Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:8 - ಕನ್ನಡ ಸಮಕಾಲಿಕ ಅನುವಾದ

8 “ ‘ನೀನು ಯೆಹೋವ ದೇವರಿಗೆ ದಹನಬಲಿಗಾಗಿ ಇಲ್ಲವೆ ಪ್ರಮಾಣವನ್ನು ಈಡೇರಿಸುವ ಬಲಿಗಾಗಿ ಇಲ್ಲವೆ ಸಮಾಧಾನದ ಬಲಿಗಳಿಗಾಗಿ ಹೋರಿಯನ್ನು ನೀನು ಸಿದ್ಧಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ನೀನು ಸರ್ವಾಂಗಹೋಮ, ಹರಕೆಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ ಹೋರಿಯನ್ನು ಯೆಹೋವನಿಗೆ ದಹನ ಬಲಿಗಾಗಿ ಸಿದ್ಧಮಾಡುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ‘ನೀವು ಅರ್ಪಿಸುವಂಥದ್ದು ಹೋರಿಯಾಗಿದ್ದರೆ, ಅದು ಸರ್ವಾಂಗಹೋಮವೇ ಆಗಿರಲಿ ಅಥವಾ ಹರಕೆಯ ಹಾಗೂ ಬೇರೆ ವಿಧವಾದ ಬಲಿಯೇ ಆಗಿರಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಸರ್ವಾಂಗಹೋಮ, ಹರಕೆ ಸಲ್ಲಿಸುವ ಯಜ್ಞ, ಬೇರೆ ವಿಧವಾದ ಸಮಾಧಾನಯಜ್ಞ ಇವುಗಳಿಗಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ನಿಮ್ಮಲ್ಲಿ ಎಳೆಹೋರಿಯನ್ನು ಯೆಹೋವನಿಗೆ ಸರ್ವಾಂಗಹೋಮವನ್ನಾಗಲಿ ಹರಕೆಯ ಯಜ್ಞವನ್ನಾಗಲಿ ಸಮಾಧಾನಯಜ್ಞವನ್ನಾಗಲಿ ಅರ್ಪಿಸುವವನು

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:8
10 ತಿಳಿವುಗಳ ಹೋಲಿಕೆ  

“ ‘ಯಾರಾದರು ಸಮಾಧಾನ ಸಮರ್ಪಣೆಗಾಗಿ ಬಲಿದಾನ ಮಾಡಬೇಕಾದರೆ, ಅಂಥವನು ಸಮರ್ಪಿಸುವ ಪ್ರಾಣಿ ದನಕರುವಾಗಿದ್ದಲ್ಲಿ, ಅದು ಗಂಡಾಗಿರಲಿ ಅಥವಾ ಹೆಣ್ಣಾಗಿರಲಿ ಯೆಹೋವ ದೇವರ ದೃಷ್ಟಿಯಲ್ಲಿ ಕಳಂಕರಹಿತವಾಗಿರಬೇಕು.


“ ‘ಅಂಥವನು ದನಕರುಗಳನ್ನು ದಹನಬಲಿಯನ್ನಾಗಿ ಸಮರ್ಪಿಸುವುದಾದರೆ, ಆ ಪ್ರಾಣಿ ಕಳಂಕರಹಿತವಾದ ಗಂಡಾಗಿರಬೇಕು. ಯೆಹೋವ ದೇವರಿಗೆ ಒಪ್ಪಿಗೆಯಾಗುವಂತೆ ಅದನ್ನು ದೇವದರ್ಶನದ ಗುಡಾರದ ಬಳಿಗೆ ತರಬೇಕು.


ಅದರ ಕರುಳುಗಳನ್ನೂ, ಕಾಲುಗಳನ್ನೂ ಅವರು ನೀರಿನಲ್ಲಿ ತೊಳೆಯಬೇಕು. ಯಾಜಕನು ಎಲ್ಲವನ್ನೂ ಬಲಿಪೀಠದ ಮೇಲೆ ಬೆಂಕಿಯಿಂದ ಸಮರ್ಪಿಸುವ ದಹನಬಲಿಯಂತೆಯೂ, ಯೆಹೋವ ದೇವರಿಗೆ ಸುವಾಸನೆಯಾಗುವಂತೆಯೂ ಸುಡಬೇಕು.


ಆರೋನನ ಪುತ್ರರು ಅದನ್ನು ಬಲಿಪೀಠದಲ್ಲಿ ಬೆಂಕಿಯ ಮೇಲಿರುವ ಕಟ್ಟಿಗೆಯ ಮೇಲೆ ದಹನಬಲಿಯಾಗಿ ಸುಡಬೇಕು. ಅದು ಬೆಂಕಿಯಿಂದ ಮಾಡಿದ ಕಾಣಿಕೆಯಾಗಿದ್ದು, ಯೆಹೋವ ದೇವರಿಗೆ ಸುವಾಸನೆಯಾಗಿರುವುದು.


ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು.


ಅವರು ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು, ಅದರೊಂದಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರೆಸಿದ ನಯವಾದ ಹಿಟ್ಟನ್ನು ತೆಗೆದುಕೊಳ್ಳಬೇಕು. ದೋಷಪರಿಹಾರಕ ಬಲಿಗಾಗಿ ಮತ್ತೊಂದು ಹೋರಿಯನ್ನೂ ನೀನು ತೆಗೆದುಕೋ.


ಪಾನದ ಸಮರ್ಪಣೆಯಾಗಿ ಯೆಹೋವ ದೇವರಿಗೆ ಸುವಾಸನೆಗಾಗಿ ಒಂದು ಲೀಟರ್ ದ್ರಾಕ್ಷಾರಸವನ್ನು ಅರ್ಪಿಸಬೇಕು.


ನೀವು ಆ ಹೋರಿಯೊಂದಿಗೆ ಧಾನ್ಯ ಸಮರ್ಪಣೆಯಾಗಿ ಸುಮಾರು ಎರಡು ಲೀಟರ್ ಓಲಿವ್ ಎಣ್ಣೆ ಬೆರೆಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು ಅರ್ಪಿಸಬೇಕು.


ಅದು ಸಭೆಗೆ ತಿಳಿಯದೆ ತಪ್ಪು ಆಗಿರುವ ಪಕ್ಷದಲ್ಲಿ, ಸಭೆಯು ಯೆಹೋವ ದೇವರಿಗೆ ಸುವಾಸನೆಯಾದ ದಹನಬಲಿಗಾಗಿ ಒಂದು ಎಳೆಯ ಹೋರಿಯನ್ನು ಕ್ರಮದ ಪ್ರಕಾರ ಅದರ ಧಾನ್ಯ ಸಮರ್ಪಣೆಯನ್ನೂ, ಪಾನದ ಸಮರ್ಪಣೆಯನ್ನೂ, ಪಾಪ ಪರಿಹಾರಕ ಬಲಿಯಾಗಿ ಮೇಕೆಗಳಿಂದ ಒಂದು ಹೋತವನ್ನೂ ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು