Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:31 - ಕನ್ನಡ ಸಮಕಾಲಿಕ ಅನುವಾದ

31 ಆದರೆ ಅವನ ಸಂಗಡ ಹೋದ ಜನರು, “ಆ ಜನರ ಬಳಿಗೆ ಹೋಗುವುದಕ್ಕೆ ನಮ್ಮಿಂದಾಗುವುದಿಲ್ಲ, ಅವರು ನಮಗಿಂತ ಬಲಿಷ್ಠರಾಗಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಆದರೆ ಅವನ ಜೊತೆಯಲ್ಲಿ ಹೋದವರು, “ಆ ಜನರು ನಮಗಿಂತ ಬಲಿಷ್ಠರು; ಅವರನ್ನು ಜಯಿಸಲು ನಮಗೆ ಶಕ್ತಿಸಾಲುವುದಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆದರೆ ಅವನ ಜೊತೆಯಲ್ಲಿ ಹೋಗಿದ್ದವರು, “ಆ ಜನರು ನಮಗಿಂತ ಬಲಿಷ್ಠರು! ಅವರ ಮೇಲೆ ಜಯ ಸಾಧಿಸಲು ನಮಗೆ ಶಕ್ತಿ ಸಾಲದು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಆದರೆ ಅವನ ಜೊತೆಯಲ್ಲಿ ಹೋದವರು - ಆ ಜನರು ನಮಗಿಂತ ಬಲಿಷ್ಠರು; ಅವರ ಮೇಲೆ ಹೋಗುವದಕ್ಕೆ ನಮಗೆ ಶಕ್ತಿಸಾಲದು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಆದರೆ ಅವನೊಡನೆ ಹೋದ ಜನರು, “ನಾವು ಆ ಜನರೊಡನೆ ಹೋರಾಡಲಾರೆವು, ಅವರು ನಮಗಿಂತಲೂ ಬಲಿಷ್ಠರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:31
8 ತಿಳಿವುಗಳ ಹೋಲಿಕೆ  

ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಆದರೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದ ಹಿಂಬಾಲಿಸಿದೆನು.


ಅವರು ಸೇರಲಾರದೆ ಹೋದದ್ದು ಅವರ ಅವಿಶ್ವಾಸದಿಂದಲೇ ಎಂದು ಕಾಣುತ್ತೇವೆ.


ಹೇಗೆಂದರೆ ಅವರು ಎಷ್ಕೋಲೆಂಬ ಹಳ್ಳದವರೆಗೆ ಬಂದು, ದೇಶವನ್ನು ನೋಡಿದಾಗ, ಇಸ್ರಾಯೇಲರ ಹೃದಯವನ್ನು ಯೆಹೋವ ದೇವರು ಅವರಿಗೆ ಕೊಟ್ಟ ದೇಶದ ಒಳಗೆ ಹೋಗದ ಹಾಗೆ ಅಧೈರ್ಯಪಡಿಸಿದನು.


ಇಸ್ರಾಯೇಲರೇ, ಕೇಳಿರಿ, ನೀವು ಹೋಗಿ ನಿಮಗಿಂತ ದೊಡ್ಡ, ಬಲಿಷ್ಠ ಜನಾಂಗಗಳನ್ನೂ, ಆಕಾಶದವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ ಸ್ವಾಧೀನಮಾಡಿಕೊಳ್ಳುವುದಕ್ಕೆ ಈ ಹೊತ್ತು ಯೊರ್ದನ್ ನದಿಯನ್ನು ದಾಟಲಿದ್ದೀರಿ.


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು.


ಯೆಹೋವ ದೇವರು ಅವರಿಗೆ ಕೊಟ್ಟ ದೇಶಕ್ಕೆ ಹೋಗುವುದಕ್ಕೆ ನೀವು ಇಸ್ರಾಯೇಲರ ಹೃದಯಗಳನ್ನು ಅಧೈರ್ಯಪಡಿಸುವುದು ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು