ಅರಣ್ಯಕಾಂಡ 13:30 - ಕನ್ನಡ ಸಮಕಾಲಿಕ ಅನುವಾದ30 ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಇಸ್ರಾಯೇಲರು ಮೋಶೆಗೆ ವಿರುದ್ಧವಾಗಿ ಗುಣುಗುಟ್ಟಿದರು. ಕಾಲೇಬನು ಅವರನ್ನು ಸುಮ್ಮನಿರಿಸಿ, “ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಾವು ಶಕ್ತರಾಗಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಮೋಶೆಗೆ ವಿರುದ್ಧ ಗುಣಗುಟ್ಟುತ್ತಿದ್ದವರನ್ನು ಕಾಲೇಬನು ಸಮಾಧಾನಗೊಳಿಸುತ್ತಾ, “ನಾವು ಧೈರ್ಯದಿಂದ ಆ ಮಲೆನಾಡಿಗೆ ಹೋಗಿ ಅದನ್ನು ಸ್ವಾಧೀನ ಪಡಿಸಿಕೊಳ್ಳೋಣ. ಅದನ್ನು ಜಯಿಸಲು ನಮ್ಮಿಂದ ಸಾಧ್ಯ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಇಸ್ರಾಯೇಲ್ಯರು ಮೋಶೆಗೆ ವಿರೋಧವಾಗಿ ಗುಣುಗುಟ್ಟಲಾಗಿ ಕಾಲೇಬನು ಅವರನ್ನು ಸುಮ್ಮನಿರಿಸಿ - ನಾವು ನಿರ್ಭಯವಾಗಿ ಆ ಬೆಟ್ಟದ ಸೀಮೆಗೆ ಹತ್ತಿಹೋಗಿ ಅದನ್ನು ಸ್ವಾಧೀನಪಡಿಸಿಕೊಳ್ಳೋಣ; ಅದನ್ನು ಜಯಿಸಬಲ್ಲೆವು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಕಾಲೇಬನು ಮೋಶೆಯ ಬಳಿಯಲ್ಲಿದ್ದ ಗೊಣಗುಟ್ಟುವ ಜನರನ್ನು ಸುಮ್ಮನಿರಿಸಿ, “ನಾವು ಹೋಗಿ ದೇಶವನ್ನು ವಶಪಡಿಸಿಕೊಳ್ಳಬೇಕು. ನಾವು ಸುಲಭವಾಗಿ ದೇಶವನ್ನು ವಶಪಡಿಸಿಕೊಳ್ಳಬಹುದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |