ಅರಣ್ಯಕಾಂಡ 14:43 - ಕನ್ನಡ ಸಮಕಾಲಿಕ ಅನುವಾದ43 ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ಅಲ್ಲಿ ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿ ಇರುವುದರಿಂದ ನೀವು ಅವರ ಕತ್ತಿಯಿಂದ ಸತ್ತುಹೋಗುವಿರಿ. ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ಅಲ್ಲಿ ಅಮಾಲೇಕ್ಯರು ಹಾಗೂ ಕಾನಾನ್ಯರು ನಿಮಗೆ ಎದುರಾಗುವರು; ನೀವು ಅವರ ಕತ್ತಿಗೆ ತುತ್ತಾಗುವಿರಿ. ನೀವು ಸರ್ವೇಶ್ವರನ ಮಾತನ್ನು ಅನುಸರಿಸದೆ ಪ್ರತಿಭಟಿಸಿದ್ದೀರಿ. ಕತ್ತಿಗೆ ತುತ್ತಾಗುವಿರಿ. ಈ ಕಾರಣ ಅವರು ನಿಮ್ಮೊಂದಿಗೆ ಇರುವುದಿಲ್ಲ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ಅಲ್ಲಿ ಅಮಾಲೇಕ್ಯರೂ ಕಾನಾನ್ಯರೂ ನಿಮ್ಮ ಎದುರಿನಲ್ಲಿರುವದರಿಂದ ನೀವು ಅವರ ಕತ್ತಿಯಿಂದ ಸತ್ತೀರಿ; ನೀವು ಯೆಹೋವನ ಮಾತನ್ನು ಅನುಸರಿಸದೆ ತಿರುಗಿಬಿದ್ದ ಕಾರಣ ಆತನು ನಿಮ್ಮೊಂದಿಗೆ ಇರುವದಿಲ್ಲ ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್43 ಅಮಾಲೇಕ್ಯರೂ ಕಾನಾನ್ಯರೂ ನಿಮ್ಮನ್ನು ಎದುರಿಸಲು ಅಲ್ಲಿರುವುದರಿಂದ ನೀವು ಅವರ ಖಡ್ಗದಿಂದ ಸಾಯುವಿರಿ. ನೀವು ಯೆಹೋವನಿಗೆ ವಿರೋಧವಾಗಿ ದಂಗೆಯೆದ್ದ ಕಾರಣ ಆತನು ನಿಮ್ಮೊಂದಿಗೆ ಇರುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
“ಇದಲ್ಲದೆ ನನ್ನ ಮಗ ಸೊಲೊಮೋನನೇ, ನೀನು ನಿನ್ನ ತಂದೆಯ ದೇವರನ್ನು ಅರಿತುಕೊಂಡು, ಪೂರ್ಣಹೃದಯದಿಂದಲೂ, ಪೂರ್ಣಮನಸ್ಸಿನಿಂದಲೂ ದೇವರನ್ನು ಸೇವಿಸು. ಏಕೆಂದರೆ, ಯೆಹೋವ ದೇವರು ಸಕಲ ಹೃದಯಗಳನ್ನು ಪರಿಶೋಧಿಸಿ, ಯೋಚನೆಗಳ ಕಲ್ಪನೆಯನ್ನೆಲ್ಲಾ ತಿಳಿದಿದ್ದಾರೆ. ನೀನು ದೇವರನ್ನು ಹುಡುಕಿದರೆ, ದೇವರು ನಿನಗೆ ಸಿಕ್ಕುವರು. ನೀನು ದೇವರನ್ನು ಬಿಟ್ಟುಬಿಟ್ಟರೆ, ದೇವರು ಸಹ ನಿನ್ನನ್ನು ಎಂದೆಂದಿಗೂ ತೊರೆದುಬಿಡುವರು.