ಅರಣ್ಯಕಾಂಡ 14:8 - ಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. ಅಧ್ಯಾಯವನ್ನು ನೋಡಿ |
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.