Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:11 - ಕನ್ನಡ ಸಮಕಾಲಿಕ ಅನುವಾದ

11 ಆರೋನನು ಮೋಶೆಗೆ, “ಅಯ್ಯೋ ನನ್ನ ಒಡೆಯನೇ, ನಾವು ಪಾಪಮಾಡಿದೆವು. ಬುದ್ಧಿ ಇಲ್ಲದೆ ಮಾಡಿದ ಈ ಪಾಪವನ್ನು ನಮ್ಮ ಮೇಲೆ ಹಾಕಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಆರೋನನು ಮೋಶೆಗೆ, “ನನ್ನ ಒಡೆಯನೇ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದೆವು. ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ ಎಂದು ನಿನ್ನನ್ನು ಬೇಡಿಕೊಳ್ಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಆರೋನನು ಮೋಶೆಗೆ, “ಅಯ್ಯಾ, ನಾವು ಮೂರ್ಖರಾಗಿ ನಡೆದು ಪಾಪಕಟ್ಟಿಕೊಂಡೆವು. ಈ ಪಾಪದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡ,” ಇದು ನನ್ನ ವಿನಂತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಗ ಆರೋನನು ಮೋಶೆಗೆ - ಅಯ್ಯಾ, ನಾವು ವಿವೇಕವಿಲ್ಲದೆ ನಡೆದು ದೋಷಿಗಳಾದರೂ ಈ ದೋಷದ ಫಲವನ್ನು ನಾವು ಅನುಭವಿಸುವಂತೆ ಮಾಡಬೇಡವೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಆರೋನನು ಮೋಶೆಗೆ, “ಸ್ವಾಮೀ, ನಾವು ಮೂರ್ಖತನದಿಂದ ಮಾಡಿದ ಪಾಪಕ್ಕೆ ದಯವಿಟ್ಟು ನಮ್ಮನ್ನು ದಂಡಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:11
15 ತಿಳಿವುಗಳ ಹೋಲಿಕೆ  

ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


“ನನ್ನ ಒಡೆಯನೇ, ನನ್ನ ಅಕ್ರಮವನ್ನು ಎಣಿಸದೆ ಅರಸನಾದ ನನ್ನ ಒಡೆಯನು ಯೆರೂಸಲೇಮಿನಿಂದ ಹೊರಟು ಬರುವ ದಿವಸದಲ್ಲಿ ತನ್ನ ದಾಸನು ಮೂರ್ಖತನದಿಂದ ಮಾಡಿದ ಕಾರ್ಯವನ್ನು ನೆನಸದೆ, ಅದನ್ನು ತನ್ನ ಹೃದಯದಲ್ಲಿ ಇಡದೆ ಇರಲಿ.


“ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ, ಇಲ್ಲವೆ ಕೆಟ್ಟದ್ದಾಗಿ ಆಲೋಚಿಸಿದ್ದರೆ, ನಿನ್ನ ಬಾಯಿಯ ಮೇಲೆ ಕೈಯಿಟ್ಟುಕೊ.


ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದಿಂದ ಕೆಲವರು ಬಂದು ನಿನ್ನ ಪಾದಕ್ಕೆ ಬೀಳುವಂತೆಯೂ ನಿನ್ನನ್ನು ನಾನು ಪ್ರೀತಿಸಿದ್ದನ್ನು ತಿಳಿಯುವಂತೆಯೂ ಮಾಡುವೆನು.


ಆಗ ಸೀಮೋನನು, “ನೀವು ಹೇಳಿದ ಯಾವುದೂ ನನಗೆ ಸಂಭವಿಸದಂತೆ ನನಗೋಸ್ಕರ ಕರ್ತ ಯೇಸುವಿನಲ್ಲಿ ಪ್ರಾರ್ಥಿಸಿರಿ,” ಎಂದು ಬೇಡಿಕೊಂಡನು.


ಪ್ರವಾದಿಯಾದ ಯೆರೆಮೀಯನಿಗೆ, “ನಮ್ಮ ವಿಜ್ಞಾಪನೆ ನಿಮ್ಮ ಮುಂದೆ ಬರಲಿ. ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ, ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ? ನಮಗೋಸ್ಕರವೂ ಎಂದರೆ ಈ ಸಮಸ್ತ ಶೇಷಕ್ಕೋಸ್ಕರವೂ,


ಏಕೆಂದರೆ ಯೆಹೋವ ದೇವರಿಗೆ ಪೂರ್ಣವಾಗಿ ಸಮರ್ಪಿಸಿಕೊಂಡವರ ಹೃದಯವನ್ನು ಬಲಪಡಿಸುವುದಕ್ಕೆ ಅವರ ಕಣ್ಣುಗಳು ಭೂಲೋಕದ ಎಲ್ಲಾ ಕಡೆ ಇವೆ. ಆದರೆ ಈಗ ನೀನು ಬುದ್ಧಿಹೀನನಾಗಿ ನಡೆದುಕೊಂಡಿದ್ದೀಯೆ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದನು.


ಆಗ ಅರಸನು ಉತ್ತರವಾಗಿ ದೇವರ ಮನುಷ್ಯನಿಗೆ, “ನನ್ನ ಕೈ ಗುಣವಾಗುವ ಹಾಗೆ ನೀನು ನಿನ್ನ ದೇವರಾದ ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡು, ನನಗೋಸ್ಕರ ಪ್ರಾರ್ಥನೆ ಮಾಡು,” ಎಂದನು. ಆಗ ದೇವರ ಮನುಷ್ಯನು ಯೆಹೋವ ದೇವರ ಕಟಾಕ್ಷವನ್ನು ಬೇಡಿಕೊಂಡದ್ದರಿಂದ ಅರಸನ ಕೈಗುಣವಾಗಿ, ಮುಂಚಿನ ಹಾಗೆ ಆಯಿತು.


ಜನರೆಲ್ಲರು ಸಮುಯೇಲನಿಗೆ, “ನಾವು ಸಾಯದ ಹಾಗೆ ನಿನ್ನ ದೇವರಾದ ಯೆಹೋವ ದೇವರಿಗೆ ನಿನ್ನ ಸೇವಕರಿಗೋಸ್ಕರ ಪ್ರಾರ್ಥನೆ ಮಾಡು. ಏಕೆಂದರೆ ನಮಗೆ ಒಬ್ಬ ಅರಸನು ಬೇಕೆಂದು ಕೇಳಿ, ನಮ್ಮ ಸಮಸ್ತ ಪಾಪಗಳಿಗೆ ಕೆಟ್ಟದ್ದನ್ನು ಕೂಡಿಸಿದ್ದೇವೆ,” ಎಂದು ಹೇಳಿದರು.


“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.


ನೀವು ಹೇಳಿದಂತೆ ನಿಮ್ಮ ಕುರಿದನಗಳನ್ನು ತೆಗೆದುಕೊಳ್ಳಿರಿ. ನನ್ನನ್ನು ಸಹ ಆಶೀರ್ವದಿಸಿರಿ,” ಎಂದನು.


ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ, ಮೋಶೆಯು ಯೆಹೋವ ದೇವರಿಗೆ ಪ್ರಾರ್ಥನೆಮಾಡಿದನು ಆಗ ಬೆಂಕಿಯು ಆರಿಹೋಯಿತು.


ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತು ಹೋದ ಶಿಶುವಿನ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು