ಅರಣ್ಯಕಾಂಡ 13:22 - ಕನ್ನಡ ಸಮಕಾಲಿಕ ಅನುವಾದ22 ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರು ಬೆಟ್ಟವನ್ನು ಹತ್ತಿ ಕಾನಾನ್ ದೇಶದ ದಕ್ಷಿಣ ಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷ ಮೊದಲು ನಿರ್ಮಿಸಲಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಬೆಟ್ಟವನ್ನು ಹತ್ತಿ ನೆಗೆಬನ್ನು ದಾಟಿ, ಹೆಬ್ರೋನಿಗೆ ಬಂದರು. ಅಲ್ಲಿ ‘ಅನಕಿಮ್’ ವಂಶಸ್ಥರಾದ ಅಹೀಮನ್, ಶೇಷೈ, ತಲ್ಮೈ ಎಂಬವರು ಇದ್ದರು. (ಹೆಬ್ರೋನ್ ಪಟ್ಟಣ ಈಜಿಪ್ಟ್ ದೇಶದಲ್ಲಿರುವ ಚೋಮ್ ಪಟ್ಟಣಕ್ಕಿಂತ ಏಳು ವರ್ಷ ಮೊದಲೆ ಕಟ್ಟಲ್ಪಟ್ಟಿತ್ತು) ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರು ಬೆಟ್ಟವನ್ನು ಹತ್ತಿ ಕಾನಾನ್‍ದೇಶದ ದಕ್ಷಿಣಪ್ರಾಂತ್ಯವನ್ನು ದಾಟಿ ಹೆಬ್ರೋನಿಗೆ ಬಂದರು. ಅಲ್ಲಿ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಐಗುಪ್ತದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರುಷ ಮುಂಚೆ ಕಟ್ಟಲ್ಪಟ್ಟದ್ದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಅವರು ನೆಗೆವ್ ಮೂಲಕ ದೇಶವನ್ನು ಪ್ರವೇಶಿಸಿ ಹೆಬ್ರೋನಿಗೆ ಹೋದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದಲ್ಲಿರುವ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳ ಮುಂಚೆ ಕಟ್ಟಲ್ಪಟ್ಟಿತ್ತು. ಅಲ್ಲಿ ಅಹೀಮನ್, ಶೇಫೈ ಮತ್ತು ತಲ್ಮೈ ಎಂಬವರು ವಾಸಿಸುತ್ತಿದ್ದರು. ಇವರು ಅನಾಕನ ಸಂತತಿಯವರು. ಅಧ್ಯಾಯವನ್ನು ನೋಡಿ |