Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:33 - ಕನ್ನಡ ಸಮಕಾಲಿಕ ಅನುವಾದ

33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಮಹಾಶರೀರವುಳ್ಳ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳ ಹಾಗೆ ಇದ್ದೆವು. ಅವರ ದೃಷ್ಟಿಗೂ ನಾವು ಹಾಗೆಯೇ ಕಾಣಿಸಿದೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತ ಪುರುಷರನ್ನು ನೋಡಿದೆವು. ನಾವು ಅವರ ಮುಂದೆ ಮಿಡತೆಗಳಂತೆ ಇದ್ದೇವೆ ಎಂದು ತಿಳಿದುಕೊಂಡೆವು. ಅವರಿಗೂ ನಾವು ಹಾಗೆಯೇ ಕಾಣಿಸಿದೆವು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅಲ್ಲಿ ‘ನೆಫೀಲಿಯರನ್ನು’ ಅಂದರೆ ನೆಫೀಲಿಯನ ವಂಶದವರಾದ ‘ಅನಕಿಮ್’ರನ್ನು ನೋಡಿದೆವು. ಅವರ ಮುಂದೆ ನಾವು ಮಿಡತೆಗಳಂತೆ ಇದ್ದೆವು. ಅವರಿಗೂ ನಾವು ಹಾಗೆಯೆ ಕಾಣಿಸಿಕೊಂಡೆವು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅಲ್ಲಿ ನೆಫೀಲಿಯರನ್ನು ಅಂದರೆ ನೆಫೀಲಿಯ ವಂಶದವರಾದ ಉನ್ನತಪುರುಷರನ್ನು ನೋಡಿದೆವು. ನಾವು ಅವರ ಮುಂದೆ ವಿುಡತೆಗಳಂತೆ ಇದ್ದೇವೆಂದು ತಿಳಿದುಕೊಂಡೆವು; ಅವರಿಗೂ ನಾವು ಹಾಗೆಯೇ ತೋರಿದೆವು ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಪ್ರಚಂಡರಾದ ನೆಫೀಲಿಯರು ಅಲ್ಲಿ ವಾಸವಾಗಿರುವುದನ್ನು ನಾವು ನೋಡಿದೆವು. (ಅನಾಕ್ಯರು ನೆಫೀಲಿಯ ಜನರ ಸಂತತಿಯವರಾಗಿದ್ದಾರೆ.) ಅವರ ಮುಂದೆ ನಾವು ಮಿಡತೆಗಳೊ ಎಂದೆನಿಸಿತು. ಅವರಿಗೂ ಸಹ ನಾವು ಮಿಡತೆಗಳಂತೆ ಕಂಡುಬಂದೆವು” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:33
17 ತಿಳಿವುಗಳ ಹೋಲಿಕೆ  

ನಾವು ಎಲ್ಲಿಗೆ ಏರಿಹೋಗೋಣ? ನಮ್ಮ ಸಹೋದರರು, ‘ಆ ಜನರು ನಮಗಿಂತ ಬಲಿಷ್ಠರೂ ಎತ್ತರವಾದವರೂ ಪಟ್ಟಣಗಳು ದೊಡ್ಡವೂ, ಆಕಾಶವನ್ನು ಮುಟ್ಟುವ ಗೋಡೆಯುಳ್ಳವುಗಳೂ ಆಗಿವೆ. ಇದಲ್ಲದೆ ರಾಕ್ಷಸಾಕಾರದ ಅನಾಕ್ಯರ ಮಕ್ಕಳನ್ನು ಅಲ್ಲಿ ನೋಡಿದೆವು’ ಎಂದು ಹೇಳಿ ನಮ್ಮ ಹೃದಯಗಳನ್ನು ಅಧೈರ್ಯಪಡಿಸಿದ್ದಾರೆ,” ಎಂದು ಹೇಳಿದಿರಿ.


ಆಕಾಶಮಂಡಲವನ್ನು ತೆರೆಯಂತೆ ವಿಸ್ತರಿಸಿ, ಅದರೊಳಗೆ ವಾಸಮಾಡುವ ಗುಡಾರದಂತೆ ಹರಡಿ, ಭೂನಿವಾಸಿಗಳು ಮಿಡತೆಯಂತೆ ಕಾಣಿಸುವಷ್ಟು ಭೂವೃತ್ತದ ಮೇಲೆ ಕೂತಿರುವಾತನು ಆತನೇ.


ಆ ದಿನಗಳಲ್ಲಿ ಭೂಮಿಯ ಮೇಲೆ ನೆಫೀಲಿಯೆಂಬ ರಾಕ್ಷಸ ವಂಶದವರು ಇದ್ದರು. ನಂತರದಲ್ಲಿಯೂ ಇದ್ದರು. ದೇವಪುತ್ರರು ಮನುಷ್ಯ ಪುತ್ರಿಯರೊಂದಿಗೆ ಕೂಡಿದಾಗ, ಮಕ್ಕಳು ಹುಟ್ಟಿದರು. ಇವರೇ ಪೂರ್ವಕಾಲದಲ್ಲಿ ಪ್ರಸಿದ್ಧರಾಗಿದ್ದ ಪರಾಕ್ರಮಿಗಳು.


ಅವನ ಖೇಡ್ಯವನ್ನು ಹಿಡಿಯುವವನು ಅವನ ಮುಂದೆ ನಡೆದನು. ಫಿಲಿಷ್ಟಿಯನು ದಾವೀದನನ್ನು ದೃಷ್ಟಿಸಿ ನೋಡಿದಾಗ, ಅವನು ಕೆಂಪಾದವನಾಗಿಯೂ, ಸುಂದರ ರೂಪವುಳ್ಳವನಾಗಿಯೂ ಇರುವ ಹುಡುಗನಾಗಿದ್ದುದರಿಂದ, ಅವನನ್ನು ತಿರಸ್ಕರಿಸಿ ದಾವೀದನಿಗೆ,


ಆ ನಾಡಿನ ಅನಾಕ್ಯರು ಬಲಿಷ್ಠರು ಮತ್ತು ಎತ್ತರವಾದ ಪುರುಷರು ಆಗಿದ್ದಾರೆ. ಅವರ ವಿಷಯ ನಿಮಗೆ ತಿಳಿದೇ ಇದೆ. “ಅನಾಕ್ಯರ ಮುಂದೆ ಯಾರು ನಿಲ್ಲುವರು?” ಎಂಬ ಮಾತನ್ನು ಅವರ ಬಗ್ಗೆ ಕೇಳಿದ್ದೀರಿ.


ರೆಫಾಯರಲ್ಲಿ ಬಾಷಾನಿನ ಅರಸನಾದ ಓಗನು ಮಾತ್ರ ಉಳಿದಿದ್ದನು. ಅವನ ಮಂಚವು ಕಬ್ಬಿಣದ ಮಂಚ. ಅದು ಅಮ್ಮೋನಿಯರ ರಬ್ಬಾದಲ್ಲಿ ಈಗಲೂ ಉಂಟಲ್ಲವೋ? ಅದರ ಉದ್ದ ಪುರುಷನ ಕೈ ಅಳತೆಯ ಪ್ರಕಾರ ಒಂಬತ್ತು ಮೊಳ, ಅಗಲ ನಾಲ್ಕು ಮೊಳ ಇತ್ತು.


ಅವನು ಏಳುವರೆ ಅಡಿ ಎತ್ತರವಾಗಿದ್ದ ಒಬ್ಬ ಈಜಿಪ್ಟಿನವನನ್ನು ಹೊಡೆದುಬಿಟ್ಟನು; ಆ ಈಜಿಪ್ಟಿನವನ ಕೈಯಲ್ಲಿ ನೇಯ್ಗೆಗಾರರ ಕುಂಟೆಯಷ್ಟು ದಪ್ಪವಾದ ಒಂದು ಈಟಿ ಇದ್ದರೂ, ತಾನು ಒಂದು ಕೋಲು ಹಿಡಿದುಕೊಂಡು ಅವನ ಬಳಿಗೆ ಹೋಗಿ, ಈಜಿಪ್ಟಿನವನ ಕೈಯಲ್ಲಿದ್ದ ಈಟಿಯನ್ನು ಕಿತ್ತುಕೊಂಡು, ಅವನ ಈಟಿಯಿಂದಲೇ ಅವನನ್ನು ಕೊಂದುಹಾಕಿದನು.


ಅದರೊಳಗೆ ಪೂರ್ವದಲ್ಲಿ ಏಮಿಯರು ವಾಸವಾಗಿದ್ದರು. ಅವರು ಅನಾಕ್ಯರ ಹಾಗೆ ಬಲಿಷ್ಠರೂ ಬಹುಜನರೂ ಎತ್ತರವಾದವರೂ ಆಗಿದ್ದರು.


ಅವರು ನೆಗೆವನ್ನು ದಾಟಿ ಹೆಬ್ರೋನಿನವರೆಗೆ ಬಂದರು. ಅಲ್ಲಿ ಅನಾಕನ ಮಕ್ಕಳಾದ ಅಹೀಮನ್, ಶೇಷೈ, ತಲ್ಮೈ ಎಂಬ ಉನ್ನತರಾದ ಪುರುಷರು ಇದ್ದರು. ಹೆಬ್ರೋನ್ ಪಟ್ಟಣವು ಈಜಿಪ್ಟ್ ದೇಶದ ಚೋವನ್ ಪಟ್ಟಣಕ್ಕಿಂತ ಏಳು ವರ್ಷಗಳು ಮೊದಲು ನಿರ್ಮಿಸಲಾಗಿತ್ತು.


ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು. ಪಟ್ಟಣಗಳು ಭದ್ರವಾಗಿಯೂ, ಬಹಳ ದೊಡ್ಡದಾಗಿಯೂ ಇವೆ. ಅನಾಕನ ಮಕ್ಕಳನ್ನು ನಾವು ಅಲ್ಲಿ ಕಂಡೆವು.


ಆಗ ಜನರೆಲ್ಲರೂ ತಮ್ಮ ಸ್ವರವೆತ್ತಿ ಆ ರಾತ್ರಿಯೆಲ್ಲಾ ಅತ್ತರು.


ಆ ಕಾಲದಲ್ಲಿ ಯೆಹೋಶುವನು ಬಂದು ಬೆಟ್ಟದ ದೇಶವಾದ ಹೆಬ್ರೋನಿನಲ್ಲಿಯೂ, ದೆಬೀರಿನಲ್ಲಿಯೂ, ಅನಾಬಿನಲ್ಲಿಯೂ, ಯೆಹೂದದ ಸಕಲ ಬೆಟ್ಟಗಳಲ್ಲಿಯೂ ಇಸ್ರಾಯೇಲ್ ಪ್ರಾಂತದ ಬೆಟ್ಟಗಳಲ್ಲಿಯೂ ಇದ್ದ ಅನಾಕ್ಯರನ್ನು ಕಡಿದುಬಿಟ್ಟು, ಅವರನ್ನೂ, ಅವರ ಪಟ್ಟಣಗಳನ್ನೂ ಪೂರ್ಣವಾಗಿ ನಾಶಮಾಡಿದನು.


ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.


ಆಗ ಕಾಲೇಬನು ಅಲ್ಲಿಂದ ಅನಾಕನ ಮೂವರು ಮಕ್ಕಳಾದ ಶೇಷೈ, ಅಹೀಮನ್, ತಲ್ಮೈರನ್ನು ಹೊರಡಿಸಿಬಿಟ್ಟನು.


ಇಸ್ರಾಯೇಲರೆಲ್ಲರೂ ಅವನನ್ನು ಕಂಡಾಗ, ಅವನ ಬಳಿಯಿಂದ ಓಡಿಹೋದರು; ಬಹು ಭಯಪಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು