ಅರಣ್ಯಕಾಂಡ 11:28 - ಕನ್ನಡ ಸಮಕಾಲಿಕ ಅನುವಾದ28 ಅದಕ್ಕೆ ಯೌವನಸ್ಥರಲ್ಲಿ ಒಬ್ಬನೂ, ಮೋಶೆಯ ಸೇವಕನೂ ಆಗಿದ್ದ ನೂನನ ಮಗ ಯೆಹೋಶುವನು, “ನನ್ನ ಒಡೆಯನಾದ ಮೋಶೆಯೇ, ಅವರನ್ನು ತಡೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮೋಶೆಯ ಶಿಷ್ಯನಾದ ನೂನನ ಮಗನಾದ ಯೆಹೋಶುವನು ಮೋಶೆಗೆ, “ಗುರುವೇ, ಅವರು ಪ್ರವಾದಿಸುವುದನ್ನು ನಿಲ್ಲಿಸಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಚಿಕ್ಕಂದಿನಿಂದ ಮೋಶೆಗೆ ಶಿಷ್ಯನಾಗಿದ್ದ ಹಾಗೂ ನೂನನ ಮಗನಾಗಿದ್ದ ಯೆಹೋಶುವನು ಮೋಶೆಗೆ, “ಗುರುವೇ, ಅವರಿಗೆ ಅದು ಬೇಡವೆನ್ನಬೇಕು ಎಂದು ವಿನಂತಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಯೌವನದಿಂದ ಮೋಶೆಗೆ ಶಿಷ್ಯನಾದ ನೂನನ ಮಗ ಯೆಹೋಶುವನು ಮೋಶೆಗೆ - ಸ್ವಾಮೀ, ಅವರಿಗೆ ಬೇಡವೆನ್ನಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೂನನ ಮಗನಾದ ಯೆಹೋಶುವನು ಮೋಶೆಗೆ, “ಸ್ವಾಮೀ, ನೀನು ಅವರನ್ನು ತಡೆಯಬೇಕು” ಎಂದನು. (ಯೆಹೋಶುವನು ಯೌವನಸ್ಥನಾಗಿದ್ದಾಗಿನಿಂದಲೂ ಮೋಶೆಯ ಸಹಾಯಕನಾಗಿದ್ದನು.) ಅಧ್ಯಾಯವನ್ನು ನೋಡಿ |