Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:44 - ಕನ್ನಡ ಸಮಕಾಲಿಕ ಅನುವಾದ

44 ಆದರೆ ಅವರು ಹಟಮಾಡಿ, ಬೆಟ್ಟದ ತುದಿಯ ಮೇಲೆ ಏರಿಹೋದರು. ಆದರೆ ಯೆಹೋವ ದೇವರ ಒಡಂಬಡಿಕೆಯ ಮಂಜೂಷವೂ ಮೋಶೆಯೂ ಪಾಳೆಯದಿಂದ ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವಾಗಲಿ ಮೋಶೆಯಾಗಲಿ ಪಾಳೆಯವನ್ನು ಬಿಟ್ಟು ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇಹತ್ತಿದರು. ಸರ್ವೇಶ್ವರನ ಒಡಂಬಡಿಕೆಯಾದ ಮಂಜೂಷವಾಗಲಿ, ಮೋಶೆಯಾಗಲಿ ಪಾಳೆಯನ್ನು ಬಿಟ್ಟು ಹೊರಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

44 ಆದರೂ ಅವರು ಹಟಮಾಡಿ ಆ ಬೆಟ್ಟವನ್ನು ಹತ್ತೇ ಹತ್ತಿದರು. ಯೆಹೋವನ ಒಡಂಬಡಿಕೆಯ ಮಂಜೂಷವು ಮತ್ತು ಮೋಶೆಯು ಪಾಳೆಯವನ್ನು ಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 ಆದರೆ ಜನರು ಮೋಶೆಯ ಮಾತನ್ನು ನಂಬಲಿಲ್ಲ. ಅವರು ಪರ್ವತಪ್ರದೇಶದ ಕಡೆಗೆ ಹೊರಟರು. ಆದರೆ ಮೋಶೆಯೂ ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯೂ ಜನರೊಂದಿಗೆ ಹೋಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:44
6 ತಿಳಿವುಗಳ ಹೋಲಿಕೆ  

ಇದನ್ನು ನಾನು ನಿಮಗೆ ಹೇಳಲಾಗಿ ನೀವು ಕೇಳದೆ, ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದು, ಗರ್ವದಿಂದ ಧೈರ್ಯಮಾಡಿ ಬೆಟ್ಟವನ್ನೇರಿದಿರಿ.


ಮೋಶೆ ಒಂದೊಂದು ಗೋತ್ರದಿಂದ ಸಾವಿರ ಮಂದಿಯಾಗಿರುವ ಅವರನ್ನೂ ಯಾಜಕನಾದ ಎಲಿಯಾಜರನ ಮಗ ಫೀನೆಹಾಸನನ್ನೂ ಪರಿಶುದ್ಧ ಸಲಕರಣೆಗಳ ಸಂಗಡವೂ ಸೂಚಿಸುವದಕ್ಕೋಸ್ಕರ ತುತೂರಿಗಳ ಸಂಗಡವೂ ಯುದ್ಧಕ್ಕೆ ಕಳುಹಿಸಿದನು.


“ ‘ಯಾವನಾದರೂ ಅಂದರೆ ದೇಶದಲ್ಲಿ ಹುಟ್ಟಿದವನಾಗಲಿ, ಪರಕೀಯನಾಗಲಿ ಬೇಕೆಂದು ಪಾಪಮಾಡಿದರೆ, ಅವನು ಯೆಹೋವ ದೇವರನ್ನು ನಿಂದಿಸಿದ್ದಾನೆ. ಆ ಮನುಷ್ಯನನ್ನು ಸ್ವಜನರಿಂದ ತೆಗೆದುಹಾಕಬೇಕು.


ಅವರು ಯೆಹೋವ ದೇವರ ಪರ್ವತದ ಬಳಿಯಿಂದ ಮೂರು ದಿವಸಗಳವರೆಗೆ ಪ್ರಯಾಣಮಾಡಿದರು. ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅವರಿಗೆ ಇಳಿದುಕೊಳ್ಳುವ ಸ್ಥಳವನ್ನು ಹುಡುಕುವುದಕ್ಕೆ ಅವರ ಮೂರು ದಿವಸಗಳ ಪ್ರಯಾಣದಲ್ಲಿ ಅವರ ಮುಂದಾಗಿ ಹೋಯಿತು.


ಅಮಾಲೇಕ್ಯರೂ, ಕಾನಾನ್ಯರೂ ನಿಮ್ಮ ಎದುರಿನಲ್ಲಿರುವುದರಿಂದ ನೀವು ಅವರ ಖಡ್ಗಕ್ಕೆ ತುತ್ತಾಗುವಿರಿ. ನೀವು ಯೆಹೋವ ದೇವರ ಕಡೆಯಿಂದ ತಿರುಗಿದ ಕಾರಣ, ಆತನು ನಿಮ್ಮ ಸಂಗಡ ಇರುವುದಿಲ್ಲ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು