Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:36 - ಕನ್ನಡ ಸಮಕಾಲಿಕ ಅನುವಾದ

36 ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡುಕೊಂಡುಹೋಗಿ ಕಲ್ಲೆಸೆದು ಕೊಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:36
6 ತಿಳಿವುಗಳ ಹೋಲಿಕೆ  

ಆಗ ಯೆಹೋಶುವನು ಅವನಿಗೆ, “ನೀನು ನಮ್ಮನ್ನು ಸಂಕಷ್ಟಪಡಿಸಿದ್ದೇನು? ಇಂದು ಯೆಹೋವ ದೇವರು ನಿನ್ನನ್ನು ಸಂಕಷ್ಟಪಡಿಸುವರು,” ಎಂದನು. ಆಗ ಇಸ್ರಾಯೇಲರೆಲ್ಲರೂ ಅವನ ಮೇಲೆ ಕಲ್ಲೆಸೆದರು. ಕಲ್ಲೆಸೆದ ತರುವಾಯ ಉಳಿದವರನ್ನು ಬೆಂಕಿಯಿಂದ ಸುಟ್ಟುಬಿಟ್ಟು,


“ನೀನು ಇಸ್ರಾಯೇಲರಿಗೆ ಹೀಗೆ ಹೇಳಬೇಕು: ‘ಇಸ್ರಾಯೇಲರಲ್ಲಿಯಾಗಲಿ, ಇಸ್ರಾಯೇಲಿನಲ್ಲಿ ಪ್ರವಾಸಿಯಾದ ಪರಕೀಯರಲ್ಲಿಯಾಗಲಿ ಯಾವನಾದರೂ ತನ್ನ ಸಂತತಿಯನ್ನು ಮೋಲೆಕನಿಗೆ ಕೊಟ್ಟರೆ, ನಿಶ್ಚಯವಾಗಿ ಅವನಿಗೆ ಮರಣವನ್ನು ವಿಧಿಸಬೇಕು. ದೇಶದ ಜನರು ಅವನಿಗೆ ಕಲ್ಲೆಸೆಯಬೇಕು.


ಆಗ ಯೆಹೋವ ದೇವರು ಮೋಶೆಗೆ, “ಆ ಮನುಷ್ಯನು ಖಂಡಿತವಾಗಿಯೂ ಸಾಯಲೇಬೇಕು, ಸಭೆಯೆಲ್ಲಾ ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕು,” ಎಂದರು.


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು