Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:3 - ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು ಯೆಹೋವ ದೇವರ ಆಜ್ಞೆಯಂತೆ ಪಾರಾನ್ ಮರುಭೂಮಿಯಿಂದ ಅವರನ್ನು ಕಳುಹಿಸಿದನು. ಅವರೆಲ್ಲರೂ ಇಸ್ರಾಯೇಲರ ಮುಖ್ಯಸ್ಥರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲರ ಮುಖ್ಯಸ್ಥರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಮರುಭೂಮಿಯಿಂದ ಇಸ್ರಯೇಲರ ಮುಖ್ಯಸ್ಥರನ್ನು ಕಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಅರಣ್ಯದಿಂದ ಇಸ್ರಾಯೇಲ್ಯರ ಮುಖ್ಯಸ್ಥರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡಿದ್ದಾಗ ಯೆಹೋವನ ಆಜ್ಞೆಗನುಸಾರವಾಗಿ ಮೋಶೆಯು ಈ ನಾಯಕರನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:3
11 ತಿಳಿವುಗಳ ಹೋಲಿಕೆ  

ನಾನು ದೇಶವನ್ನು ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ಅವರನ್ನು ಕಳುಹಿಸಿದಾಗ, ನಿಮ್ಮ ಪಿತೃಗಳು ಹಾಗೆಯೇ ಮಾಡಿದರು.


ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.


ಇದಲ್ಲದೆ ಯೆಹೋವ ದೇವರು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸಿ, “ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿಕೊಳ್ಳಿರಿ,” ಎಂದು ಹೇಳಿದಾಗ, ನೀವು ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಅವರನ್ನು ನಂಬಲಿಲ್ಲ. ಅವರ ಮಾತನ್ನೂ ಕೇಳಲಿಲ್ಲ.


ಆಗ ನಾವು ಹೋರೇಬಿನಿಂದ ಹೊರಟು ನಮ್ಮ ದೇವರಾದ ಯೆಹೋವ ದೇವರು ನಮಗೆ ಆಜ್ಞಾಪಿಸಿದ ಪ್ರಕಾರ, ನೀವು ಅಮೋರಿಯರ ಬೆಟ್ಟದ ಮಾರ್ಗದಲ್ಲಿ ನೋಡಿದ ಆ ದೊಡ್ಡ ಭಯಂಕರವಾದ ಮರುಭೂಮಿಯನ್ನೆಲ್ಲಾ ದಾಟಿ, ಕಾದೇಶ್ ಬರ್ನೇಯಕ್ಕೆ ಬಂದೆವು.


ಆ ಮಾತು ನನಗೆ ಒಳ್ಳೆಯದೆಂದು ತೋಚಿತು. ನಾನು ನಿಮ್ಮಲ್ಲಿ ಗೋತ್ರಕ್ಕೆ ಒಬ್ಬನ ಪ್ರಕಾರ ಹನ್ನೆರಡು ಮಂದಿಯನ್ನು ಆರಿಸಿಕೊಂಡೆನು.


“ನಾನು ಇಸ್ರಾಯೇಲರಿಗೆ ಕೊಡುವ ಕಾನಾನ್ ದೇಶವನ್ನು ಪರೀಕ್ಷಿಸುವ ಹಾಗೆ ನೀನು ಜನರನ್ನು ಕಳುಹಿಸು. ಅವರವರ ಪಿತೃಗಳ ಗೋತ್ರದ ಪ್ರಕಾರ ಅವರೊಳಗೆ ಅಧಿಕಾರಿಯಾಗಿರುವ ಪ್ರತಿಯೊಬ್ಬನನ್ನು ಕಳುಹಿಸು,” ಎಂದರು.


ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ,


ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಆಗ ಇಸ್ರಾಯೇಲರು ತಮ್ಮ ಕ್ರಮಗಳ ಪ್ರಕಾರ ಸೀನಾಯಿ ಮರುಭೂಮಿಯಿಂದ ಪ್ರಯಾಣಮಾಡಿದರು. ಮೇಘವು ಪಾರಾನ್ ಎಂಬ ಮರುಭೂಮಿಯಲ್ಲಿ ಇಳಿಯಿತು.


ಅವರು ಹೋಗಿ ಮೋಶೆ ಆರೋನರ ಬಳಿಗೂ, ಇಸ್ರಾಯೇಲರ ಸಮಸ್ತ ಸಭೆಯ ಬಳಿಗೂ ಪಾರಾನ್ ಮರುಭೂಮಿಯಲ್ಲಿರುವ ಕಾದೇಶಿಗೂ ಬಂದು, ಅವರಿಗೂ, ಸಮಸ್ತ ಸಭೆಗೂ ವಿಷಯವನ್ನು ವಿವರಿಸಿ, ಆ ದೇಶದ ಫಲಗಳನ್ನು ಅವರಿಗೆ ತೋರಿಸಿದರು.


“ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು