Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:40 - ಕನ್ನಡ ಸಮಕಾಲಿಕ ಅನುವಾದ

40 ನೀವು ನನ್ನ ಆಜ್ಞೆಗಳನ್ನೆಲ್ಲಾ ನೆನಸಿ, ಅವುಗಳ ಪ್ರಕಾರಮಾಡಿ, ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ದಾರಿ ತಪ್ಪಿ ನಡೆದ ಪ್ರಕಾರ ಇನ್ನು ಮುಂದೆ ನಡೆಯದೆ, ನನ್ನ ಆಜ್ಞೆಗಳನ್ನೆಲ್ಲಾ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಈಗ ನನ್ನ ಆಜ್ಞೆಗಳನ್ನೇ ಗಮನದಲ್ಲಿಟ್ಟು ಅವುಗಳನ್ನು ಅನುಸರಿಸಬೇಕು. ಹೀಗೆ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನನ್ನ ಆಜ್ಞೆಗಳನ್ನೇ ಲಕ್ಷಿಸಿ ಅನುಸರಿಸಿ ನಿಮ್ಮ ದೇವರಿಗೇ ಪ್ರತಿಷ್ಠಿತರಾಗಿರಬೇಕೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನೀವು ನನ್ನ ಎಲ್ಲಾ ಆಜ್ಞೆಗಳನ್ನು ಜ್ಞಾಪಿಸಿಕೊಂಡು ವಿಧೇಯರಾಗಿರಬೇಕು. ಆಗ ನೀವು ನಿಮ್ಮ ದೇವರ ವಿಶೇಷವಾದ ಜನರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:40
10 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಿಯರೇ ದೇವರ ಕರುಣೆಯಿಂದ ಬೇಡಿಕೊಳ್ಳುವುದೇನೆಂದರೆ, ನೀವು ನಿಮ್ಮ ದೇಹಗಳನ್ನು ದೇವರಿಗೆ ಪರಿಶುದ್ಧವೂ ಮೆಚ್ಚುಗೆಯೂ ಆಗಿರುವ ಸಜೀವ ಯಜ್ಞವಾಗಿ ಸಮರ್ಪಿಸಿರಿ. ಇದೇ ನಿಮ್ಮ ವಿವೇಕ ಪೂರ್ವಕವಾದ ಆರಾಧನೆಯು.


ದೇವರು ನಮ್ಮನ್ನು ಅಶುದ್ಧತೆಗೆ ಕರೆಯದೆ ಪವಿತ್ರ ಜೀವನವನ್ನು ಜೀವಿಸಲು ಕರೆದಿದ್ದಾರೆ.


ಕ್ರಿಸ್ತನಲ್ಲಿರುವ ಕೊಲೊಸ್ಸೆಯ ದೇವರ ಪರಿಶುದ್ಧರಿಗೆ ಮತ್ತು ನಂಬಿಗಸ್ತರಾದ ಸಹೋದರ ಸಹೋದರಿಯರಿಗೆ: ನಮ್ಮ ತಂದೆಯಾದ ದೇವರಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ನಾವು ಪ್ರೀತಿಯಲ್ಲಿದ್ದು ಅವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರಬೇಕೆಂದು ಅವರು ಲೋಕದ ಅಸ್ತಿವಾರಕ್ಕೆ ಮುಂಚೆ ನಮ್ಮನ್ನು ಕ್ರಿಸ್ತನಲ್ಲಿ ಆರಿಸಿಕೊಂಡರು.


“ಇಸ್ರಾಯೇಲರ ಸಭೆಯವರೆಲ್ಲರ ಸಂಗಡ ಮಾತನಾಡಿ, ಅವರಿಗೆ ಹೀಗೆ ಹೇಳಬೇಕು: ‘ನೀವು ಪರಿಶುದ್ಧರಾಗಿರಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರಾದ ನಾನು ಪರಿಶುದ್ಧನಾಗಿದ್ದೇನೆ.


“ಆದ್ದರಿಂದ ನೀವು ನನ್ನ ಆಜ್ಞೆಗಳನ್ನು ಕೈಗೊಂಡು ಅವುಗಳನ್ನು ಮಾಡಬೇಕು. ನಾನೇ ಯೆಹೋವ ದೇವರು.


ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ದೇವರ ಒಡಂಬಡಿಕೆಯನ್ನು ಕೈಕೊಂಡು, ಅವರ ಸೂತ್ರಗಳನ್ನು ಪಾಲಿಸಲು ನೆನಸುವವರಿಗೂ ಅವರ ನೀತಿಯು ನೆಲೆಸಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು