ಅರಣ್ಯಕಾಂಡ 14:10 - ಕನ್ನಡ ಸಮಕಾಲಿಕ ಅನುವಾದ10 ಆಗ ಸಭೆಯವರೆಲ್ಲರೂ ಅವರಿಗೆ ಕಲ್ಲೆಸೆಯಬೇಕೆಂದಿದ್ದರು. ಯೆಹೋವ ದೇವರ ಮಹಿಮೆಯು ದೇವದರ್ಶನ ಗುಡಾರದಲ್ಲಿ ಇಸ್ರಾಯೇಲರಿಗೆಲ್ಲಾ ಪ್ರತ್ಯಕ್ಷವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಆದರೆ ಜನಸಮೂಹದವರೆಲ್ಲರೂ ಅವರ ಮಾತುಗಳನ್ನು ಕೇಳದೆ, ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರುವಾಗ, ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಪ್ರಕಾಶಿಸಿ ಇಸ್ರಾಯೇಲರೆಲ್ಲರಿಗೂ ಕಾಣಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆದರೆ ಜನಸಂದಣಿ ಅವರಿಗೆ ಕಿವಿಗೊಡಲೊಲ್ಲದೆ ಕಲ್ಲೆಸೆದು ಅವರನ್ನು ಕೊಲ್ಲಬೇಕೆಂದಿದ್ದರು. ಆಗ ಸರ್ವೇಶ್ವರನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಯೇಲರೆಲ್ಲರಿಗೂ ಕಾಣಿಸಿಕೊಂಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲ್ಲಾ ಜನರು ಯೆಹೋಶುವನನ್ನು ಮತ್ತು ಕಾಲೇಬನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮಾತಾಡತೊಡಗಿದರು. ಆದರೆ ಯೆಹೋವನ ಮಹಿಮೆ ದೇವದರ್ಶನಗುಡಾರ ಮೇಲೆ ಪ್ರತ್ಯಕ್ಷವಾದದ್ದು ಇಸ್ರೇಲರೆಲ್ಲರಿಗೆ ಕಾಣಿಸಿತು. ಯೆಹೋವನು ಮೋಶೆಯೊಡನೆ ಮಾತಾಡಿ, ಅಧ್ಯಾಯವನ್ನು ನೋಡಿ |