Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:10 - ಕನ್ನಡ ಸಮಕಾಲಿಕ ಅನುವಾದ

10 ಆ ಮೇಘವು ಗುಡಾರದ ಮೇಲಿನಿಂದ ತೊಲಗಿ ಹೋಯಿತು. ಮಿರ್ಯಾಮಳು ಹಿಮದ ಹಾಗೆ ಕುಷ್ಠವುಳ್ಳವಳಾದಳು. ಆರೋನನು ಮಿರ್ಯಾಮಳ ಕಡೆಗೆ ನೋಡಿದಾಗ, ಇಗೋ, ಅವಳು ಕುಷ್ಠರೋಗಿಯಾಗಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆ ಮೇಘವು ದೇವದರ್ಶನದ ಗುಡಾರದ ಮೇಲಿನಿಂದ ಬಿಟ್ಟುಹೋಯಿತು. ಪಕ್ಕನೆ ಮಿರ್ಯಾಮಳಿಗೆ ತೊನ್ನು ಹತ್ತಿದ್ದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿ ಹೋಯಿತು. ಆರೋನನು ಮಿರ್ಯಾಮಳನ್ನು ನೋಡಿದಾಗ ಆಕೆಗೆ ತೊನ್ನು ಹಿಡಿದಿದೆ ಎಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೇಘವು ಗುಡಾರದಿಂದ ಮೇಲಕ್ಕೆ ಎದ್ದಿತು. ಆರೋನನು ಹಿಂತಿರುಗಿ ಮಿರ್ಯಾಮಳನ್ನು ನೋಡಿದನು. ಆಕೆಯ ಚರ್ಮವು ಹಿಮದಂತೆ ಬೆಳ್ಳಗಾಗಿತ್ತು. ಆಕೆಗೆ ಭಯಂಕರವಾದ ಚರ್ಮರೋಗ ಹಿಡಿದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:10
13 ತಿಳಿವುಗಳ ಹೋಲಿಕೆ  

ನೀವು ಈಜಿಪ್ಟಿನಿಂದ ಹೊರಗೆ ಬಂದಾಗ, ಮಾರ್ಗದಲ್ಲಿ ನಿಮ್ಮ ದೇವರಾದ ಯೆಹೋವ ದೇವರು ಮಿರ್ಯಾಮಗಳಿಗೆ ಮಾಡಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ.


ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.


ಯೆಹೋವ ದೇವರು ಅರಸನನ್ನು ಮರಣದ ದಿವಸದವರೆಗೂ ಕುಷ್ಠರೋಗದಿಂದ ಬಾಧಿಸಿದ್ದರಿಂದ, ಅವನು ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅರಸನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಅವರು ತಮ್ಮ ಮಕ್ಕಳನ್ನು ಬೆಳೆಸಿದ್ದರೂ, ಅವರ ಮಕ್ಕಳಲ್ಲಿ ಯಾರೂ ಉಳಿಯದ ಹಾಗೆ ನಾನು ಅವರನ್ನು ಮಕ್ಕಳಿಲ್ಲದವರನ್ನಾಗಿ ಮಾಡುವೆನು. ನಾನು ಅವರನ್ನು ಬಿಟ್ಟು ಹೋಗುವಾಗ ಅವರಿಗೆ ಕಷ್ಟ!


ಇದಲ್ಲದೆ ಯೆಹೋವ ದೇವರು ಅವನ ಸಂಗಡ ಇನ್ನೂ ಮಾತನಾಡಿ, “ನಿನ್ನ ಕೈಯನ್ನು ನಿನ್ನ ಉಡಿಯಲ್ಲಿ ಇಟ್ಟುಕೋ,” ಎಂದಾಗ, ಅವನು ತನ್ನ ಕೈಯನ್ನು ಉಡಿಯಲ್ಲಿ ಹಾಕಿ ಹೊರಗೆ ತೆಗೆದನು. ಇಗೋ, ಅವನ ಕೈ ಕುಷ್ಠದಿಂದ ಹಿಮದಂತೆ ಆಗಿತ್ತು.


“ಚರ್ಮರೋಗವಿರುವವರೆಲ್ಲರನ್ನು, ಮೇಹಸ್ರಾವವುಳ್ಳವರೆಲ್ಲರನ್ನು ಮತ್ತು ಹೆಣದ ಸೋಂಕಿನಿಂದ ಅಶುದ್ಧರಾದವರೆಲ್ಲರನ್ನು ಪಾಳೆಯದೊಳಗಿಂದ ಹೊರಗೆ ಕಳುಹಿಸಬೇಕೆಂದು ಇಸ್ರಾಯೇಲರಿಗೆ ಆಜ್ಞಾಪಿಸು.


ಆಗ ಊರು ಬಾಗಿಲ ದ್ವಾರದಲ್ಲಿ ನಾಲ್ಕು ಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರು, “ನಾವು ಸಾಯುವವರೆಗೂ ಇಲ್ಲಿ ಕುಳಿತುಕೊಂಡಿರುವುದೇನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು