Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:28 - ಕನ್ನಡ ಸಮಕಾಲಿಕ ಅನುವಾದ

28 ತಿಳಿಯದೆ ಪಾಪ ಮಾಡಿದವನಿಗೋಸ್ಕರ ಯಾಜಕನು ಯೆಹೋವ ದೇವರ ಮುಂದೆ ಪ್ರಾಯಶ್ಚಿತ್ತ ಮಾಡಬೇಕು. ಅದು ಪಾಪಕ್ಷಮಾಪಣೆಯಾಗುವ ಹಾಗೆ ಅದಕ್ಕೋಸ್ಕರ ಪ್ರಾಯಶ್ಚಿತ್ತ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತಿಳಿಯದೆ ತಪ್ಪು ಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ತಿಳಿಯದೆ ತಪ್ಪುಮಾಡಿದ ಅಂಥವನ ಪರವಾಗಿ ಯಾಜಕನು ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ವಿಧಿಯನ್ನು ನೆರವೇರಿಸಿದರೆ ಅವನಿಗೆ ಕ್ಷಮೆ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತಿಳಿಯದೆ ತಪ್ಪುಮಾಡಿದವನಿಗೋಸ್ಕರ ಯಾಜಕನು ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡಿದಾಗ ಅವನಿಗೆ ಕ್ಷಮಾಪಣೆಯಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆಗ ಯಾಜಕನು ನಿರುದ್ದೇಶದಿಂದ ತಪ್ಪುಮಾಡಿದವನ ಕ್ಷಮಾಪಣೆಗಾಗಿ ಯೆಹೋವನ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:28
5 ತಿಳಿವುಗಳ ಹೋಲಿಕೆ  

ಇದಲ್ಲದೆ ಸಮಾಧಾನ ಬಲಿಗಳ ಕುರಿಮರಿಯ ಕೊಬ್ಬಿನಂತೆಯೇ, ಅದರ ಎಲ್ಲಾ ಕೊಬ್ಬನ್ನೂ ತೆಗೆಯಬೇಕು. ಯಾಜಕನು ಬೆಂಕಿಯ ಸಮರ್ಪಣೆಗಳನ್ನು ಯೆಹೋವ ದೇವರಿಗೆ ಮಾಡಿದಂತೆಯೇ, ಬಲಿಪೀಠದ ಮೇಲೆ ಅವುಗಳನ್ನು ಸುಡಬೇಕು. ಯಾಜಕನು ಅವನು ಮಾಡಿದ ಪಾಪಕ್ಕೆ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವನಿಗೆ ಕ್ಷಮಾಪಣೆಯಾಗುವುದು.


“ಇಸ್ರಾಯೇಲರಿಗೆ ಹೀಗೆ ಹೇಳು: ‘ಯಾರಾದರೂ ಉದ್ದೇಶವಿಲ್ಲದೆ ಪಾಪಮಾಡಿದರೆ ಹಾಗೂ ಯೆಹೋವ ದೇವರ ಆಜ್ಞೆಗಳಲ್ಲಿ ನಿಷೇಧಿಸಿದ ಯಾವುದನ್ನಾದರೂ ಮಾಡಿದರೆ, ಅವರು ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಕೈಗೊಳ್ಳಬೇಕು:


ಪಾಪ ಪರಿಹಾರದ ಬಲಿಗಾಗಿ ಇರುವ ಆ ಹೋರಿಗೆ ಮಾಡಿದಂತೆಯೇ, ಈ ಹೋರಿಗೂ ಮಾಡಬೇಕು. ಇದಲ್ಲದೆ ಯಾಜಕನು ಅವರಿಗಾಗಿ ಪ್ರಾಯಶ್ಚಿತ್ತ ಮಾಡಬೇಕು, ಆಗ ಅವರಿಗೆ ಕ್ಷಮಾಪಣೆಯಾಗುವುದು.


ಯಾಜಕನ ಕೈಯಲ್ಲಿರುವ ಉಳಿದ ಆ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯಬೇಕು. ಯಾಜಕನು ಅವನಿಗಾಗಿ ಯೆಹೋವ ದೇವರ ಎದುರಿನಲ್ಲಿ ಪ್ರಾಯಶ್ಚಿತ್ತ ಮಾಡಬೇಕು.


ಸ್ಥಳೀಯ ಮೂಲದ ಇಸ್ರಾಯೇಲರಿಗೂ ಅವರಲ್ಲಿ ಪ್ರವಾಸಿಯಾಗಿರುವ ಪರಕೀಯನಿಗೂ ತಿಳಿಯದೆ ಪಾಪಮಾಡಿದವನಿಗೂ ಒಂದೇ ನಿಯಮ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು