Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:21 - ಕನ್ನಡ ಸಮಕಾಲಿಕ ಅನುವಾದ

21 ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:21
8 ತಿಳಿವುಗಳ ಹೋಲಿಕೆ  

ಅದು ಆರೋನನಿಗೂ ಅವನ ಪುತ್ರರಿಗೂ ಇಸ್ರಾಯೇಲರ ಕಡೆಯಿಂದ ನಿತ್ಯವಾಗಿ ಕೊಡುವ ಭಾಗವಾಗಿರಬೇಕು. ಏಕೆಂದರೆ ಅದು ನೈವೇದ್ಯವಾಗಿದೆ. ಇಸ್ರಾಯೇಲರ ಸಮಾಧಾನದ ಬಲಿಗಳ ಅರ್ಪಣೆಗಳಿಂದ ಅವರು ಯೆಹೋವ ದೇವರಿಗೆ ನೈವೇದ್ಯ ಮಾಡುವಂಥದ್ದು ಆಗಿರಬೇಕು.


“ನೀನು ಲೇವಿಯರಿಗೆ ಹೇಳಬೇಕಾದದ್ದೇನೆಂದರೆ, ‘ನಿಮಗೆ ಸ್ವಾಸ್ತ್ಯಕ್ಕಾಗಿ ಕೊಟ್ಟ ಹತ್ತನೆಯ ಒಂದು ಪಾಲನ್ನು ಇಸ್ರಾಯೇಲರಿಂದ ನೀವು ತೆಗೆದುಕೊಳ್ಳುವಾಗ ಅದರಲ್ಲಿ ಹತ್ತನೆಯದರಿಂದ ಒಂದು ಪಾಲನ್ನು ಪ್ರತ್ಯೇಕಿಸಿ ಯೆಹೋವ ದೇವರಿಗೆ ಸಮರ್ಪಿಸಬೇಕು.


ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು.


ನೀವು ಕಣದಲ್ಲಿರುವ ಗೋಧಿಯಲ್ಲಿ ಪ್ರಥಮ ಫಲವನ್ನು ಕಾಣಿಕೆಯಾಗಿ ಅರ್ಪಿಸುವಂತೆ ಕಣಕದಿಂದ ಮಾಡುವ ನಿಮ್ಮ ಪ್ರಥಮ ಬೀಸಿದ ಹಿಟ್ಟಿನ ರೊಟ್ಟಿಯನ್ನು ಸಮರ್ಪಿಸಬೇಕು.


“ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,


ಇದಲ್ಲದೆ ಎಲ್ಲಾ ಪ್ರಥಮ ಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸಿದ ಎಲ್ಲಾ ಪದಾರ್ಥಗಳು ಯಾಜಕನದ್ದಾಗಬೇಕು. ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ನೀವು ಯಾಜಕರಿಗೆ ಕೊಡತಕ್ಕದ್ದು.


“ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು. “ಮೇಕೆಯ ಮರಿಯನ್ನು ಅದರ ತಾಯಿಯ ಹಾಲಿನಲ್ಲಿ ಬೇಯಿಸಬಾರದು.


ಇದಲ್ಲದೆ ಲೇವಿಯರು ಹತ್ತರಲ್ಲೊಂದು ಪಾಲನ್ನು ತೆಗೆದುಕೊಳ್ಳುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಲೇವಿಯರ ಸಂಗಡ ಇರಬೇಕು. ಲೇವಿಯರು ಹತ್ತರಲ್ಲೊಂದು ಪಾಲಾದದ್ದರಲ್ಲಿ ಹತ್ತನೆಯ ಪಾಲನ್ನು ತೆಗೆದುಕೊಂಡು ನಮ್ಮ ದೇವರ ಆಲಯದಲ್ಲಿ ಕೊಟ್ಟಡಿಗಳ ಬಳಿಯಿರುವ ಬೊಕ್ಕಸದ ಮನೆಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು