Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:7 - ಕನ್ನಡ ಸಮಕಾಲಿಕ ಅನುವಾದ

7 ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಪಾನದ್ರವ್ಯವಾಗಿ ಯೆಹೋವನಿಗೆ ಸುವಾಸನೆಯಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮತ್ತು ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಪಾನದ್ರವ್ಯವಾಗಿ ಎರಡು ಸೇರು ದ್ರಾಕ್ಷಾರಸವನ್ನೂ ತಂದು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಪಾನದ್ರವ್ಯಕ್ಕಾಗಿ ಎರಡು ಸೇರು ದ್ರಾಕ್ಷಾರಸವನ್ನೂ ಸಮರ್ಪಿಸಬೇಕು. ಅದು ಯೆಹೋವನಿಗೆ ಸುವಾಸನೆಯನ್ನು ಉಂಟುಮಾಡುವ ಯಜ್ಞವಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:7
8 ತಿಳಿವುಗಳ ಹೋಲಿಕೆ  

“ ‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು.


“ ‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,


ಒಂದು ಲೀಟರ್ ಕುಟ್ಟಿ ತೆಗೆದ ಓಲಿವ್ ಎಣ್ಣೆಯನ್ನು ಸುಮಾರು ಒಂದುವರೆ ಕಿಲೋಗ್ರಾಂ ಗೋಧಿಹಿಟ್ಟಿಗೆ ಬೆರೆಸಿ, ಒಂದು ಲೀಟರ್ ದ್ರಾಕ್ಷಾರಸವನ್ನು ಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಮೇತ ಹೋಮ ಮಾಡಬೇಕು.


ಎಣ್ಣೆ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿಯಿಲ್ಲದ ರೊಟ್ಟಿಗಳ ಒಂದು ಬುಟ್ಟಿಯನ್ನೂ, ಎಣ್ಣೆ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ, ಧಾನ್ಯದ್ರವ್ಯ ಪಾನದ್ರವ್ಯ ಇವುಗಳನ್ನೆಲ್ಲಾ ಅರ್ಪಣೆಯಾಗಿ ತರಬೇಕು.


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’


ಒಂದು ಕುರಿಮರಿಯೊಂದಿಗೆ ಪರಿಶುದ್ಧ ಸ್ಥಳದಲ್ಲಿ ಒಂದು ಲೀಟರ್ ಹುದುಗಿದ ದ್ರಾಕ್ಷಾರಸದ ಪಾನದ ಅರ್ಪಣೆಯನ್ನು ಯೆಹೋವ ದೇವರಿಗೋಸ್ಕರ ಸುರಿಯಬೇಕು.


“ಆದರೆ ದ್ರಾಕ್ಷಿ ಗಿಡವು ಅವುಗಳಿಗೆ, ‘ದೇವರನ್ನೂ, ಮನುಷ್ಯನನ್ನೂ ಸಂತೋಷಪಡಿಸುವ ನನ್ನ ರಸವನ್ನು ನಾನು ಬಿಟ್ಟು, ಮರಗಳ ಮೇಲೆ ಅಧಿಕಾರಿಯಾಗಿ ಹೋಗುವೆನೋ?’ ಎಂದಿತು.


ಮಾರನೆಯ ದಿವಸದಲ್ಲಿ ಅವರು ಯೆಹೋವ ದೇವರಿಗೆ ಬಲಿಗಳನ್ನು ವಧಿಸಿ, ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸಿದರು. ಸಾವಿರ ಹೋರಿಗಳನ್ನೂ, ಸಾವಿರ ಟಗರುಗಳನ್ನೂ, ಸಾವಿರ ಕುರಿಮರಿಗಳನ್ನೂ, ಅವುಗಳ ಪಾನದ ಅರ್ಪಣೆಗಳನ್ನೂ, ಸಮಸ್ತ ಇಸ್ರಾಯೇಲರಿಗೋಸ್ಕರ ಬಹಳವಾಗಿ ಬಲಿಗಳನ್ನು ಅರ್ಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು