Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:24 - ಕನ್ನಡ ಸಮಕಾಲಿಕ ಅನುವಾದ

24 ಆದರೆ ನನ್ನ ಸೇವಕನಾದ ಕಾಲೇಬನಲ್ಲಿ ಬೇರೆ ಆತ್ಮವಿದ್ದುದರಿಂದಲೂ, ಅವನು ಹೃದಯಪೂರ್ವಕವಾಗಿ ನನ್ನನ್ನು ಹಿಂಬಾಲಿಸಿದ್ದುದರಿಂದಲೂ ಅವನು ಸಂಚರಿಸಿ ಬಂದ ಆ ದೇಶಕ್ಕೆ ಅವನನ್ನು ಸೇರಿಸುವೆನು. ಅವನ ಸಂತಾನವು ಅದನ್ನು ಸ್ವಾಧೀನಪಡಿಸಿಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ನನ್ನ ದಾಸನಾದ ಕಾಲೇಬನಿಗೆ ಅವರಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದುದ್ದರಿಂದ ಅವನು ಸಂಚರಿಸಿದ ಆ ದೇಶದಲ್ಲಿ ಅವನನ್ನು ಸೇರಿಸುವೆನು, ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನನ್ನ ದಾಸನಾದ ಕಾಲೇಬನಾದರೋ ಅವರಂಥ ಮನಸ್ಸುಳ್ಳವನಾಗಿರದೆ ಮನಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದಿದ್ದಾನೆ. ಆದ್ದರಿಂದ ಅವನು ಸಂಚರಿಸಿ ಬಂದ ಆ ನಾಡಿಗೆ ಅವನನ್ನು ಸೇರಿಸುವೆನು. ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ನನ್ನ ದಾಸನಾದ ಕಾಲೇಬನು ಅಂಥ ಮನಸ್ಸುಳ್ಳವನಾಗಿರದೆ ಮನಃಪೂರ್ವಕವಾಗಿ ನನ್ನ ಮಾತನ್ನು ಅನುಸರಿಸಿ ನಡೆದದ್ದರಿಂದ ಅವನನ್ನೇ ಅವನು ಸಂಚರಿಸಿದ ಆ ದೇಶದಲ್ಲಿ ಸೇರಿಸುವೆನು; ಅವನ ಸಂತತಿಯವರು ಅದನ್ನು ಸ್ವಾಧೀನಪಡಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆದರೆ ನನ್ನ ಸೇವಕನಾದ ಕಾಲೇಬನು ಅವರ ಹಾಗಲ್ಲ, ಅವನು ನನ್ನನ್ನು ಮನಃಪೂರ್ವಕವಾಗಿ ಹಿಂಬಾಲಿಸಿದ್ದಾನೆ. ಆದ್ದರಿಂದ ಅವನು ಸಂಚರಿಸಿ ನೋಡಿದ ದೇಶಕ್ಕೆ ಅವನನ್ನು ಬರಮಾಡುವೆನು ಮತ್ತು ಅವನ ಸಂತತಿಯವರು ಆ ದೇಶವನ್ನು ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:24
17 ತಿಳಿವುಗಳ ಹೋಲಿಕೆ  

ಯಜಮಾನರನ್ನು ಮೆಚ್ಚಿಸುವವರಂತೆ ಕಣ್ಣಿಗೆ ಕಾಣುವಾಗ ಮಾತ್ರ ಅವರಿಗೆ ಸೇವೆಮಾಡದೆ, ಕ್ರಿಸ್ತನ ದಾಸರಿಗೆ ತಕ್ಕಂತೆ ಮನಃಪೂರ್ವಕವಾಗಿ ದೇವರ ಚಿತ್ತವನ್ನು ನೆರವೇರಿಸಿರಿ.


ಅವನು ಅಲ್ಲಿಗೆ ಬಂದು ದೇವರ ಕೃಪೆಯನ್ನು ಕಂಡು ಹರ್ಷಭರಿತನಾಗಿ, ಅವರೆಲ್ಲರೂ ಕರ್ತನಿಗೆ ಹೃದಯಪೂರ್ವಕವಾಗಿ ಭಯಭಕ್ತಿ ಉಳ್ಳವರಾಗಿರಬೇಕೆಂದು ಅವರನ್ನು ಪ್ರೋತ್ಸಾಹಿಸಿದನು.


ಯೆಫುನ್ನೆಯ ಮಗ ಕಾಲೇಬನು ಮಾತ್ರ ಅದನ್ನು ನೋಡುವನು. ಅವನು ಯೆಹೋವ ದೇವರನ್ನು ಪೂರ್ಣವಾಗಿ ಹಿಂಬಾಲಿಸಿದ್ದರಿಂದ, ಅವನು ಸಂದರ್ಶಿಸಿದ ದೇಶವನ್ನು ಅವನಿಗೂ ಅವನ ಮಕ್ಕಳಿಗೂ ಕೊಡುವೆನು,” ಎಂದರು.


ಏಕೆಂದರೆ ಅವರು ಮರುಭೂಮಿಯಲ್ಲಿ ನಿಶ್ಚಯವಾಗಿ ಸಾಯಲಿ ಎಂದು ಯೆಹೋವ ದೇವರು ಅವರಿಗೆ ಹೇಳಿದ್ದರು. ಈ ಪ್ರಕಾರ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗ ಯೆಹೋಶುವನೂ ಇವರನ್ನು ಬಿಟ್ಟು ಒಬ್ಬನೂ ಉಳಿಯಲಿಲ್ಲ.


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ನೀವು ಏನನ್ನು ಮಾಡಿದರೂ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೆ ಕರ್ತನಿಗೋಸ್ಕರವೇ ಎಂದು ಹೃದಯಪೂರ್ವಕವಾಗಿ ಮಾಡಿರಿ.


ನಿಷ್ಕಳಂಕ ಹೃದಯದಿಂದ ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು, ಅದರಿಂದ ನಾನು ನಾಚಿಕೆಗೆ ಗುರಿಯಾಗದಿರುವೆನು.


ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.


ನಮ್ಮ ಪಿತೃಗಳಾದ ಅಬ್ರಹಾಮನ, ಇಸಾಕನ, ಇಸ್ರಾಯೇಲನ ದೇವರಾದ ಯೆಹೋವ ದೇವರೇ, ನಿಮ್ಮ ಜನರ ಹೃದಯದ ಮನೋಭಾವನೆಯಲ್ಲಿ ಭಕ್ತಿಯನ್ನು ನಿರಂತರವಾಗಿ ಕಾಪಾಡಿ, ಅವರ ಹೃದಯವನ್ನು ನಿಮಗೆ ಸಿದ್ಧಮಾಡಿ.


ಆಗ ಜನರು ಸಂತೋಷವಾಗಿ ಕಾಣಿಕೆಗಳನ್ನು ಅರ್ಪಿಸಿದ್ದರಿಂದ, ಜನರು ಸಂತೋಷಪಟ್ಟರು. ಏಕೆಂದರೆ ಅವರು ಪೂರ್ಣಮನಸ್ಸಿನಿಂದ ಮನಃಪೂರ್ವಕವಾಗಿ ಯೆಹೋವ ದೇವರಿಗೆ ಅರ್ಪಿಸಿದರು. ಅರಸನಾದ ದಾವೀದನು ಮಹಾ ಸಂತೋಷಪಟ್ಟನು.


ನೀವು ನಿಮ್ಮ ದೇವರಾದ ಯೆಹೋವ ದೇವರನ್ನು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ, ಪೂರ್ಣಶಕ್ತಿಯಿಂದಲೂ ಪ್ರೀತಿಸಬೇಕು.


ಮಗನೇ, ನಿನ್ನ ಮನಸ್ಸನ್ನು ನನಗೆ ಕೊಡು; ನನ್ನ ಮಾರ್ಗಗಳನ್ನು ಅನುಸರಿಸುವಲ್ಲಿ ನಿಮ್ಮ ಕಣ್ಣುಗಳು ಆನಂದಿಸಲಿ.


ಯೆಹೋವ ದೇವರೇ, ಪೂರ್ಣಹೃದಯದಿಂದ ನಾನು ಮೊರೆಯಿಟ್ಟಿದ್ದೇನೆ; ನನಗೆ ಸದುತ್ತರ ನೀಡಿರಿ; ನಾನು ನಿಮ್ಮ ತೀರ್ಪುಗಳನ್ನು ಪಾಲಿಸುವೆನು.


ಯೆಫುನ್ನೆಯ ಮಗ ಕಾಲೇಬನೂ, ನೂನನ ಮಗ ಯೆಹೋಶುವನ ಹೊರತು ನಾನು ನಿಮ್ಮನ್ನು ವಾಸಮಾಡುವುದಕ್ಕೆ ಪ್ರಮಾಣಪೂರ್ವಕವಾಗಿ ವಾಗ್ದಾನ ಮಾಡಿದ ದೇಶಕ್ಕೆ ನಿಸ್ಸಂದೇಹವಾಗಿ ನೀವೆಲ್ಲರೂ ಬಾರದೆ ಇರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು