Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 14:9 - ಕನ್ನಡ ಸಮಕಾಲಿಕ ಅನುವಾದ

9 ಆದ್ದರಿಂದ ನೀವಾದರೋ ಯೆಹೋವ ದೇವರಿಗೆ ತಿರುಗಿ ಬೀಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ನುಂಗಿಬಿಡುವೆವು. ಅವರ ಆಶ್ರಯವು ಅವರ ಬಳಿಯಿಂದ ಹೋಯಿತು. ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ, ಅವರಿಗೆ ಭಯಪಡಬೇಡಿರಿ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆದ್ದರಿಂದ ಸರ್ವೇಶ್ವರನಿಗೆ ವಿರುದ್ಧ ದಂಗೆ ಏಳಬೇಡಿ. ಆ ನಾಡಿನ ಜನರಿಗೆ ದಿಗಿಲುಪಡಬೇಡಿ. ಅವರು ನಮಗೆ ತುತ್ತಾಗುವರು. ನಾವು ಪುಷ್ಠಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ. ಸರ್ವೇಶ್ವರ ನಮ್ಮ ಕಡೆ ಇದ್ದಾರೆ. ಅವರಿಗೆ ಭಯಪಡಬೇಡಿ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಹೀಗಿರುವುದರಿಂದ ಯೆಹೋವನಿಗೆ ವಿರುದ್ಧವಾಗಿ ಏಳಬೇಡಿರಿ. ಆ ದೇಶದ ಜನರಿಗೆ ಭಯಪಡಬೇಡಿರಿ. ನಾವು ಅವರನ್ನು ಸೋಲಿಸಬಹುದು. ಅವರಿಗೆ ಯಾವ ಸಂರಕ್ಷಣೆ ಇರುವುದಿಲ್ಲ. ಆದರೆ ನಮ್ಮ ಕಡೆ ಯೆಹೋವನು ಇದ್ದಾನೆ. ಆದ್ದರಿಂದ ಭಯಪಡಬೇಡಿರಿ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 14:9
50 ತಿಳಿವುಗಳ ಹೋಲಿಕೆ  

ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಶಕ್ತಿಶಾಲಿಗಳಾಗಿರಿ, ಧೈರ್ಯವಾಗಿರಿ, ಭಯಪಡಬೇಡಿರಿ, ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ತಾವೇ ನಿಮ್ಮ ಮುಂದೆ ಹೋಗುತ್ತಾರೆ. ಅವರು ನಿಮ್ಮನ್ನು ಕೈಬಿಡುವುದಿಲ್ಲ, ತೊರೆಯುವುದೂ ಇಲ್ಲ.”


ನೀವು ಲಿವ್ಯಾತಾನ ಮೃಗದ ತಲೆಗಳನ್ನು ಬಡೆದಿರಲು ಅದನ್ನು ಮರುಭೂಮಿಯ ಜೀವಜಂತುಗಳಿಗೆ ಆಹಾರವಾಗಿ ಕೊಟ್ಟಿದ್ದೀರಿ.


ನಮಗಾದರೋ ಸಹಾಯ ಮಾಡುವುದಕ್ಕೂ, ನಮ್ಮ ಯುದ್ಧಗಳನ್ನು ನಡಿಸುವುದಕ್ಕೂ ನಮ್ಮ ದೇವರಾದ ಯೆಹೋವ ದೇವರು ತಾವೇ ಇದ್ದಾರೆ,” ಎಂದು ಹೇಳಿದನು. ಆದ್ದರಿಂದ ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳಲ್ಲಿ ಭರವಸೆಯುಳ್ಳವರಾದರು.


ಇದರಲ್ಲಿ ನೀವು ಯುದ್ಧಮಾಡಲು ಅವಶ್ಯವಲ್ಲ. ನೀವು ನೆಲೆಯಾಗಿ ನಿಂತುಕೊಂಡು, ಯೆಹೋವ ದೇವರು ನಿಮಗೆ ಕೊಡುವ ಬಿಡುಗಡೆಯನ್ನು ನೋಡಿರಿ. ಯೆಹೂದದವರೇ, ಯೆರೂಸಲೇಮಿನವರೇ, ಭಯಪಡಬೇಡಿರಿ, ಹೆದರಬೇಡಿರಿ. ಮೂರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ. ಯೆಹೋವ ದೇವರು ನಿಮ್ಮ ಸಂಗಡ ಇದ್ದಾರೆ,” ಎಂದನು.


ಯೆಹೋವ ದೇವರು ತಾವೇ ನಿನ್ನ ಮುಂದೆ ಹೋಗುತ್ತಾರೆ. ಅವರು ನಿನ್ನ ಸಂಗಡ ಇರುವರು, ಅವರು ನಿನ್ನನ್ನು ತೊರೆಯುವುದಿಲ್ಲ, ಮರೆತುಬಿಡುವುದಿಲ್ಲ. ನೀನು ಭಯಪಡಬೇಡ, ಅಂಜಿಕೊಳ್ಳಬೇಡ,” ಎಂದು ಹೇಳಿದನು.


“ದೇವರು ಅವರನ್ನು ಈಜಿಪ್ಟಿನಿಂದ ಹೊರಗೆ ತಂದನು. ಈ ಕಾಡುಕೋಣದಂತೆ ಬಲ ಅವರಿಗೆ ಉಂಟು. ಅವರು ತನ್ನ ವೈರಿಗಳಾಗಿರುವ ಜನಾಂಗಗಳನ್ನು ತಿಂದು, ಅವರ ಎಲುಬುಗಳನ್ನು ಚೂರುಮಾಡಿ, ತಮ್ಮ ಬಾಣಗಳಿಂದ ಗಾಯಮಾಡುವನು.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಯೆಹೋವ ದೇವರು ನಿಮ್ಮನ್ನು ಕಾಪಾಡುವವರಾಗಿದ್ದಾರೆ; ಯೆಹೋವ ದೇವರು ನಿಮ್ಮ ಬಲಗಡೆಯಲ್ಲಿ ನೆರಳಿನಂತೆ ಇದ್ದಾರೆ.


ದುಷ್ಟತ್ವವನ್ನು ನಡೆಸುವವರಿಗೆ ಏನೂ ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ರೊಟ್ಟಿಯಂತೆ ತಿಂದು ಬಿಡುತ್ತಾರೆಯೋ? ಆದರೆ ಅವರು ಯೆಹೋವ ದೇವರಿಗೆ ಎಂದೂ ಮೊರೆಯಿಡುವುದಿಲ್ಲ.


ನೀವು ಮರುಭೂಮಿಯಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡಿಕೊಳ್ಳಿರಿ. ಮರೆಯಬೇಡಿರಿ. ನೀವು ಈಜಿಪ್ಟ್ ದೇಶದಿಂದ ಹೊರಟ ದಿವಸ ಮೊದಲ್ಗೊಂಡು ಈ ಸ್ಥಳಕ್ಕೆ ಬರುವವರೆಗೆ ಯೆಹೋವ ದೇವರಿಗೆ ವಿರೋಧವಾಗಿ ತಿರುಗಿಬೀಳುತ್ತಿದ್ದೀರಿ.


ಆದರೆ ನೀವು ಮೇಲೆ ಹತ್ತಿ ಹೋಗುವುದಕ್ಕೆ ಮನಸ್ಸಿಲ್ಲದೆ ನಿಮ್ಮ ದೇವರಾದ ಯೆಹೋವ ದೇವರ ಅಪ್ಪಣೆಗೆ ತಿರುಗಿಬಿದ್ದಿರಿ.


ನಾವು ಆತನಿಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದರೂ, ನಮ್ಮ ಕರ್ತದೇವರು ಕರುಣೆಯುಳ್ಳವರೂ ಕ್ಷಮಿಸುವವರೂ ಆಗಿದ್ದಾರೆ.


ಸತ್ತವರ ಮತ್ತು ಸೆರೆಯಾದವರ ರಕ್ತದಿಂದಲೂ, ಶತ್ರುವಿಗೆ ಮಾಡಿದ ಪ್ರತೀಕಾರದಿಂದಲೂ ನನ್ನ ಬಾಣಗಳು ಅಮಲೇರುವುದು. ನನ್ನ ಖಡ್ಗವು ಮಾಂಸವನ್ನು ಭಕ್ಷಿಸುವುದು. ಹೀಗೆ ಶತ್ರುಗಳ ನಾಯಕರ ತಲೆ ಬೀಳುವುದು.”


ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.


ನಿಮ್ಮ ದೇವರಾದ ಯೆಹೋವ ದೇವರು ದೇಶವನ್ನು ನಿಮಗೆ ಕೊಟ್ಟಿದ್ದಾರೆ, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ನಿಮಗೆ ಹೇಳಿದ ಪ್ರಕಾರ ಅದನ್ನು ಏರಿ ಸ್ವಾಧೀನಮಾಡಿಕೊಳ್ಳಿರಿ. ಭಯಪಡಬೇಡಿರಿ, ಧೈರ್ಯವಾಗಿರಿ,” ಎಂದೆನು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


“ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ ಅದರ ಶಕ್ತಿಯ ನಿಮಿತ್ತ ನಿಂತುಕೊಂಡರು; ಆದರೆ ಹೆಷ್ಬೋನಿನೊಳಗಿಂದ ಬೆಂಕಿಯೂ, ಸೀಹೋನನ ಮಧ್ಯದಿಂದ ಜ್ವಾಲೆಯೂ ಹೊರಟು ಮೋವಾಬಿನ ಮೂಲೆಯನ್ನೂ, ಗದ್ದಲದ ಮಕ್ಕಳ ನಡುನೆತ್ತಿಯನ್ನೂ ದಹಿಸಿಬಿಡುವುದು.


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಹುಳುವಿನಂತಿರುವ ಯಾಕೋಬೇ, ಪುಟ್ಟ ಇಸ್ರಾಯೇಲೇ, ಭಯಪಡಬೇಡ. ನಾನೇ ನಿನಗೆ ಸಹಾಯ ಮಾಡುತ್ತೇನೆ,” ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾರಲ್ಲಾ!


ನೀನಂತೂ ಹೆದರಬೇಡ, ಏಕೆಂದರೆ ನಾನೇ ನಿನ್ನ ದೇವರು, ನಾನು ನಿನ್ನನ್ನು ಬಲಪಡಿಸುತ್ತೇನೆ. ನಾನು ನಿನಗೆ ಸಹಾಯ ಮಾಡುತ್ತೇನೆ. ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿಹಿಡಿಯುತ್ತೇನೆ.


ಆಗ ಮನುಷ್ಯನು ಗಾಳಿಗೋಸ್ಕರ ಅಡಗಿಕೊಳ್ಳುವಂತೆಯೂ, ಬಿರುಗಾಳಿಗೋಸ್ಕರ ಮರೆಮಾಡಿಕೊಳ್ಳುವಂತೆಯೂ, ಅರಣ್ಯದಲ್ಲಿಯ ನೀರಿನ ಕಾಲುವೆಗಳ ಹಾಗೂ, ಬಾಯಾರಿದ ನಾಡಿಗೆ ದೊಡ್ಡ ಬಂಡೆಯ ನೆರಳಿನ ಹಾಗೆಯೂ ಇರುವನು.


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಮಹೋನ್ನತ ದೇವರ ಆಶ್ರಯದಲ್ಲಿ ವಾಸಿಸುವವರು ಸರ್ವಶಕ್ತರ ನೆರಳಿನಲ್ಲಿ ವಿಶ್ರಮಿಸುವರು.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ; ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಸೇನಾಧೀಶ್ವರ ಯೆಹೋವ ದೇವರು ನಮ್ಮ ಸಂಗಡ ಇದ್ದಾರೆ. ಯಾಕೋಬನ ದೇವರು ನಮಗೆ ಭದ್ರಕೋಟೆಯಾಗಿದ್ದಾರೆ.


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ದೇವರು ತಾವೇ ಅಧಿಪತಿಯಾಗಿ ನಮ್ಮ ಸಂಗಡ ಇದ್ದಾರೆ. ಇದಲ್ಲದೆ ನಿಮಗೆ ವಿರೋಧವಾಗಿ ಜಯಧ್ವನಿ ಮಾಡುವ ತುತೂರಿಗಳನ್ನು ಹಿಡಿದುಕೊಂಡ ಅವರ ಯಾಜಕರು ನಮಗಿದ್ದಾರೆ. ಇಸ್ರಾಯೇಲರೇ, ನೀವು ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಯುದ್ಧಮಾಡಬೇಡಿರಿ. ನೀವು ಜಯಹೊಂದುವುದಿಲ್ಲ,” ಎಂದನು.


ಇದಲ್ಲದೆ ಯೋಸೇಫನ ಮನೆಯವರು ಬೇತೇಲಿಗೆ ಏರಿಹೋದರು. ಯೆಹೋವ ದೇವರು ಅವರ ಸಂಗಡ ಇದ್ದರು.


ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.


ಆಗ ಇಸ್ರಾಯೇಲನು ಯೋಸೇಫನಿಗೆ, “ನಾನು ಸಾಯುತ್ತೇನೆ, ಆದರೆ ದೇವರು ನಿಮ್ಮ ಸಂಗಡವಿದ್ದು, ನಿಮ್ಮನ್ನು ನಿಮ್ಮ ಪಿತೃಗಳ ದೇಶಕ್ಕೆ ಮತ್ತೆ ಸೇರಿಸುವರು.


ನಾವು ಪಾಪಮಾಡಿದ್ದೇವೆ ಮತ್ತು ಅಕ್ರಮಗಳನ್ನು ಮಾಡಿದ್ದೇವೆ. ಕೆಟ್ಟವರಾಗಿ ನಡೆದಿದ್ದೇವೆ ಮತ್ತು ತಿರುಗಿಬಿದ್ದಿದ್ದೇವೆ. ನಿಮ್ಮ ಕಟ್ಟಳೆಗಳನ್ನು ಮತ್ತು ನ್ಯಾಯಗಳನ್ನು ತೊರೆದುಬಿಟ್ಟಿದ್ದೇವೆ.


ಆಗ ನಾನು ನಿಮಗೆ, “ಅಂಜಬೇಡಿರಿ, ಅವರಿಗೆ ಭಯಪಡಬೇಡಿರಿ.


ನಾನು ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು ಶ್ರೇಷ್ಠರಿಗೂ, ಅಧಿಕಾರಸ್ಥರಿಗೂ, ಇತರ ಜನರಿಗೂ ಸಂಬೋಧಿಸಿ, “ನೀವು ಅವರಿಗೋಸ್ಕರ ಭಯಪಡಬೇಡಿರಿ. ದೊಡ್ಡವನಾಗಿಯೂ, ಭಯಂಕರನಾಗಿಯೂ ಇರುವ ಯೆಹೋವ ದೇವರನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಪುತ್ರರಿಗೋಸ್ಕರ, ಪುತ್ರಿಯರಿಗೋಸ್ಕರ, ನಿಮ್ಮ ಹೆಂಡತಿಯರಿಗೋಸ್ಕರ, ನಿಮ್ಮ ಮನೆಗಳಿಗೋಸ್ಕರ ಯುದ್ಧಮಾಡಿರಿ,” ಎಂದೆನು.


ಅವರು ನಿನಗೆ ವಿರೋಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಗೆಲ್ಲುವುದಿಲ್ಲ. ಏಕೆಂದರೆ ನಿನ್ನನ್ನು ತಪ್ಪಿಸುವುದಕ್ಕೆ ನಾನೇ ನಿನ್ನ ಸಂಗಡ ಇದ್ದೇನೆ,” ಇದು ಯೆಹೋವ ದೇವರ ನುಡಿ.


ನೀವು ಭಯಪಡುವ ಬಾಬಿಲೋನಿನ ಅರಸನಿಗೆ ಭಯಪಡಬೇಡಿರಿ; ಅವನಿಗೆ ಭಯಪಡಬೇಡಿರೆಂದು ಯೆಹೋವ ದೇವರು ಹೇಳುತ್ತಾರೆ; ಏಕೆಂದರೆ ನಿಮ್ಮನ್ನು ರಕ್ಷಿಸುವುದಕ್ಕೂ, ಅವನ ಕೈಯಿಂದ ನಿಮ್ಮನ್ನು ತಪ್ಪಿಸುವುದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.


ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.


ನಂತರ ಕಾಲೇಬನು ಮೋಶೆಯ ಎದುರಿನಲ್ಲಿ ಜನರನ್ನು ಸುಮ್ಮನಿರಿಸಿ, “ನಾವು ತಕ್ಷಣವೇ ಏರಿಹೋಗಿ ಅದನ್ನು ಸ್ವಾಧೀನ ಮಾಡಿಕೊಳ್ಳೋಣ. ಏಕೆಂದರೆ ಅದನ್ನು ಜಯಿಸಲು ನಾವು ನಿಜವಾಗಿಯೂ ಶಕ್ತರಾಗಿದ್ದೇವೆ,” ಎಂದನು.


ಹಾಗೆಯೇ ಮೋಶೆಯು ಇಸ್ರಾಯೇಲರ ಸಂಗಡ ಮಾತನಾಡಿದನು. ಅವರ ಪ್ರಧಾನರೆಲ್ಲರೂ ತಮ್ಮ ಪಿತೃಗಳ ಗೋತ್ರಗಳ ಪ್ರಕಾರ ಒಬ್ಬೊಬ್ಬ ಪ್ರಧಾನನಿಗೋಸ್ಕರ ಒಂದೊಂದು ಕೋಲಿನ ಪ್ರಕಾರ ಹನ್ನೆರಡು ಕೋಲುಗಳನ್ನು ಕೊಟ್ಟರು. ಆರೋನನ ಕೋಲು ಸಹ ಅವರ ಕೋಲುಗಳ ಮಧ್ಯದಲ್ಲಿ ಇತ್ತು.


ಆಗ ಜನರಿಗೆ ನೀರು ಇಲ್ಲದೆ ಇರಲಾಗಿ ಅವರು ಮೋಶೆಗೂ ಆರೋನನಿಗೂ ವಿರೋಧವಾಗಿ ಕೂಡಿಕೊಂಡರು.


ಆದ್ದರಿಂದ ಯೆಹೋವ ದೇವರು ಆ ದಿವಸದಲ್ಲಿ ಹೇಳಿದ ಈ ಬೆಟ್ಟವನ್ನು ಈಗ ನನಗೆ ಕೊಡು; ಏಕೆಂದರೆ ಅಲ್ಲಿ ಅನಾಕ್ಯರು ಇದ್ದಾರೆಂದೂ, ಗೋಡೆಗಳುಳ್ಳ ದೊಡ್ಡ ಪಟ್ಟಣಗಳುಂಟೆಂದೂ ನೀನು ಆ ದಿವಸದಲ್ಲಿ ಕೇಳಿದ್ದಿ. ಯೆಹೋವ ದೇವರು ಹೇಳಿದ ಪ್ರಕಾರವೇ ನಾನು ಅವರನ್ನು ಹೊರಡಿಸಲು ಯೆಹೋವ ದೇವರು ನನಗೆ ಸಹಾಯ ಮಾಡುವರೆಂದು ನಂಬಿಕೊಂಡಿದ್ದೇನೆ,” ಎಂದನು.


ಬನ್ನಿರಿ, ಯೆಹೋವ ದೇವರ ಕಾರ್ಯಗಳನ್ನು ನೋಡಿರಿ. ಅವರು ಭೂಮಿಯಲ್ಲಿ ಎಂಥಾ ಅತಿಶಯಗಳನ್ನು ಉಂಟುಮಾಡಿದ್ದಾರೆ.


ಹೌದು, ಇಸ್ರಾಯೇಲರು ಮನೋಹರವಾದ ದೇಶವನ್ನು ಹೀನೈಸಿ, ದೇವರ ಮಾತನ್ನು ನಂಬದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು