Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:21 - ಕನ್ನಡ ಸಮಕಾಲಿಕ ಅನುವಾದ

21 ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆದರೆ ನನ್ನ ಜೀವದಾಣೆ, ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಆದರೂ ನನ್ನ ಜೀವದಾಣೆ ಸರ್ವೇಶ್ವರನ ಮಹಿಮೆ ಅಖಿಲ ವಿಶ್ವವನ್ನು ತುಂಬಿದೆಯೆಂಬ ಸತ್ಯವಾಕ್ಯದ ಆಣೆ. ನನ್ನನ್ನು ಅಲಕ್ಷ್ಯಮಾಡಿದ ಇವರಲ್ಲಿ ಯಾರೂ ವಾಗ್ದತ್ತ ನಾಡನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆದಾಗ್ಯೂ ನನ್ನ ಜೀವದಾಣೆ, ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದಾಗ್ಯೂ ನನ್ನ ಜೀವದಾಣೆ ಮತ್ತು ಯೆಹೋವನ ಮಹಿಮೆಯು ಭೂಲೋಕದಲ್ಲೆಲ್ಲಾ ತುಂಬಿರಬೇಕೆಂಬುವ ನಿಶ್ಚಯ ವಾಕ್ಯದ ಆಣೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:21
16 ತಿಳಿವುಗಳ ಹೋಲಿಕೆ  

ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ನಿನ್ನ ಕಣ್ಣುಗಳನ್ನು ಎತ್ತಿ ಸುತ್ತಲೂ ನೋಡು. ಇವರೆಲ್ಲರೂ ಕೂಡಿಕೊಂಡು ನಿನ್ನ ಬಳಿಗೆ ಬರುತ್ತಿದ್ದಾರೆ. ಯೆಹೋವ ದೇವರು ಹೇಳುವುದೇನೆಂದರೆ,” ನನ್ನ ಜೀವದಾಣೆ, ನಿಶ್ಚಯವಾಗಿ ನೀನು ಅವರನ್ನೆಲ್ಲಾ ಆಭರಣಗಳಂತೆ ಧರಿಸಿಕೊಳ್ಳುವೆ ಮತ್ತು ನೀನು ಅವರನ್ನು ಮದಲಗಿತ್ತಿಯಂತೆ ಕಟ್ಟಿಕೊಳ್ಳುವೆ.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ಆಕಾಶದ ಕಡೆ ನನ್ನ ಕೈಯೆತ್ತಿ, ನಾನು ನಿತ್ಯವಾಗಿ ಬದುಕುವಾತನು ಎಂದು ಹೇಳುತ್ತೇನೆ.


ನಿಮ್ಮ ರಾಜ್ಯವು ಬರಲಿ; ನಿಮ್ಮ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.


ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ: ನನ್ನ ಜೀವದಾಣೆ,” “ನಿಶ್ಚಯವಾಗಿ ಮೋವಾಬು ಸೊದೋಮಿನ ಅಮ್ಮೋನ್ಯರು ಗೊಮೋರದ ಹಾಗೆ ಆಗುವುದು. ತುರುಚಿ ಗಿಡಗಳನ್ನು ಹುಟ್ಟಿಸುವಂಥ ಉಪ್ಪಿನ ಕುಳಿಗಳುಳ್ಳಂಥ ನಿತ್ಯವಾಗಿ ಹಾಳಾದ ಸ್ಥಳವಾಗುವರು. ನನ್ನ ಜನರಲ್ಲಿ ಉಳಿದವರು ಅವರನ್ನು ಸುಲಿದುಕೊಳ್ಳುವರು. ನನ್ನ ಜನರಲ್ಲಿ ಮಿಕ್ಕಾದವರು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವರು.”


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


“ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನೀವು ಈ ಗಾದೆಯನ್ನು ಇಸ್ರಾಯೇಲಿನಲ್ಲಿ ಇನ್ನು ಹೇಳುವ ಸಂದರ್ಭವು ಇರುವುದಿಲ್ಲ.


ಆದಕಾರಣ ಸಾರ್ವಭೌಮ ಯೆಹೋವ ದೇವರು ಹೇಳುವುದೇನೆಂದರೆ, ನಿಶ್ಚಯವಾಗಿ ನೀವು ನನ್ನ ಪರಿಶುದ್ಧ ಸ್ಥಳವನ್ನು ನಿಮ್ಮ ಎಲ್ಲಾ ಹೇಸಿಗೆಗಳಿಂದಲೂ, ಅಸಹ್ಯಗಳಿಂದಲೂ ಅಪವಿತ್ರಪಡಿಸಿದ ಕಾರಣ, ನಾನೂ ಸಹ ನಿಮ್ಮನ್ನು ಕುಂದಿಸುವೆನು ಮತ್ತು ನನ್ನ ಕಣ್ಣು ಕನಿಕರಿಸುವುದೂ ಇಲ್ಲ, ಕ್ಷಮಿಸುವುದೂ ಇಲ್ಲ.


“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಖಡ್ಗದಿಂದ ಬೀಳುವರು. ಬಯಲಿನಲ್ಲಿರುವವರನ್ನು ಕಾಡುಮೃಗಗಳಿಗೆ ಆಹಾರವನ್ನಾಗಿ ಕೊಡುತ್ತೇನೆ. ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವವರು ವ್ಯಾಧಿಗಳಿಂದ ಸಾಯುವರು.


“ನನ್ನ ಜೀವದಾಣೆ, ಯೆಹೋಯಾಕೀಮನ ಮಗ ಯೆಹೂದದ ಅರಸನಾದ ಕೊನ್ಯನು ನನ್ನ ಬಲಗೈಯ ಮುದ್ರೆ ಉಂಗುರವಾಗಿದ್ದರೂ, ನಿನ್ನನ್ನು ಅಲ್ಲಿಂದ ಕಿತ್ತುಹಾಕಿ,


ಆದ್ದರಿಂದ ನೀನು ಅವರಿಗೆ, ‘ನನ್ನ ಜೀವದಾಣೆ, ನೀವು ನನ್ನ ಕಿವಿಗಳು ಕೇಳುವಂತೆ ಮಾತನಾಡಿದ ಪ್ರಕಾರವೇ ನಿಮಗೆ ಮಾಡುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೆ ನಿಶ್ಚಯವಾಗಿ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ, ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದ್ದೇನೆ.


ಶತ್ರುಗಳು ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾರೆ. ನನ್ನ ಪ್ರಾಣವು ಕುಗ್ಗಿಹೋಗಿದೆ. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದಿದ್ದಾರೆ. ಅದರಲ್ಲಿ ತಾವೇ ಬಿದ್ದುಹೋದರು.


ಅದೇ ರೀತಿ ನಾನು ನಿಮ್ಮ ಪಿತೃಗಳ ಸಂಗಡ ಈಜಿಪ್ಟ್ ದೇಶದ ಮರುಭೂಮಿಯಲ್ಲಿ ನ್ಯಾಯತೀರ್ಪು ಮಾಡಿದೆನು. ಈಗಲೂ ನಿಮ್ಮ ಸಂಗಡ ನ್ಯಾಯತೀರ್ಪು ಮಾಡುವೆನು, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು