Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:27 - ಕನ್ನಡ ಸಮಕಾಲಿಕ ಅನುವಾದ

27 “ಈ ದುಷ್ಟಜನರು ನನಗೆ ವಿರೋಧವಾಗಿ ಗೊಣಗುಟ್ಟುವುದನ್ನು ನಾನು ಎಷ್ಟು ಕಾಲ ಸಹಿಸಲಿ? ಇಸ್ರಾಯೇಲರು ನನಗೆ ವಿರೋಧವಾಗಿ ಗೊಣಗುಟ್ಟಿದ್ದನ್ನು ನಾನು ಕೇಳಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “ನನಗೆ ವಿರುದ್ಧವಾಗಿ ಗುಣುಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟು ದಿನ ಸಹಿಸಿಕೊಳ್ಳಲಿ? ಇಸ್ರಾಯೇಲರು ನನಗೆ ವಿರುದ್ಧವಾಗಿ ಗುಣುಗುಟ್ಟುವ ಮಾತುಗಳು ನನಗೆ ಕೇಳಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 “ನನಗೆ ವಿರೋಧವಾಗಿ ಗೊಣಗುಟ್ಟುವ ಈ ದುಷ್ಟ ಸಮೂಹದವರನ್ನು ನಾನು ಎಷ್ಟುಕಾಲ ಸಹಿಸಲಿ! ಈ ಇಸ್ರಯೇಲರು ನನಗೆ ವಿರುದ್ಧ ಗೊಣಗುಟ್ಟುವ ಮಾತುಗಳು ನನಗೆ ಕೇಳಿಸಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:27
11 ತಿಳಿವುಗಳ ಹೋಲಿಕೆ  

“ಇಸ್ರಾಯೇಲರ ಗೊಣಗುಟ್ಟುವಿಕೆಯನ್ನು ಕೇಳಿದ್ದೇನೆ. ಅವರ ಸಂಗಡ ನೀನು ಮಾತನಾಡಿ, ‘ನೀವು ಸಂಜೆಯಲ್ಲಿ ಮಾಂಸವನ್ನು ತಿನ್ನುವಿರಿ. ಬೆಳಿಗ್ಗೆ ರೊಟ್ಟಿಯಿಂದ ತೃಪ್ತರಾಗುವಿರಿ. ನಾನೇ ನಿಮ್ಮ ದೇವರಾದ ಯೆಹೋವ ದೇವರೆಂದು ತಿಳಿದುಕೊಳ್ಳುವಿರಿ,’ ಎಂದು ಅವರಿಗೆ ಹೇಳು,” ಎಂದರು.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಆಗ ಯೇಸು ಅವರಿಗೆ, “ವಿಶ್ವಾಸವಿಲ್ಲದ ಸಂತಾನವೇ, ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು.


ಆಗ ಯೆಹೋವ ದೇವರು ಮೋಶೆಗೆ, “ಈ ಜನರು ಎಷ್ಟರವರೆಗೆ ನನಗೆ ಕೋಪವನ್ನೆಬ್ಬಿಸುವರು? ನಾನು ಅವರ ಮಧ್ಯದಲ್ಲಿ ಮಾಡಿದ ಸಕಲ ಸೂಚಕಕಾರ್ಯಗಳನ್ನು ಕಣ್ಣಾರೆ ನೋಡಿಯೂ ನನ್ನನ್ನು ಎಷ್ಟು ಮಾತ್ರಕ್ಕು ನಂಬದೆ ಇರುವರು?


ಆಗ ಯೆಹೋವ ದೇವರು ಮೋಶೆಗೆ, “ಎಷ್ಟು ಕಾಲ ನನ್ನ ಕಟ್ಟಳೆಗಳನ್ನೂ, ನಿಯಮಗಳನ್ನೂ ಕೈಗೊಳ್ಳದೆ ನಿರಾಕರಿಸುವಿರಿ?


ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು.


ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.


ಇಸ್ರಾಯೇಲ್ ಜನರು ತಮಗೆ ಕಷ್ಟವಾಯಿತೆಂದು ಗೊಣಗುಟ್ಟಿದಾಗ, ಯೆಹೋವ ದೇವರು ಅದನ್ನು ಕೇಳಿ ಕೋಪಗೊಂಡು ಅವರ ಮಧ್ಯದಲ್ಲಿ ಬೆಂಕಿ ಬೀಳುವಂತೆ ಮಾಡಿದ್ದರಿಂದ ಅವರ ಪಾಳೆಯದ ಕಟ್ಟಕಡೆಯ ಭಾಗದಲ್ಲಿದ್ದವರು ಸುಟ್ಟುಹೋದರು.


ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ,


ಅನಂತರ ಮೋಶೆ ಆರೋನನಿಗೆ, “ನೀನು ಇಸ್ರಾಯೇಲರ ಸಮೂಹಕ್ಕೆ, ‘ನಿಮ್ಮ ಗೊಣಗುಟ್ಟುವಿಕೆಯನ್ನು ಯೆಹೋವ ದೇವರು ಕೇಳಿದ್ದರಿಂದ ನೀವು ಅವರ ಮುಂದೆ ಬನ್ನಿರಿ,’ ಎಂದು ಹೇಳು,” ಎಂದನು.


ಹೀಗೆ ನಿಮ್ಮ ಬಾಯಿಂದ ನೀವು ನನಗೆ ವಿರೋಧವಾಗಿ ನಿಮ್ಮ ಮಾತುಗಳಿಂದ ಹೆಚ್ಚಿಸಿದ್ದನ್ನೂ ನಾನು ಕೇಳಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು