಘ ಸ್ತಂಭದಲ್ಲಿ ಇಳಿದು ಗುಡಾರದ ಬಾಗಿಲ ಬಳಿಯಲ್ಲಿ ನಿಂತು, ಆರೋನನನ್ನೂ ಮಿರ್ಯಾಮಳನ್ನೂ ಕರೆದಾಗ, ಅವರಿಬ್ಬರು ಮುಂದೆ ಬಂದರು.


ಯಾವ ಪ್ರವಾದನೆಯೂ ಎಂದೂ ಮನುಷ್ಯನ ಚಿತ್ತದಿಂದ ಬರಲಿಲ್ಲ, ಆದರೆ ಪ್ರವಾದಿಗಳು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಪಡೆದುಕೊಂಡಿದ್ದನ್ನೇ ಮಾತನಾಡಿದರು.


ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.


ಎಲ್ಲಾ ಉತ್ತಮ ಮತ್ತು ಪೂರ್ಣವಾದ ವರಗಳೂ ಮೇಲಿನಿಂದ ಬಂದವುಗಳೇ, ಅವು ಪರಲೋಕದ ಬೆಳಕಿನ ತಂದೆಯಿಂದ ಇಳಿದು ಬರುತ್ತವೆ. ಆ ತಂದೆಯು ಬದಲಾಗುವ ನೆರಳಿನಂತೆ ಬದಲಾಗುವವರಲ್ಲ.


ಪ್ರವಾದಿಗಳ ಆತ್ಮಗಳು ಪ್ರವಾದಿಗಳ ಸ್ವಾಧೀನದಲ್ಲಿವೆ.


ಅವರಲ್ಲೊಬ್ಬ ಅಗಬ ಎಂಬವನು ಪವಿತ್ರಾತ್ಮ ಪ್ರೇರಿತನಾಗಿ ಎದ್ದು ನಿಂತುಕೊಂಡು ಲೋಕಕ್ಕೆಲ್ಲಾ ಭೀಕರ ಕ್ಷಾಮ ಬರುವುದೆಂದು ತಿಳಿಸಿದನು. ಇದು ಕ್ಲೌದ್ಯನ ಆಳ್ವಿಕೆಯಲ್ಲಿ ಸಂಭವಿಸಿತು.


ಮೇಘಸ್ತಂಭದಿಂದ ಅವರ ಸಂಗಡ ಮಾತನಾಡಿದರು. ದೇವರು ಅವರಿಗೆ ಕೊಟ್ಟ ಶಾಸನಗಳನ್ನೂ ತೀರ್ಪುಗಳನ್ನೂ ಅವರು ಕೈಗೊಂಡರು.


ಏಕೆಂದರೆ ಇಸ್ರಾಯೇಲರ ಎಲ್ಲಾ ಪ್ರಯಾಣಗಳಲ್ಲಿ ಅವರ ಕಣ್ಣುಗಳ ಮುಂದೆ ಹಗಲಿನಲ್ಲಿ ಯೆಹೋವ ದೇವರ ಮೇಘವು ಗುಡಾರದ ಮೇಲೆ ಇತ್ತು. ರಾತ್ರಿಯಲ್ಲಿ ಮೇಘದೊಳಗೆ ಅಗ್ನಿಯು ಪ್ರಕಾಶಿಸುತ್ತಿತ್ತು.


ಆಗ ಯೆಹೋವ ದೇವರು ಮೇಘದಲ್ಲಿ ಇಳಿದುಬಂದು ಅಲ್ಲಿ ಅವನ ಸಂಗಡ ನಿಂತುಕೊಂಡು, ಯೆಹೋವ ದೇವರು ತಮ್ಮ ಹೆಸರನ್ನು ಪ್ರಕಟಮಾಡಿದರು.


ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು,


ಅವನ ಮೇಲೆ ಯೆಹೋವ ದೇವರ ಆತ್ಮವು ಬಂದದ್ದರಿಂದ, ಅವನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಯುದ್ಧಮಾಡುವುದಕ್ಕೆ ಹೊರಟಾಗ, ಯೆಹೋವ ದೇವರು ಅವನ ಕೈಗೆ ಎರಡು ನದಿಗಳ ಮಧ್ಯದಲ್ಲಿರುವ ಅರಾಮ್ ರಾಜ್ಯದ ಅರಸನಾದ ಕೂಷನ್ ರಿಷಾತಯಿಮನನ್ನು ಒಪ್ಪಿಸಿಕೊಟ್ಟರು. ಅವನು ಕೂಷನ್ ರಿಷಾತಯಿಮನ ಮೇಲೆ ಜಯಹೊಂದಿದನು.


ಆಗ ಆತನು ಪೂರ್ವಕಾಲದ ದಿವಸಗಳನ್ನೂ, ಮೋಶೆಯನ್ನೂ, ಅವನ ಜನರನ್ನೂ ಜ್ಞಾಪಕಮಾಡಿಕೊಂಡು “ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಸುರಕ್ಷಿತವಾಗಿ ಮೇಲಕ್ಕೆ ಬರಮಾಡಿದವನು ಎಲ್ಲಿ? ಅವರ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?


ಇಸ್ರಾಯೇಲಿನ ಮನೆತನದವರಲ್ಲಿ ಎಪ್ಪತ್ತು ಮಂದಿ ಹಿರಿಯರೂ, ಅವರ ಮಧ್ಯದಲ್ಲಿ ಶಾಫಾನನ ಮಗನಾದ ಯಾಜನ್ಯನೂ ನಿಂತುಕೊಂಡಿದ್ದರು. ಪ್ರತಿಯೊಬ್ಬನ ಕೈಯಲ್ಲೂ ಅವನವನ ಧೂಪಾರತಿ ಇತ್ತು. ಧೂಪದ ಸುವಾಸನೆಯು ಮೇಘವಾಗಿ ಏರುತ್ತಿತ್ತು.


ಆದರೂ ಈಗ ನೀವು ಅವರ ಪಾಪವನ್ನು ಕ್ಷಮಿಸಬೇಕು. ಇಲ್ಲವಾದರೆ ನೀವು ಬರೆದ ಗ್ರಂಥದಿಂದ ನನ್ನ ಹೆಸರನ್ನು ಅಳಿಸಿಬಿಡಿ,” ಎಂದು ಬೇಡಿಕೊಂಡನು.


ಮೋಶೆಯು ಎದ್ದು ದಾತಾನ್, ಅಬೀರಾಮರ ಬಳಿಗೆ ಹೋದನು. ಇಸ್ರಾಯೇಲರ ಹಿರಿಯರು ಅವನ ಹಿಂದೆ ಹೋದರು.


ಬಿಳಾಮನು ತನ್ನ ಕಣ್ಣೆತ್ತಿ ಇಸ್ರಾಯೇಲರು ಅವರವರ ಗೋತ್ರಗಳ ಪ್ರಕಾರ ತಮ್ಮ ಡೇರೆಗಳಲ್ಲಿ ವಾಸವಾಗಿರುವುದನ್ನು ನೋಡಿದಾಗ, ದೇವರಾತ್ಮ ಪ್ರೇರಿತನಾಗಿ


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು