Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:14 - ಕನ್ನಡ ಸಮಕಾಲಿಕ ಅನುವಾದ

14 ನಿಮ್ಮ ಸಂಗಡ ಪ್ರಯಾಣ ಮಾಡುವ ಪರದೇಶಿಯಾಗಲಿ ಇಲ್ಲವೆ ನಿಮ್ಮ ಮುಂದಿನ ಸಂತತಿಯವರ ಸಂಗಡ ಇರುವವನಾಗಲಿ, ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಸಮರ್ಪಿಸಿದಾಗ, ನೀವು ಹೇಗೆ ಮಾಡುತ್ತೀರೋ ಹಾಗೆಯೇ ಅವನು ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಅಥವಾ ಇಳಿದುಕೊಂಡಿರುವ ಯಾರೇ ಆಗಲಿ ಯೆಹೋವನಿಗೆ ಸುಗಂಧ ಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಿಮ್ಮ ಮಧ್ಯೆ, ಇಲ್ಲವೆ ನಿಮ್ಮ ಸಂತತಿಯವರ ಮಧ್ಯೆ ವಾಸಿಸುವ ಅನ್ಯದೇಶೀಯನಾಗಲಿ ಪ್ರವಾಸಿಯಾಗಲಿ ಸುಗಂಧ ದಹನಬಲಿಯನ್ನು ಅರ್ಪಿಸಲಾಶಿಸಿದರೆ ನಿಮ್ಮಂತೆಯೇ ಅವನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಿಮ್ಮ ಮಧ್ಯದಲ್ಲಿ ಇಲ್ಲವೆ ನಿಮ್ಮ ಸಂತತಿಯವರ ಮಧ್ಯದಲ್ಲಿ ಒಕ್ಕಲಿರುವ ಅನ್ಯದೇಶದವನಾಗಲಿ ಇಳುಕೊಂಡಿರುವ ಯಾವನೇ ಆಗಲಿ ಯೆಹೋವನಿಗೆ ಸುಗಂಧಹೋಮಮಾಡಬೇಕಾದರೆ ನಿಮ್ಮಂತೆಯೇ ಅವನೂ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಿಮ್ಮ ಮಧ್ಯದಲ್ಲಿ ವಾಸಿಸುವ ವಿದೇಶಿಯರಲ್ಲಿ ಯಾವನೇ ಆಗಲಿ, ಯೆಹೋವನಿಗೆ ಸುಗಂಧಹೋಮ ಮಾಡಬೇಕಾದರೆ ನಿಮ್ಮಂತೆಯೇ ಅವನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:14
5 ತಿಳಿವುಗಳ ಹೋಲಿಕೆ  

“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡಿ ಅವರಿಗೆ ಹೇಳಬೇಕಾದದ್ದು ಇದೇ, ‘ಇಸ್ರಾಯೇಲ್ ಮನೆತನದವರಲ್ಲಿಯಾಗಲಿ, ಇಸ್ರಾಯೇಲರಾದ ಪರಕೀಯರಲ್ಲಿಯಾಗಲಿ ಯಾರಾದರೂ ತಮ್ಮ ಎಲ್ಲಾ ಪ್ರಮಾಣಗಳ ನಿಮಿತ್ತವಾಗಿ ಕಾಣಿಕೆಯನ್ನು ದಹನಬಲಿಯಾಗಿ ಯೆಹೋವ ದೇವರಿಗೆ ಅರ್ಪಿಸುವ ಉಚಿತವಾದ ಅರ್ಪಣೆಗಳಲ್ಲಿ


“ ‘ಯೆಹೋವ ದೇವರಿಗೆ ಸುಗಂಧದ ದಹನಬಲಿಯನ್ನು ಅರ್ಪಿಸುವಾಗ ಸ್ಥಳೀಯ ಮೂಲದ ಇಸ್ರಾಯೇಲರೆಲ್ಲರೂ ಇವುಗಳನ್ನು ಈ ರೀತಿಯಾಗಿಯೇ ಮಾಡಬೇಕು.


ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು.


ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”


ಜನರು ನಿಮ್ಮ ಮಹಾನಾಮವನ್ನೂ, ನಿಮ್ಮ ಬಲವಾದ ಕೈ, ನಿಮ್ಮ ಚಾಚಿದ ತೋಳು ಇವುಗಳ ಕುರಿತು ಕೇಳಿ, ಅವರು ಈ ಆಲಯದ ಕಡೆಗೆ ಬಂದು ಪ್ರಾರ್ಥನೆಮಾಡಿದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು