Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 16:1 - ಕನ್ನಡ ಸಮಕಾಲಿಕ ಅನುವಾದ

1 ಆಗ ಲೇವಿಯ ಮಗನಾದ ಕೊಹಾತನ ಮೊಮ್ಮಗ ಇಚ್ಹಾರನ ಮಗ ಕೋರಹನೂ ರೂಬೇನ್ ಗೋತ್ರದವರಾದ ಎಲೀಯಾಬನ ಮಕ್ಕಳಾದ ದಾತಾನನೂ ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ ಜನರನ್ನು ತೆಗೆದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಲೇವಿಯನ ಮರಿಮಗನೂ, ಕೆಹಾತನ ಮೊಮ್ಮಗನೂ, ಇಚ್ಚಾರನ ಮಗನೂ ಆದ ಕೋರಹನು ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನನೂ, ಅಬೀರಾಮನೂ ಮತ್ತು ಪೆಲೆತನ ಮಗನಾದ ಓನನೂ, ಕೆಲವು ಜನರನ್ನು ಕೂಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಚಾರನ ಮಗನೂ ಆದ ಕೋರಹ ಮತ್ತು ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಹಾಗೂ ಅಬೀರಾಮ್ ಮತ್ತು ಪೆಲೆತನ ಮಗ ಓನ್ - ಇವರು ಮೋಶೆಗೆ ವಿರುದ್ಧ ಪ್ರತಿಭಟಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಲೇವಿಯ ಮರಿಮಗನೂ ಕೆಹಾತನ ಮೊಮ್ಮಗನೂ ಇಚ್ಹಾರನ ಮಗನೂ ಆದ ಕೋರಹನೂ - ಅವನಲ್ಲದೆ ರೂಬೇನ್ ಕುಲದವರಲ್ಲಿ ಎಲೀಯಾಬನ ಮಕ್ಕಳಾದ ದಾತಾನ್ ಅಬೀರಾಮರೂ ಪೆಲೆತನ ಮಗನಾದ ಓನನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೋರಹ, ದಾತಾನ್, ಅಬೀರಾಮ್ ಮತ್ತು ಓನ್ ಎಂಬವರು ಮೋಶೆಗೆ ವಿರುದ್ಧವಾಗಿ ಎದ್ದರು. (ಕೋರಹನು ಇಚ್ಹಾರನ ಮಗನು, ಇಚ್ಹಾರನು ಕೆಹಾತನ ಮಗನು. ಕೆಹಾತನು ಲೇವಿಯ ಮಗನು. ದಾತಾನ್ ಮತ್ತು ಅಬೀರಾಮ್ ಇವರು ಎಲೀಯಾಬನ ಗಂಡುಮಕ್ಕಳು ಮತ್ತು ಓನನು ಪೆಲೆತನ ಮಗನು. ದಾತಾನ್, ಅಬೀರಾಮ್ ಮತ್ತು ಓನ್ ಇವರು ರೂಬೇನನ ಸಂತತಿಯವರು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 16:1
11 ತಿಳಿವುಗಳ ಹೋಲಿಕೆ  

ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ರೂಬೇನನ ಮಗ ಎಲೀಯಾಬನ ಪುತ್ರರಾಗಿರುವ ದಾತಾನ್, ಅಬೀರಾಮರು ದಂಗೆಯೆದ್ದಾಗ, ಭೂಮಿಯು ಬಾಯಿತೆರೆದು ಅವರ ಮನೆಗಳನ್ನೂ, ಅವರಿಗಿದ್ದ ಎಲ್ಲಾ ಆಸ್ತಿಯನ್ನೂ, ಮನೆಯವರನ್ನೂ ಡೇರೆಗಳನ್ನೂ ಅವರಿಗೆ ಸೇರಿದ ಎಲ್ಲಾ ಪಶುಪ್ರಾಣಿಗಳನ್ನೂ, ಸಮಸ್ತ ಇಸ್ರಾಯೇಲರ ಮಧ್ಯದಲ್ಲಿ ಹೇಗೆ ನುಂಗುವಂತೆ ದೇವರು ಮಾಡಿದರೆಂಬುದನ್ನೂ ಜ್ಞಾಪಕಮಾಡಿಕೊಳ್ಳಿರಿ.


ಇಚ್ಹಾರನ ಪುತ್ರರು: ಕೋರಹ, ನೆಫೆಗ್ ಮತ್ತು ಜಿಕ್ರಿ.


“ನಮ್ಮ ತಂದೆಯು ಮರುಭೂಮಿಯಲ್ಲಿ ಸತ್ತನು. ಅವನು ಕೋರಹನ ಗುಂಪಿನಲ್ಲಿ ಯೆಹೋವ ದೇವರಿಗೆ ವಿರೋಧವಾಗಿ ಕೂಡಿಕೊಂಡವರ ಗುಂಪಿನೊಳಗಿರದೆ, ತನ್ನ ಪಾಪದಲ್ಲಿಯೇ ಸತ್ತನು. ಅವನಿಗೆ ಪುತ್ರರು ಇರಲಿಲ್ಲ.


ಕೊಹಾತನ ಪುತ್ರರು: ಅಮ್ರಾಮ್, ಇಚ್ಹಾರ್, ಹೆಬ್ರೋನ್, ಉಜ್ಜೀಯೇಲ್. ಕೊಹಾತನು ಜೀವಿಸಿದ ವರ್ಷಗಳು ನೂರಮೂವತ್ತಮೂರು.


ನಾನು ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ತಂದ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಇಸ್ರಾಯೇಲರು ಪಾಳೆಯದಲ್ಲಿ ಮೋಶೆಯ ಮೇಲೆಯೂ, ಯೆಹೋವ ದೇವರಿಗೆ ಪ್ರತಿಷ್ಠಿತನಾದ ಆರೋನನ ಮೇಲೆಯೂ ಹೊಟ್ಟೆಕಿಚ್ಚುಪಟ್ಟರು.


ತಮ್ಮ ತಮ್ಮ ವಂಶಾವಳಿಗಳ ಪ್ರಕಾರವಾಗಿರುವ ಲೇವಿಯ ಪುತ್ರರ ಹೆಸರುಗಳು: ಗೇರ್ಷೋನ್, ಕೊಹಾತ್, ಮೆರಾರೀ. ಲೇವಿಯು ನೂರಮೂವತ್ತೇಳು ವರ್ಷಗಳವರೆಗೆ ಬದುಕಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು