Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:5 - ಕನ್ನಡ ಸಮಕಾಲಿಕ ಅನುವಾದ

5 ಆಗ ಮೋಶೆಯೂ ಆರೋನನೂ ಇಸ್ರಾಯೇಲರ ಸಮಸ್ತ ಜನರ ಕೂಟದ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ಮೋಶೆ ಮತ್ತು ಆರೋನರು ಇಸ್ರಾಯೇಲರ ಸರ್ವಸಮೂಹದವರ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಮೋಶೆ ಮತ್ತು ಆರೋನರು ಇಸ್ರಯೇಲರ ಸರ್ವಸಮೂಹದ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಮೋಶೆ ಆರೋನರು ಇಸ್ರಾಯೇಲ್ಯರ ಸರ್ವಸಮೂಹದವರ ಮುಂದೆ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಮೋಶೆ ಆರೋನರು ಇಸ್ರೇಲರ ಸರ್ವ ಸಮೂಹದವರ ಮುಂದೆ ಬೋರಲಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:5
18 ತಿಳಿವುಗಳ ಹೋಲಿಕೆ  

ಮೋಶೆಯು ಇದನ್ನು ಕೇಳಿದಾಗ, ಬೋರಲು ಬಿದ್ದು,


ಆಗ ಅವರು ಬೋರಲು ಬಿದ್ದು, “ದೇವರೇ, ಎಲ್ಲಾ ಮಾನವರ ಆತ್ಮಗಳ ದೇವರೇ, ಒಬ್ಬ ಮನುಷ್ಯನ ಪಾಪದ ದೆಸೆಯಿಂದ ನೀವು ಸಮಸ್ತ ಸಭೆಯ ಮೇಲೆ ಕೋಪಿಸಿಕೊಳ್ಳುತ್ತೀರೋ?” ಎಂದರು.


“ನೀನು ಈ ಜನರ ಮಧ್ಯದಿಂದ ಎದ್ದು ಬಾ. ನಾನು ಅವರನ್ನು ಕ್ಷಣಮಾತ್ರದಲ್ಲಿ ದಹಿಸಿಬಿಡುತ್ತೇನೆ,” ಎಂದರು. ಆಗ ಅವರಿಬ್ಬರು ಬೋರಲು ಬಿದ್ದರು.


ಅವರು ಹೊಡೆಯುತ್ತಿರುವಾಗ ಅಲ್ಲಿ ಒಂಟಿಗನಾಗಿ ಉಳಿದ ನಾನು ಅಡ್ಡಬಿದ್ದು, “ಅಯ್ಯೋ, ಸಾರ್ವಭೌಮ ಯೆಹೋವ ದೇವರೇ, ನೀವು ಯೆರೂಸಲೇಮಿನ ಮೇಲೆ ನಿಮ್ಮ ಕೋಪಾಗ್ನಿಯನ್ನು ಸುರಿದು, ಇಸ್ರಾಯೇಲರಲ್ಲಿ ಉಳಿದವರನ್ನೆಲ್ಲಾ ನಾಶಮಾಡುವಿರಾ?” ಎಂದೆನು.


ಆಗ ದಾವೀದನು ತನ್ನ ಕಣ್ಣೆತ್ತಿ ಭೂಮಿಗೂ, ಆಕಾಶಕ್ಕೂ ಮಧ್ಯದಲ್ಲಿ ನಿಂತಿರುವ ಯೆಹೋವ ದೇವರ ದೂತನನ್ನು ಕಂಡನು. ಅವನ ಕೈಯಲ್ಲಿ ಯೆರೂಸಲೇಮಿನ ಮೇಲೆ ಚಾಚಿದ್ದ ಹಿರಿದ ಖಡ್ಗ ಇತ್ತು. ಆಗ ದಾವೀದನೂ, ಇಸ್ರಾಯೇಲಿನ ಹಿರಿಯರೂ ಗೋಣಿತಟ್ಟುಗಳನ್ನು ಹೊದ್ದುಕೊಂಡು ಬೋರಲಾಗಿ ಬಿದ್ದರು.


ಅದಕ್ಕೆ ಆತನು, “ನಾನು ಅಂಥವನಲ್ಲ, ಯೆಹೋವ ದೇವರ ಸೈನ್ಯದ ಅಧಿಪತಿಯಾಗಿ ಈಗ ನಾನು ಬಂದಿದ್ದೇನೆ,” ಎಂದನು. ಆಗ ಯೆಹೋಶುವನು ಬೋರಲು ಬಿದ್ದು ಆತನನ್ನು ಆರಾಧಿಸಿ, ಆತನಿಗೆ, “ನನ್ನ ಒಡೆಯಾ, ತಮ್ಮ ಸೇವಕನಿಗೆ ಹೇಳಬೇಕಾಗಿರುವ ಸಂದೇಶವೇನು?” ಎಂದನು.


ಆಗ ಅಲ್ಲಿ ಬೆಂಕಿಯು ಯೆಹೋವ ದೇವರ ಸನ್ನಿಧಿಯಿಂದ ಬಂದು, ಬಲಿಪೀಠದ ಮೇಲಿದ್ದ ದಹನಬಲಿಯನ್ನು ಮತ್ತು ಕೊಬ್ಬನ್ನು ದಹಿಸಿಬಿಟ್ಟಿತು. ಇದನ್ನು ಜನರೆಲ್ಲರೂ ಕಂಡಾಗ, ಅವರು ಆನಂದದಿಂದ ಜಯಘೋಷ ಮಾಡಿ ಅಡ್ಡಬಿದ್ದರು.


ಆಗ ಅಬ್ರಾಮನು ಸಾಷ್ಟಾಂಗ ನಮಸ್ಕಾರಮಾಡಿದನು. ದೇವರು ಅವನ ಸಂಗಡ ಮಾತನಾಡಿದ್ದೇನೆಂದರೆ:


ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,


ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.


ಇಪ್ಪತ್ನಾಲ್ಕು ಮಂದಿ ಹಿರಿಯರು ಸಿಂಹಾಸನದ ಮೇಲೆ ಆಸೀನರಾದವರ ಎದುರಿಗೆ ಅಡ್ಡಬಿದ್ದು ತಮ್ಮ ಕಿರೀಟಗಳನ್ನು ಸಿಂಹಾಸನದ ಮುಂದೆ ಹಾಕಿ,


ಆಮೇಲೆ ಯೇಸು ಸ್ವಲ್ಪ ಮುಂದಕ್ಕೆ ಹೋಗಿ, ಬೋರಲು ಬಿದ್ದು ಪ್ರಾರ್ಥಿಸುತ್ತಾ, “ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ. ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ,” ಎಂದರು.


ಆದರೂ ನಾನು ಆತನ ಮಾತುಗಳ ಧ್ವನಿಯನ್ನು ಕೇಳಿದೆನು. ಆತನ ಮಾತುಗಳ ಧ್ವನಿಯನ್ನು ಕೇಳಿದಾಗ, ಮುಖ ಕೆಳಗೆಮಾಡಿ ಗಾಢನಿದ್ರೆಯಲ್ಲಿದ್ದೆನು. ನನ್ನ ಮುಖ ನೆಲದ ಕಡೆ ಇತ್ತು.


ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.


ಯೆಹೋವ ದೇವರು ಯೆಹೋಶುವನಿಗೆ, “ನೀನು ಎದ್ದೇಳು, ನೀನು ಈ ಪ್ರಕಾರ ಬೋರಲು ಬಿದ್ದಿರುವುದೇನು?


ಇದಲ್ಲದೆ ಕಾನಾನ್ ದೇಶವನ್ನು ಸಂಚರಿಸಿ ನೋಡಿದವರಲ್ಲಿದ್ದ ನೂನನ ಮಗ ಯೆಹೋಶುವನೂ, ಯೆಫುನ್ನೆಯ ಮಗ ಕಾಲೇಬನೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಆಗ ಮೋಶೆ, ಆರೋನನೂ ಜನಸಮೂಹದ ಎದುರಿನಿಂದ ದೇವದರ್ಶನ ಗುಡಾರದ ಬಾಗಿಲಿನೊಳಗೆ ಹೋಗಿ, ಸಾಷ್ಟಾಂಗವೆರಗಿದರು. ಯೆಹೋವ ದೇವರ ಮಹಿಮೆಯು ಅವರಿಗೆ ಕಾಣಬಂತು.


ಯೆಹೋವ ದೇವರು ಮೋಶೆಗೆ, “ಆರೋನನ ಕೋಲನ್ನು ಎದುರು ಬೀಳುವವರಿಗೆ ಗುರುತಾಗಿ ಇಟ್ಟುಕೊಳ್ಳುವುದಕ್ಕೆ ಒಡಂಬಡಿಕೆಯ ಮಂಜೂಷದ ಮುಂದೆ ತಿರುಗಿ ಇಡು. ಗೊಣಗುಟ್ಟುವುದನ್ನು ನೀನು ಸಂಪೂರ್ಣವಾಗಿ ತೆಗೆದುಬಿಡಬೇಕು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು