Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:22 - ಕನ್ನಡ ಸಮಕಾಲಿಕ ಅನುವಾದ

22 “ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಕೊಟ್ಟ ಈ ಆಜ್ಞೆಗಳಲ್ಲಿ ಒಂದನ್ನು, ಒಬ್ಬನು ತಿಳಿಯದೆ ಮೀರಿ ನಡೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22-23 ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 “ಯೆಹೋವನು ಮೋಶೆಯ ಮೂಲಕ ಪ್ರಕಟಿಸಿದ ಆಜ್ಞೆಗಳನ್ನು ಅಂದರೆ ಯೆಹೋವನು ಆಜ್ಞೆಯನ್ನು ಕೊಟ್ಟ ದಿನದಿಂದಿಡಿದು ಮುಂದಿನ ಎಲ್ಲಾ ಕಾಲದಲ್ಲಿ ನೀವು ತಿಳಿಯದೆ ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿದರೆ ಹೀಗೆ ಮಾಡಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:22
10 ತಿಳಿವುಗಳ ಹೋಲಿಕೆ  

“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


ದಂಡನೆಗೆ ಯೋಗ್ಯವಾದದ್ದನ್ನು ತಿಳಿಯದೆ ಮಾಡಿದವನು ಸ್ವಲ್ಪ ಪೆಟ್ಟುಗಳಿಗೆ ಗುರಿಯಾಗುವನು. ಯಾವನಿಗೆ ಹೆಚ್ಚು ಕೊಡಲಾಗಿದೆಯೋ, ಅವನಿಂದ ಹೆಚ್ಚು ಕೇಳಲಾಗುವುದು; ಯಾವನಿಗೆ ಹೆಚ್ಚಾಗಿ ಒಪ್ಪಿಸಿರುವುದೋ, ಅವನಿಂದ ಹೆಚ್ಚಾಗಿಯೇ ಕೇಳಲಾಗುವುದು.”


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಇವುಗಳಲ್ಲಿ ಒಂದನ್ನು ಪಾಪದ ವಿಷಯವಾಗಿ ಯಾಜಕನು ಅವನಿಗೋಸ್ಕರ ಪ್ರಾಯಶ್ಚಿತ್ತ ಮಾಡಬೇಕು. ಆಗ ಅದು ಅವನಿಗೆ ಕ್ಷಮಿಸಲಾಗುವುದು. ಉಳಿದದ್ದು ಯಾಜಕನಿಗಾಗಿ ಧಾನ್ಯ ಸಮರ್ಪಣೆಯಾಗಿರುವುದು.’ ”


“ ‘ಸಾಮಾನ್ಯ ಜನರಲ್ಲಿ ಯಾವನಾದರೂ ಮಾಡಬಾರದವುಗಳನ್ನು ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


“ ‘ಒಬ್ಬ ಅಧಿಪತಿಯು ದೇವರಾದ ಯೆಹೋವ ದೇವರ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಪಾಪಮಾಡಿ ಅಪರಾಧಿಯಾಗಿದ್ದರೆ,


ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು.


ನಿಮಗೆ ಆಜ್ಞೆಗಳನ್ನು ಕೊಟ್ಟ ದಿವಸ ಮೊದಲುಗೊಂಡು, ನಿಮ್ಮ ಸಂತತಿಗಳವರೆಗೂ ಯೆಹೋವ ದೇವರು ಮೋಶೆಯ ಕೈಯಿಂದ ನಿಮಗೆ ಆಜ್ಞಾಪಿಸಿದ ಪ್ರಕಾರ ನೀವು ಮಾಡದೆ ಹೋದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು