Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:9 - ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9-10 ಆ ಮೇಘವು ದೇವದರ್ಶನದ ಗುಡಾರದಿಂದ ಅದೃಶ್ಯವಾದದ್ದೇ ಇಗೋ, ಮಿರ್ಯಾಮಳ ಚರ್ಮ ಹಿಮದಂತೆ ಬಿಳಿಚಿಕೊಂಡಿತ್ತು. ಆಕೆಗೆ ತೊನ್ನು ಹತ್ತಿತ್ತು. ಆರೋನನು ಆಕೆಯನ್ನು ನೋಡಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಆ ಮೇಘವು ದೇವದರ್ಶನದ ಗುಡಾರದ ಬಳಿಯಿಂದ ಹೋದಾಗ, ಆಹಾ, ವಿುರ್ಯಾಮಳಿಗೆ ತೊನ್ನು ಹತ್ತಿದದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿಹೋಗಿತ್ತು. ಆರೋನನು ಆಕೆಯನ್ನು ನೋಡಲಾಗಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:9
5 ತಿಳಿವುಗಳ ಹೋಲಿಕೆ  

ಅಪರಾಧಗಳನ್ನು ಅರಿಕೆಮಾಡಿ, ನನ್ನ ಮುಖವನ್ನು ಹುಡುಕುವವರೆಗೂ, ನಾನು ತಿರುಗಿಕೊಂಡು ನನ್ನ ಗುಹೆಗೆ ಹೋಗುವೆನು. ಅವರ ಕಷ್ಟದಲ್ಲಿ ಅವರು ನನ್ನನ್ನು ಬೇಗ ಹುಡುಕುವರು.”


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಆಗ ದೇವರು ಅವನ ಸಂಗಡ ಮಾತನಾಡುವುದನ್ನು ಮುಗಿಸಿ, ಅಬ್ರಹಾಮನ ಬಳಿಯಿಂದ ಹೊರಟು ಹೋದರು.


ಯೆಹೋವ ದೇವರು ಅಬ್ರಹಾಮನ ಸಂಗಡ ಮಾತನಾಡುವುದನ್ನು ಮುಗಿಸಿದ ಕೂಡಲೆ ಹೊರಟು ಹೋದರು. ಅಬ್ರಹಾಮನು ತನ್ನ ಮನೆಗೆ ಹಿಂದಿರುಗಿದನು.


ಆಗ ಪ್ರತಿಯೊಂದು ಕುಟುಂಬದ ಜನರು ತಮ್ಮ ಗುಡಾರದ ಬಾಗಿಲಿನಲ್ಲಿ ನಿಂತು ಅಳುವುದನ್ನು ಮೋಶೆ ಕೇಳಿದನು. ಯೆಹೋವ ದೇವರು ಬಹಳ ಕೋಪಗೊಂಡರು. ಮೋಶೆ ಗಲಿಬಿಲಿಗೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು