Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:16 - ಕನ್ನಡ ಸಮಕಾಲಿಕ ಅನುವಾದ

16 ನಿಮಗೂ, ನಿಮ್ಮ ಕೂಡ ಪ್ರಯಾಣ ಮಾಡುವ ಪರಕೀಯನಿಗೂ ಒಂದೇ ಪ್ರಮಾಣವೂ ಒಂದೇ ನ್ಯಾಯವೂ ಇರಬೇಕು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಿಮಗೂ, ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ನಿಯಮಗಳಿರಬೇಕು.’”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನಿಮಗೂ ನಿಮ್ಮಲ್ಲಿ ವಾಸಿಸುವ ವಿದೇಶೀಯನಿಗೂ ಒಂದೇ ವಿಧಿ, ಒಂದೇ ನಿಯಮ ಇರಬೇಕು,’ ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿಮಗೂ ನಿಮ್ಮ ಬಳಿಯಲ್ಲಿ ಒಕ್ಕಲಿರುವ ಅನ್ಯದೇಶದವನಿಗೂ ಒಂದೇ ವಿಧವಾದ ಪ್ರಮಾಣವಿಧಿಗಳಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಿಮಗೂ ನಿಮ್ಮ ಬಳಿಯಲ್ಲಿ ವಾಸಿಸುವ ಪರದೇಶದವನಿಗೂ ಒಂದೇ ವಿಧವಾದ ಪ್ರಮಾಣ ವಿಧಿಗಳಿರಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:16
8 ತಿಳಿವುಗಳ ಹೋಲಿಕೆ  

ಸ್ವದೇಶದಲ್ಲಿ ಹುಟ್ಟಿದವನಿಗೂ, ನಿಮ್ಮಲ್ಲಿ ಪ್ರವಾಸಿಯಾಗಿರುವ ಅನ್ಯನಿಗೂ ಒಂದೇ ನಿಯಮವಿರಲಿ,” ಎಂದು ಹೇಳಿದರು.


ನಿಮಗೆ ಒಂದೇ ವಿಧವಾದ ನಿಯಮವಿರಬೇಕು. ಸ್ವದೇಶಸ್ಥನಿಗೆ ಇರುವಂತೆಯೇ ಪರಕೀಯನಿಗೂ ಇರಬೇಕು. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


“ಪರದೇಶಿಯಾದವನು ನಿಮ್ಮ ಸಂಗಡ ಇದ್ದು, ಯೆಹೋವ ದೇವರಿಗೆ ಪಸ್ಕಹಬ್ಬವನ್ನು ಆಚರಿಸಬೇಕೆಂದು ಬಯಸಿದರೆ, ಅದರ ಆಜ್ಞಾವಿಧಿಗಳ ಪ್ರಕಾರವೇ ಆಚರಿಸಲಿ. ಸ್ಥಳೀಯ ಮೂಲದ ಇಸ್ರಾಯೇಲರಿಗೂ ಮತ್ತು ನಿಮ್ಮ ನಡುವೆ ವಾಸಿಸುವ ಪರದೇಶಸ್ತನಿಗೂ ಒಂದೇ ನಿಯಮ ಇರಬೇಕು,” ಎಂದು ಹೇಳಿದರು.


“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ಕೈತಪ್ಪಿ ಪ್ರಾಣಹತ್ಯೆ ಮಾಡುವವರೆಲ್ಲರೂ, ಅಲ್ಲಿಗೆ ಓಡಿಹೋಗುವುದಕ್ಕೆ ಈ ಆರು ಪಟ್ಟಣಗಳು ಇಸ್ರಾಯೇಲರಿಗೂ, ಪರಕೀಯರಿಗಾಗಿ ಅವರಲ್ಲಿ ವಾಸಮಾಡುವವರಿಗೂ ಆಶ್ರಯಕ್ಕಾಗಿ ಇರಬೇಕು.


ಇಸ್ರಾಯೇಲರೆಲ್ಲರೂ ಅವರ ಹಿರಿಯರೂ ಅವರ ಅಧಿಕಾರಿಗಳೂ ಅವರ ನ್ಯಾಯಾಧಿಪತಿಗಳೂ ಪರದೇಶಸ್ಥರೂ ಸ್ವದೇಶಸ್ಥರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮುಂದೆ ಒಡಂಬಡಿಕೆಯ ಮಂಜೂಷಕ್ಕೆ ಈ ಕಡೆಯೂ ಆ ಕಡೆಯೂ ಅರ್ಧ ಗೆರಿಜೀಮ್ ಪರ್ವತದ ಕಡೆಗೂ ಅರ್ಧ ಏಬಾಲ್ ಪರ್ವತದ ಮುಂದೆಯೂ ನಿಂತರು. ಯೆಹೋವ ದೇವರ ಸೇವಕ ಮೋಶೆ ಇಸ್ರಾಯೇಲರನ್ನು ಆಶೀರ್ವದಿಸುವಂತೆ ಮುಂಚೆ ವಾಕ್ಯಗಳನ್ನು ಕೊಟ್ಟಾಗ ಆಜ್ಞಾಪಿಸಿದ ಹಾಗೆಯೇ ನಿಂತರು.


“ನಿಮ್ಮ ಜನರಾದ ಇಸ್ರಾಯೇಲಿನವನಲ್ಲದೆ ನಿಮ್ಮ ನಾಮದ ನಿಮಿತ್ತ ದೂರದೇಶದಿಂದ ಬಂದ ಪರದೇಶಿಯ ವಿಷಯದಲ್ಲಿ ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು