ಅರಣ್ಯಕಾಂಡ 15:15 - ಕನ್ನಡ ಸಮಕಾಲಿಕ ಅನುವಾದ15 ನಿಮಗೂ ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಕಟ್ಟಳೆ ಇರಬೇಕು. ಯೆಹೋವ ದೇವರ ಎದುರಿನಲ್ಲಿ ನೀವು ಇರುವ ಪ್ರಕಾರ ಪರಕೀಯನೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸರ್ವರಿಗೂ ಅಂದರೆ ನಿಮಗೂ, ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ನಿಯಮವಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ, ಅನ್ಯದೇಶದವನೂ ಸಹ ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶೀಯರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೆ ಮಾತ್ರವಲ್ಲ, ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರಲಿ. ಸರ್ವೇಶ್ವರನ ಸನ್ನಿಧಿಯಲ್ಲಿ ನೀವು ಹೇಗೆ ಇರುವಿರೋ ಹಾಗೆಯೇ ಅನ್ಯದೇಶೀಯನೂ ಇರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸರ್ವರಿಗೂ ಅಂದರೆ ನಿಮಗೂ ನಿಮ್ಮಲ್ಲಿರುವ ಅನ್ಯದೇಶದವರಿಗೂ ಒಂದೇ ವಿಧಿಯಿರಬೇಕು; ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತವಾದ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವು ಹೇಗೋ ಅನ್ಯದೇಶದವನೂ ಹಾಗೆಯೇ ಇರುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನಿಮಗೂ ನಿಮ್ಮಲ್ಲಿರುವ ಪರದೇಶದವರಿಗೂ ಒಂದೇ ವಿಧಿಯಿರಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ. ಯೆಹೋವನ ಸನ್ನಿಧಿಯಲ್ಲಿ ನೀವೂ ಪರದೇಶಿಯರೂ ಒಂದೇ ಆಗಿದ್ದೀರಿ. ಅಧ್ಯಾಯವನ್ನು ನೋಡಿ |
ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.