Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:8 - ಕನ್ನಡ ಸಮಕಾಲಿಕ ಅನುವಾದ

8 ನಾನು ಗೂಢವಾಗಿ ಅಲ್ಲ ಸ್ಪಷ್ಟವಾಗಿ, ಮುಖಾಮುಖಿಯಾಗಿ ಅಂದರೆ, ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವ ದೇವರ ರೂಪವನ್ನು ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಅವನ ಸಂಗಡ ಗುಪ್ತವಾಗಿ ಅಲ್ಲ, ಮುಖಾಮುಖಿಯಾಗಿ ಅಂದರೆ ಪ್ರತ್ಯಕ್ಷವಾಗಿ ಅವನ ಸಂಗಡ ಮಾತನಾಡುತ್ತೇನೆ. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರುದ್ಧವಾಗಿ ಮಾತನಾಡುವುದಕ್ಕೆ ಏಕೆ ಭಯಪಡಲಿಲ್ಲ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನಾನವನ ಸಂಗಡ ಮಾತಾಡುವುದು ನಿಗೂಢವಾಗಿ ಅಲ್ಲ, ಮುಖಾಮುಖಿಯಾಗಿ, ಸ್ಪಷ್ಟವಾಗಿ, ಒಗಟಾಗಿಯಲ್ಲ ಸರ್ವೇಶ್ವರನ ಸ್ವರೂಪವನ್ನೆ ಕಂಡವನಾತ! ಇಂತಿರಲು ನನ್ನ ದಾಸ ಮೋಶೆಗೆ ವಿರುದ್ಧ ಮಾತನಾಡಲು ನೀವೇಕೆ ಭಯಪಡಲಿಲ್ಲಾ? ಎಂದು ಹೇಳಿ ಕೋಪದಿಂದ ಹೊರಟುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನ ಸಂಗಡ ನಾನು ಗೂಢವಾಗಿ ಅಲ್ಲ, ಪ್ರತ್ಯಕ್ಷದಲ್ಲಿ ಸ್ಪಷ್ಟವಾಗಿಯೇ ಮಾತಾಡುವೆನು. ಅವನು ಯೆಹೋವನ ಸ್ವರೂಪವನ್ನೇ ದೃಷ್ಟಿಸುವನು. ಹೀಗಿರಲು ನೀವು ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡುವದಕ್ಕೆ ಭಯಪಡಬೇಕಾಗಿತ್ತು ಎಂದು ಹೇಳಿ ಕೋಪಗೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಅವನೊಂದಿಗೆ ಗೂಡಾರ್ಥದಿಂದ ಮಾತಾಡದೆ ನೇರವಾಗಿಯೂ ಸ್ಪಷ್ಟವಾಗಿಯೂ ಮಾತಾಡುತ್ತೇನೆ. ಅವನು ನನ್ನ ಸ್ವರೂಪವನ್ನೇ ನೋಡಬಲ್ಲನು. ನನ್ನ ಸೇವಕನಾದ ಮೋಶೆಗೆ ವಿರೋಧವಾಗಿ ಮಾತಾಡಲು ನೀವು ಯಾಕೆ ಭಯಪಡಲಿಲ್ಲ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:8
39 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ.


ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ಆಗ ಮುಖಾಮುಖಿಯಾಗಿ ನೋಡುವೆವು. ಈಗ ಸ್ವಲ್ಪ ಮಾತ್ರ ನನಗೆ ತಿಳಿದಿದೆ. ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ, ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.


ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.


ಒಬ್ಬ ಮನುಷ್ಯನು ತನ್ನ ಸ್ನೇಹಿತನ ಸಂಗಡ ಮಾತನಾಡುವಂತೆ ಯೆಹೋವ ದೇವರು ಮೋಶೆಯ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದರು. ತರುವಾಯ ಅವನು ಪಾಳೆಯಕ್ಕೆ ಹಿಂದಿರುಗಿ ಹೋಗುತ್ತಿದ್ದನು. ಆದರೆ ಅವನ ಸೇವಕನೂ ನೂನನ ಮಗನೂ ಆದ ಯೆಹೋಶುವನೆಂಬ ಯೌವನಸ್ಥನು ಗುಡಾರವನ್ನು ಬಿಟ್ಟುಹೋಗಲಿಲ್ಲ.


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ಇನ್ನು ಮೇಲೆ ನಾನು ನಿಮ್ಮನ್ನು ಆಳುಗಳೆಂದು ಕರೆಯುವುದಿಲ್ಲ. ಏಕೆಂದರೆ ತನ್ನ ಧಣಿಯು ಮಾಡುವಂಥದ್ದು ಆಳಿಗೆ ತಿಳಿಯುವುದಿಲ್ಲ. ಆದರೆ ನಾನು ನಿಮ್ಮನ್ನು ಸ್ನೇಹಿತರೆಂದು ಕರೆದಿದ್ದೇನೆ. ಏಕೆಂದರೆ ನನ್ನ ತಂದೆಯಿಂದ ಕೇಳಿದ್ದನ್ನೆಲ್ಲಾ ನಾನು ನಿಮಗೆ ತಿಳಿಯಪಡಿಸಿದ್ದೇನೆ.


ಆದರೆ ಮುಖ್ಯವಾಗಿ ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಶರೀರಾನುಸಾರ ನಡೆದು ಪ್ರಭುತ್ವವನ್ನು ತಿರಸ್ಕಾರ ಮಾಡುವವರನ್ನು ಹೀಗೆ ಶಿಕ್ಷಿಸುವರು. ಇವರು ಯಾರಿಗೂ ಹೆದರದೆ ಸ್ವೇಚ್ಛಾಪರರಾಗಿದ್ದಾರೆ. ದುರಹಂಕಾರದಿಂದ ಸ್ವರ್ಗೀಯ ಜೀವಿಗಳನ್ನು ದೂಷಿಸುತ್ತಾರೆ.


ದೇವರೊಬ್ಬರೇ ಅಮರತ್ವವುಳ್ಳವರೂ ಯಾರೂ ಸಮೀಪಿಸಲಾರದ ಬೆಳಕಿನಲ್ಲಿ ವಾಸಿಸುವವರೂ ಆಗಿದ್ದಾರೆ. ಯಾವ ಮನುಷ್ಯನೂ ದೇವರನ್ನು ಕಾಣಲಿಲ್ಲ. ಯಾರೂ ಕಾಣಲಾರರು. ದೇವರಿಗೆ ಮಾನವೂ ಬಲವೂ ಸದಾಕಾಲಕ್ಕೂ ಇರಲಿ. ಆಮೆನ್.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಬೇರೆ ಯಾರೂ ಮಾಡದ ಕ್ರಿಯೆಗಳನ್ನು ನಾನು ಅವರ ನಡುವೆ ಮಾಡದೆ ಹೋಗಿದ್ದರೆ ಅವರಿಗೆ ಪಾಪವು ಇರುತ್ತಿರಲಿಲ್ಲ. ಆದರೆ ಈಗ ಅವರು ನನ್ನ ಕ್ರಿಯೆಗಳನ್ನು ಕಂಡೂ ನನ್ನನ್ನೂ ನನ್ನ ತಂದೆಯನ್ನೂ ದ್ವೇಷಮಾಡಿದ್ದಾರೆ.


ನಾನಾದರೋ ನೀತಿಯಲ್ಲಿ ನಿಮ್ಮ ಮುಖವನ್ನು ನೋಡುವೆನು. ನಾನು ಎಚ್ಚೆತ್ತಾಗ ನಿಮ್ಮ ಹೋಲಿಕೆಯನ್ನೇ ಕಂಡು ತೃಪ್ತನಾಗುವೆನು.


ಹಾಗೆಯೇ ಈ ದುಃಸ್ವಪ್ನದವರೂ ಶರೀರವನ್ನು ಮಲಿನಮಾಡಿಕೊಳ್ಳುವವರೂ ಪ್ರಭುತ್ವವನ್ನು ಅಸಡ್ಡೆಮಾಡುವವರೂ ದೇವದೂತರುಗಳನ್ನು ದೂಷಿಸುವವರೂ ಆಗಿದ್ದಾರೆ.


ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ಹೀಗೆ ಒಬ್ಬ ಪ್ರವಾದಿಯ ಮೂಲಕ ಹೇಳಿದ ಮಾತು ನೆರವೇರಿತು: “ನಾನು ಸಾಮ್ಯಗಳನ್ನು ಹೇಳುವಂತೆ ನನ್ನ ಬಾಯಿ ತೆರೆಯುವೆನು. ನಾನು ಲೋಕ ಪ್ರಾರಂಭದಿಂದ ಮರೆಯಾದವುಗಳನ್ನು ಪ್ರಕಟಪಡಿಸುವೆನು.”


ಆಗ ನಾನು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ‘ಅವನು ಸಾಮ್ಯಗಳನ್ನು ಹೇಳುವುದಿಲ್ಲವೇ?’ ಎಂದು ನನ್ನ ವಿಷಯದಲ್ಲಿ ಅವರು ಹೇಳುತ್ತಾರೆ,” ಎಂದೆನು.


“ಮನುಷ್ಯಪುತ್ರನೇ, ಇಸ್ರಾಯೇಲಿನ ಮನೆತನದವರಿಗೆ ಸಾಮ್ಯಗಳನ್ನು ಒಗಟಾಗಿ ಹೇಳು.


ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸುತ್ತೀರಿ? ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮಮಾಡುವಿರಿ?


ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ?


ಸಾಮ್ಯಕ್ಕೆ ನನ್ನ ಕಿವಿಗೊಟ್ಟು ಒಗಟನ್ನು ಕಿನ್ನರಿಯಿಂದ ಬಿಚ್ಚುವೆನು.


ಆದ್ದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರಿ. ಯೆಹೋವ ದೇವರು ಹೋರೇಬಿನಲ್ಲಿ ಬೆಂಕಿಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿಲ್ಲವಲ್ಲ.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ಅವರು ಈ ದೇಶದ ನಿವಾಸಿಗಳಿಗೆ ಅದನ್ನು ಹೇಳುವರು. ನೀವು ಈ ಜನರ ಸಂಗಡ ಇದ್ದೀಯೆಂದೂ, ಯೆಹೋವ ದೇವರಾದ ನೀವೇ ಮುಖಾಮುಖಿಯಾಗಿ ಕಾಣಿಸಿಕೊಳ್ಳುತ್ತೀರಿ ಎಂದೂ ನೀವು ಹಗಲು ಹೊತ್ತಿನಲ್ಲಿ ಮೇಘಸ್ತಂಭದಲ್ಲಿಯೂ, ರಾತ್ರಿಯಲ್ಲಿ ಅಗ್ನಿಸ್ತಂಭದಲ್ಲಿಯೂ ಅವರ ಮುಂದೆ ನಡೆಯುತ್ತೀರಿ ಎಂದೂ ನೀವಿರುವ ಮೇಘವು ಇಸ್ರಾಯೇಲರ ಮೇಲೆ ಇರುವುದಾಗಿಯೂ ಎಂದೂ ಅವರು ಈಗಾಗಲೇ ಕೇಳಿದ್ದಾರೆ.


ಆದರೆ ಆರೋನನು ಮತ್ತು ಇಸ್ರಾಯೇಲರೆಲ್ಲರೂ ಮೋಶೆಯನ್ನು ನೋಡಿದಾಗ, ಇಗೋ, ಅವನ ಮುಖವು ಪ್ರಕಾಶಿಸುತ್ತಿತ್ತು. ಆದ್ದರಿಂದ ಅವರು ಅವನ ಹತ್ತಿರ ಬರುವುದಕ್ಕೆ ಭಯಪಟ್ಟರು.


ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು.


ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು,


ಆಗ ಯಾಕೋಬನು, “ನಾನು ದೇವರನ್ನು ಮುಖಾಮುಖಿಯಾಗಿ ನೋಡಿದರೂ, ನನ್ನ ಪ್ರಾಣ ಉಳಿಯಿತು,” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು.


ಮೇಲಿನ ಆಕಾಶದಲ್ಲಾಗಲಿ, ಕೆಳಗಿನ ಭೂಮಿಯಲ್ಲಾಗಲಿ, ಭೂಮಿಯ ಕೆಳಗಿರುವ ನೀರುಗಳಲ್ಲಾಗಲಿ ಇರುವ ಯಾವುದರ ವಿಗ್ರಹವನ್ನಾಗಲಿ, ರೂಪವನ್ನಾಗಲಿ ನೀನು ಮಾಡಿಕೊಳ್ಳಬಾರದು.


ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು ಅರ್ಥಮಾಡಿಕೊಳ್ಳಲು ಇವು ಬರೆಯಲಾಗಿವೆ.


ಪ್ರವಾದಿಯಿಂದ ಯೆಹೋವ ದೇವರು ಇಸ್ರಾಯೇಲರನ್ನು ಈಜಿಪ್ಟಿನೊಳಗಿಂದ ಬರಮಾಡಿ, ಆ ಪ್ರವಾದಿಯಿಂದಲೇ ಆತನು ಅವರನ್ನು ಕಾಪಾಡಿದರು.


ತುತೂರಿಯ ಧ್ವನಿಯು ಬರಬರುತ್ತಾ ಹೆಚ್ಚಾಗುತ್ತಾ ಇತ್ತು. ಆಗ ಮೋಶೆಯು ದೇವರೊಡನೆ ಮಾತನಾಡಿದನು. ಅವನಿಗೆ ದೇವರು ಉತ್ತರಕೊಟ್ಟರು.


ಮೋಶೆಯು ಯೆಹೋವ ದೇವರ ಸಂಗಡ ಮಾತನಾಡುವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸಿದಾಗ, ಅವನು ಒಡಂಬಡಿಕೆಯ ಮಂಜೂಷದ ಮೇಲೆ ಇರುವ ಕರುಣಾಸನದ ಮೇಲಿನಿಂದ ಎರಡು ಕೆರೂಬಿಗಳ ಮಧ್ಯದಿಂದ ತನ್ನ ಸಂಗಡ ಮಾತನಾಡುವ ಧ್ವನಿಯನ್ನು ಮೋಶೆಯು ಕೇಳಿದನು. ಹೀಗೆ ದೇವರು ಅವನ ಸಂಗಡ ಮಾತನಾಡಿದರು.


ನನ್ನಂಥ ಒಬ್ಬ ಪ್ರವಾದಿಯನ್ನು ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ನಿಮ್ಮ ಸಹೋದರರ ನಡುವೆಯಿಂದ ಎಬ್ಬಿಸುವರು. ಆ ಪ್ರವಾದಿಯ ಮಾತನ್ನು ನೀವು ಕೇಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು