Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:26 - ಕನ್ನಡ ಸಮಕಾಲಿಕ ಅನುವಾದ

26 ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆ ಮೇಲೆ ಪಾರಾನ್ ಅರಣ್ಯದಲ್ಲಿದ್ದ ಮೋಶೆ, ಆರೋನರು ಮತ್ತು ಇಸ್ರಾಯೇಲರ ಸರ್ವಸಮೂಹದವರ ಬಳಿಗೆ ಕಾದೇಶಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ದೇಶದ ಹಣ್ಣುಗಳನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಇಸ್ರೇಲರು ಪಾರಾನ್ ಮರುಭೂಮಿಯ ಕಾದೇಶಿನಲ್ಲಿ ತಂಗಿದ್ದರು. ಅವರು ನೋಡಿದ್ದರ ಬಗ್ಗೆ ಎಲ್ಲವನ್ನು ಮೋಶೆಗೂ ಆರೋನನಿಗೂ ಎಲ್ಲಾ ಇಸ್ರೇಲರಿಗೂ ತಿಳಿಸಿದರು. ಅವರು ಕಾನಾನ್ ದೇಶದಿಂದ ತಂದ ಹಣ್ಣುಗಳನ್ನು ತೋರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:26
14 ತಿಳಿವುಗಳ ಹೋಲಿಕೆ  

ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.


ಇಸ್ರಾಯೇಲರ ಸರ್ವ ಸಮೂಹದವರು ಚಿನ್ ಎಂಬ ಮರುಭೂಮಿಗೆ ಮೊದಲನೆಯ ತಿಂಗಳಿನಲ್ಲಿ ಬಂದರು. ಜನರು ಕಾದೇಶಿನಲ್ಲಿ ವಾಸಿಸುವಾಗ ಅಲ್ಲಿ ಮಿರ್ಯಾಮಳು ಮರಣಹೊಂದಿದಳು, ಆಕೆಯ ಶವವನ್ನು ಅಲ್ಲಿಯೇ ಸಮಾಧಿಮಾಡಿದರು.


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಎಚ್ಯೋನ್ ಗೆಬೆರಿನಿಂದ ಹೊರಟು ಕಾದೇಶೆಂಬ ಚಿನ್ ಮರುಭೂಮಿಯಲ್ಲಿ ಇಳಿದುಕೊಂಡರು.


ಆದಕಾರಣ ನಾವು ಯೆಹೋವ ದೇವರಿಗೆ ಕೂಗಿದೆವು. ಅವರು ನಮ್ಮ ಧ್ವನಿಯನ್ನು ಕೇಳಿ, ದೂತನನ್ನು ಕಳುಹಿಸಿ, ನಮ್ಮನ್ನು ಈಜಿಪ್ಟಿನೊಳಗಿಂದ ನಮ್ಮನ್ನು ಹೊರಗೆ ತಂದರು. “ನಾವು ನಿನ್ನ ಮೇರೆಯ ಕಡೇ ಊರಾದ ಕಾದೇಶಿಯದಲ್ಲಿ ಇದ್ದೇವೆ.


ಯೆಹೂದದ ಗೋತ್ರದವರು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಬಂದರು. ಆಗ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನು ಅವನಿಗೆ, “ಕಾದೇಶ್ ಬರ್ನೇಯದಲ್ಲಿ ಯೆಹೋವ ದೇವರು ನನ್ನನ್ನೂ, ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ.


ಅವರು ಹಿಂದಿರುಗಿ ಕಾದೇಶ್ ಎಂಬ ಎನ್ಮಿಷ್ಪಾಟಿಗೆ ಬಂದು, ಅಮಾಲೇಕ್ಯರ ಎಲ್ಲಾ ಬಯಲನ್ನು ಹಜಜೋನ್ ತಾಮಾರಿನಲ್ಲಿ ವಾಸವಾಗಿದ್ದ ಅಮೋರಿಯರನ್ನೂ ಜಯಿಸಿದರು.


ಅವರು ದೇಶವನ್ನು ಸಂಚರಿಸಿ ನೋಡಿ, ನಲವತ್ತು ದಿವಸಗಳಾದ ಮೇಲೆ ತಿರುಗಿ ಬಂದರು.


ಮೋಶೆಯು ಕಾದೇಶಿನಿಂದ ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಿಮ್ಮ ಸಹೋದರರಾದ ಇಸ್ರಾಯೇಲರು ಹೇಳುವುದೇನೆಂದರೆ, ನಮಗೆ ಉಂಟಾದ ಸಕಲ ಆಯಾಸವನ್ನು ನೀನು ಅರಿತಿದ್ದೀ.


ಹೋರೇಬಿನಿಂದ ಕಾದೇಶ್ ಬರ್ನೇಯಕ್ಕೆ ಸೇಯೀರ್ ಬೆಟ್ಟದ ಮಾರ್ಗವಾಗಿ ಹನ್ನೊಂದು ದಿವಸ ಪ್ರಯಾಣ.


ಯೆಹೋವ ದೇವರ ಶಬ್ದವು ಮರುಭೂಮಿಯನ್ನು ನಡುಗಿಸುತ್ತದೆ; ಯೆಹೋವ ದೇವರು ಕಾದೇಶ್ ಮರುಭೂಮಿಯನ್ನು ನಡುಗಿಸುತ್ತಾರೆ.


ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.


ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.


ದೇಶವನ್ನು ಸಂಚರಿಸಿ ನೋಡಲು ಯೆಹೋವ ದೇವರ ಸೇವಕನಾದ ಮೋಶೆಯು ನನ್ನನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ ನಾನು ನಾಲ್ವತ್ತು ವರ್ಷ ಪ್ರಾಯದವನಾಗಿದ್ದೆನು. ನನ್ನ ಮನಸ್ಸಿಗೆ ಬಂದಿದ್ದ ವರದಿಯನ್ನು ತಂದು ತಿಳಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು